ಬಾಲ್ಯವಿವಾಹ ತಡೆಗೆ ಕೈ ಜೋಡಿಸಿ
Team Udayavani, Jan 18, 2019, 10:14 AM IST
ಕೊಪ್ಪಳ: ಬಾಲ್ಯವಿವಾಹ ಕಾನೂನು ಬಾಹಿರವಾದ್ದು, ಇದರ ನಿರ್ಮೂಲನೆ ಮತ್ತು ಕೊಪ್ಪಳ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಸಂಕಲ್ಪಕ್ಕೆ ಕೈಜೋಡಿಸಿ ಎಂದು ಜಿಪಂ ಸಿಇಒ ವೆಂಕಟರಾಜಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕೊಪ್ಪಳ ಜಿಲ್ಲಾಡಳಿತದಿಂದ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ, ಸರ್ಕಾರಿ ಶಾಲೆಗಳ ಉನ್ನತೀಕರಣ ಮತ್ತು ಹಳೇ ವಿದ್ಯಾರ್ಥಿ ಸಂಘಗಳ ಬಲವರ್ಧನೆ ಹಾಗೂ ಸ್ವಚ್ಛ ಭಾರತ್ ಆಂದೋಲನ್ ಕುರಿತು ಸಂದಿಗ್ಧ ಚಲನಚಿತ್ರ ತಂಡದೊಂದಿಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ್ಯವಿವಾಹದಿಂದ ಅಪೌಷ್ಟಿಕತೆ, ಆರೋಗ್ಯದ ಮೇಲೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಬಾಲ್ಯ ವಿವಾಹ ಕಾನೂನು ಬಾಹಿರವಾಗಿದ್ದು, ಅದನ್ನು ತಡೆಯಲು ವಿದ್ಯಾರ್ಥಿಗಳ ಸಹಕಾರ ಅತಿ ಮುಖ್ಯವಾಗಿದೆ. ಜಿಲ್ಲೆಯ ಎಲ್ಲಾ ಪ್ರೌಢಶಾಲಾ ಮತ್ತು ಕಾಲೇಜು ಮಕ್ಕಳು ಸಂದಿಗ್ಧ ಚಿತ್ರವನ್ನು ಕಡ್ಡಾಯವಾಗಿ ವೀಕ್ಷಿಸಬೇಕು. ಅಲ್ಲದೇ ತಮ್ಮ ಪಾಲಕರು ಸಹ ಈ ಚಿತ್ರದ ವೀಕ್ಷಣೆ ಮಾಡುವಂತೆ ಅವರಿಗೆ ಮನವರಿಕೆ ಮಾಡಿ. ಜಿಲ್ಲೆಯ ಸಾರ್ವಜನಿಕರೆಲ್ಲರಿಗೂ ಸಂದಿಗ್ಧ ಚಿತ್ರ ವೀಕ್ಷಿಸಬೇಕಾಗಿದ್ದು, ಜಿಲ್ಲೆಯ 22 ಚಿತ್ರಮಂದಿರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ಜ. 30ರೊಳಗಾಗಿ ಸುಮಾರು 1.5 ಲಕ್ಷದಿಂದ 2 ಲಕ್ಷದ ಜನರು ಈ ಚಿತ್ರವನ್ನು ವೀಕ್ಷಣೆ ಮಾಡುವ ನಿರೀಕ್ಷೆಯಿದೆ. ಒಂದು ವರ್ಷದೊಳಗೆ ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸುವುದು ಜಿಲ್ಲಾಡಳಿತ ಹಾಗೂ ಜಿಪಂ ಗುರಿಯಾಗಿದೆ ಎಂದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ| ವನೀತಾ ತೊರವಿ ಮಾತನಾಡಿ, ಬಾಲ್ಯವಿವಾಹದಿಂದ ಮಕ್ಕಳ ಭವಿಷ್ಯ ಮತ್ತು ಶಿಕ್ಷಣ ಕುಂಠಿತವಾಗುತ್ತದೆ. ಬಾಲ್ಯವಿವಾಹದಿಂದ ಹುಟ್ಟುವ ಮಕ್ಕಳಲ್ಲಿ ಅಂಗವಿಕಲತೆ ಉಂಟಾಗುತ್ತದೆ. ಜಿಲ್ಲೆಯು ಸ್ವಚ್ಛ ಭಾರತ್ ಯೋಜನೆಯಡಿ ದೇಶದ ಗಮನವನ್ನು ಸೆಳದಿದೆ. ಜಿಲ್ಲೆಯಲ್ಲಿ ಸುಮಾರು 1500 ಬಾಲ್ಯವಿವಾಹಗಳನ್ನು ತಡೆಯಲಾಗಿದೆ ಹಾಗೂ ಈ ಕುರಿತು 11 ಎಫ್.ಐ.ಆರ್. ದಾಖಲಾಗಿದ್ದು, ಕೊಪ್ಪಳವು ರಾಜ್ಯದಲ್ಲಿ ಮಾದರಿ ಜಿಲ್ಲೆಯಾಗಿದೆ. ಬಾಲ್ಯವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತ ಜಿಲ್ಲೆಯಾಗಬೇಕಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದರು. ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ವೆಬ್‌ಸೈಟ್ www.kscpcr.com ಮೂಲಕ ದೂರನ್ನು ಅಥವಾ ಟೋಲ್ ಫ್ರೀ ನಂಬರ್ 1800-425-2900ಕ್ಕೆ ಕರೆ ಮಾಡಿ” ಎಂಬ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಬಿಡುಗಡೆ ಮಾಡಿದರು. ಸಂದಿಗ್ಧ ಚಲನಚಿತ್ರದ ನಿರ್ದೇಶಕ ಸುಚಿಂದ್ರ ಪ್ರಸಾದ, ಬಾಲ ನಟರಾದ ಸಂದಿಗ್ಧ ಚಿತ್ರದ ಬಾಲ ಕಲಾವಿದರಾದ ನಿಶಾಂತ, ರಂಜಿತಾ, ಸಂಜನಾ, ಕಿರಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಈರಣ್ಣ ಪಂಚಾಳ್, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣ ಯೋಜನೆಯ ಹರೀಶ ಜೋಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, ಚಿತ್ರನಟ ಮಹೇಶ ದೇವು ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.