Koppal; ಹಲವೆಡೆ ದಾಳಿ: 2 ಕೋಟಿ ರೂ. ಮೌಲ್ಯದ ಅಕ್ರಮ ಪಟಾಕಿ ವಶ
Team Udayavani, Oct 12, 2023, 10:37 PM IST
ಕೊಪ್ಪಳ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಅತ್ತಿಬೆಲೆ ಪಟಾಕಿ ದುರಂತದ ನಂತರ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತೆ ಕ್ರಮವಾಗಿ ಕೊಪ್ಪಳ ಜಿಲ್ಲೆಯಲ್ಲಿ 2 ಕೋಟಿ ರೂ. ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿ ವಶಪಡಿಸಿಕೊಳ್ಳಲಾಗಿದೆ.
ಕೊಪ್ಪಳ ನಗರ, ಕೊಪ್ಪಳ ಗ್ರಾಮೀಣ, ಹನುಮಸಾಗರ ಮತ್ತು ಗಂಗಾವತಿ ನಗರ ಠಾಣಾ ವ್ಯಾಪ್ತಿಯ 13 ಸ್ಥಳಗಳಲ್ಲಿ ಪೊಲೀಸ್, ಕಂದಾಯ, ಅಗ್ನಿಶಾಮಕ ಇಲಾಖೆ ವತಿಯಿಂದ ಜಂಟಿ ದಾಳಿ ಮಾಡಿ ಪರಿಶೀಲನೆ ನಡೆಸಿ ಅಕ್ರಮವಾಗಿ ದಾಸ್ತಾನು, ಅನಧಿಕೃತವಾಗಿ ಲೈಸೆನ್ಸ್ ನಿಯಮ ಉಲ್ಲಂಘಿಸಿ ಸಂಗ್ರಹಿಸಿ ಇಡಲಾಗಿದ್ದ ಒಟ್ಟು 2,39,13,412 ರೂ ಮೌಲ್ಯದ 7,642 ಕೆಜಿ ವಶಕ್ಕೆ ಪಡೆದಿದ್ದು, ಈ ಕುರಿತು ಹನುಮಸಾಗರ ಠಾಣೆಯಲ್ಲಿ 03 ಹಾಗೂ ಕೊಪ್ಪಳ ನಗರ ಠಾಣೆ 01 ಹಾಗೂ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ 03 ಹೀಗೆ ಒಟ್ಟು 7 ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಂಡಿದೆ.
ಗಂಗಾವತಿ ನಗರದಲ್ಲಿನ ಒಟ್ಟು 06 ಸ್ಥಳಗಳಲ್ಲಿ ನಡೆದ ದಾಳಿ ಸ್ಥಳಗಳಲ್ಲಿ ಪಂಚನಾಮೆ ಮುಂದುವರೆದಿದೆ. ಅಕ್ರಮವಾಗಿ ಪಟಾಕಿ ದಾಸ್ತಾನು ಸ್ಥಳಗಳ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ಇದ್ದಲ್ಲಿ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ಸಂಖ್ಯೆ 9480803700 ಗೆ ಮಾಹಿತಿ ನೀಡಲು ಕೋರಿದ್ದಾರೆ. ಮಾಹಿತಿದಾರರ ವಿವರ ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.