Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್‌ಸಾಬ್ ದೋಟಿಹಾಳ ನೇಮಕ
Team Udayavani, Mar 15, 2024, 8:28 PM IST
ಕೊಪ್ಪಳ: ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ ಹಸನ್‌ಸಾಬ ದೋಟಿಹಾಳ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಹಸನ್ ಸಾಬ ದೋಟಿಹಾಳ ಅವರು 1999 ರಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಆ ಬಳಿಕ ಅವರು ಸಕ್ರಿಯ ರಾಜಕಾರಣದಲ್ಲಿದ್ದರು. ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾದ ಹಸನಸಾಬ ದೋಟಿಹಾಳ ಅವರಿಗೆ ಕಾಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಂದಿನ ಎರಡು ವರ್ಷಗಳ ಅವಧಿಗೆ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕೊಪ್ಪಳ ಜಿಲ್ಲೆಯಲ್ಲಿ ದೋಟಿಹಾಳ ಅವರೇ ಮೊದಲ ಬಾರಿ ಪ್ರಾಧಿಕಾರಕ್ಕೆ ನೇಮಕವಾದವರಾಗಿದ್ದಾರೆ. ಅದೂ ಅಲ್ಲದೇ ಬರೊಬ್ಬರಿ 20 ವರ್ಷಗಳ ಬಳಿಕ ಇವರಿಗೆ ಅಧ್ಯಕ್ಷ ಸ್ಥಾನ ದೊರೆತಿದೆ. ಈ ವರೆಗೂ ಅವರು ಸಕ್ರಿಯ ರಾಜಕಾರಣಿಯಾಗಿದ್ದರು. ಯಾವುದೇ ಅಧಿಕಾರದ ಸ್ಥಾನಮಾನ ಲಭಿಸಿರಲಿಲ್ಲ.
ರಾಜ್ಯ ಸರ್ಕಾರವು ನನಗೆ ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷನನ್ನಾಗಿ ನೇಮಕ ಮಾಡಿದೆ. 20 ವರ್ಷಗಳ ಬಳಿಕ ಮತ್ತೆ ಅಧಿಕಾರವು ಲಭಿಸಿದೆ. ರಾಜ್ಯ ಸರ್ಕಾರವು ನನಗೆ ಸ್ಥಾನ ಮಾನ ನೀಡಿದ್ದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರಿಗೆ ಅಭಿನಂದನೆ ಸಲ್ಲಿಸುವೆ. ಪ್ರಾಧಿಕಾರದಲ್ಲಿ ಮಾಡುವ ಅಭಿವೃದ್ಧಿ ಕಾರ್ಯಗಳಿಗೆ ರೂಪರೇಷ ಮಾಡಲಾಗುವುದು ಎಂದು ಹಸನಸಾಬ ದೋಟಿಹಾಳ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.