Koppala: ಬಿಜೆಪಿಯದ್ದು ಒಂದು ನಾಟಕ ಕಂಪನಿ…: ಸಚಿವ ಶಿವರಾಜ ತಂಗಡಗಿ
Team Udayavani, Dec 7, 2024, 2:15 PM IST
ಕೊಪ್ಪಳ: ಬಿಜೆಪಿಯದ್ದು ಒಂದು ನಾಟಕ ಕಂಪನಿ. ವಕ್ಪ್ ವಿಚಾರದಲ್ಲಿ ಎರಡು ಬಣ ಮಾಡಿಕೊಂಡು ಬೀದಿ ಬೀದಿ ಅಲೆಯುತ್ತಿದ್ದಾರೆ. ಅದನ್ನು ಬಿಟ್ಟು ಸದನದಲ್ಲಿ ಚರ್ಚೆ ಮಾಡಲಿ ಎಂದು ನಗರದಲ್ಲಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಶನಿವಾರ (ಡಿ.12) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿಯೇ ನಾಲ್ಕು ನೂರಕ್ಕೂ ಹೆಚ್ಚು ನೋಟಿಸ್ ನೀಡಿದ್ದಾರೆ. ಅದರ ಬಗ್ಗೆ ಬಿಜೆಪಿಯ ನಾಯಕರು ಏಕೆ ಮಾತನಾಡುತ್ತಿಲ್ಲ. ಅವಾಗ ಹೊಟ್ಟೆಗೇನು ತಿನ್ನುತ್ತಿದ್ದರು? ಬಿಜೆಪಿಯವರಿಗೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಅವರು ಯಾವುದೇ ಅಧಿವೇಶನದಲ್ಲಿ ರೈತರ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮದು ಲ್ಯಾಂಡ್ ಜಿಹಾದ್ ಇಲ್ಲ ಯಾವುದೇ ಜಿಹಾದೂ ಇಲ್ಲ ಎಂದರು.
ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಿದ ತಂಗಡಗಿ, ನಮ್ಮ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ಮಾತಾಡುವಷ್ಟು ದೊಡ್ಡವನು ನಾನಲ್ಲ. ದೊಡ್ಡವರ ನಡುವೆ ನಡೆದಿರುವ ಚರ್ಚೆ ಬಗ್ಗೆ ನಮಗೆ ಗೊತ್ತಿಲ್ಲ ಎಂದರು.
ನಿಖಿಲ್ ಗೆ ಅಸಹ್ಯ ಮಾಡಲು ಜೆಡಿಎಸ್ ಸಮಾವೇಶ ಮಾಡುತ್ತಿದೆ. ಯಾಕೆ ಸೋತ ಎಂದು ಚಿಂತಿಸಲು ಸಭೆ ಮಾಡಲಿ. ಸಮಾವೇಶ ಮಾಡುವ ಅವಶ್ಯಕತೆ ಏನಿದೆ ಎಂದು ಸಚಿವ ಶಿವರಾಜ್ ತಂಗಡಗಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.