Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Team Udayavani, Nov 8, 2024, 2:05 PM IST
ಕೊಪ್ಪಳ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಜೆಸ್ಕಾಂ ಗುತ್ತಿಗೆದಾರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ (ನ.08) ಗಿಣಿಗೇರಿ ಗ್ರಾಮದಲ್ಲಿ ನಡೆದಿದೆ.
ಜಯರಾಂ ಪತ್ತಾರ (42) ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ. ಮುನಿರಾಬಾದ್ ಎಇಇ ಸಂತೋಷ ಎಂಬಾತನಿಂದ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಕೆಲಸ ಮಾಡಿದ ಫೈಲ್ ಗಳು ಕಳೆದಿದೆ ಎಂದು ಕಿರುಕುಳ ನೀಡಿದ್ದು, ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ಬೆಳಗಿನ ಜಾವ ವಿಷ ಸೇವನೆ ಮಾಡಿದ್ದಾರೆ. ಬಸ್ಸಾಪುರ ಗ್ರಾಮದ ರೆಸಾರ್ಟ್ ನಲ್ಲಿ ಕಾಮಗಾರಿ ಮಾಡಿದ ಫೈಲ್ ಗಳ ವಿಚಾರಕ್ಕೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ಯತ್ನಿಸಿದ ಜಯರಾಂ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಯರಾಂ 25 ವರ್ಷದಿಂದ ಜೆಸ್ಕಾಂ ಗುತ್ತಿಗೆದಾರನಾಗಿ ಕೆಲಸ ಮಾಡ್ತಿದ್ದರು.
ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್53 ಪ್ರಕರಣ -4.75 ಲಕ್ಷ ರೂ. ವಶ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.