ಹಕ್ಕಿಪಿಕ್ಕಿ ಜನಾಂಗಕ್ಕೆ ಸೌಲಭ್ಯ ಕಲ್ಪಿಸಿ


Team Udayavani, Feb 9, 2019, 11:03 AM IST

9-february-18.jpg

ಕೊಪ್ಪಳ: ನಗರದ ಸಜ್ಜಿ ಹೊಲದಲ್ಲಿ ಹಲವು ವರ್ಷಗಳಿಂದ ವಾಸ ಮಾಡುತ್ತಿರುವ 25 ಹಕ್ಕಿಪಿಕ್ಕಿ ಕುಟುಂಬಕ್ಕೆ ಜಿಲ್ಲಾಡಳಿತ, ಸರ್ಕಾರ ಶಾಶ್ವತ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಎಂದು ಜಿಲ್ಲಾ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ನಗರಾಭಿವೃದ್ಧಿ ಕೋಶದ ಅಧಿಕಾರಿಗೆ ಮನವಿ ಸಲ್ಲಿಸಿದೆ.

ಸಜ್ಜಿ ಹೊಲದಲ್ಲಿನ ಸ್ಥಳಕ್ಕೆ ಜಿಲ್ಲಾ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಭೇಟಿ ನೀಡಿ ಅಲ್ಲಿನ ಜನರ ಬದಲಾವಣೆಗೆ, ಜಾಗೃತಿಗೆ ಸಮೀಕ್ಷೆ ಕೈಗೊಂಡಿದ್ದು, ಸರಕಾರ ಮಟ್ಟದಲ್ಲಿ ಕೆಲಸ ಮಾಡಲು ನಿರ್ಧರಿಸಿದೆ.

ನಗರದ 12ನೇ ವಾರ್ಡ್‌ನಲ್ಲಿ ಹಕ್ಕಿಪಿಕ್ಕಿ ಸಮುದಾಯವು ಯಾವುದೋ ಒಂದು ಕಾಡಿನಲ್ಲಿ ಬದುಕು ಸಾಗಿಸುವ ರೀತಿಯಲ್ಲಿ ಜೀವನ ನಡೆಸುತ್ತಿದೆ. ಇಲ್ಲಿನ ಜನಾಂಗದ ಬದುಕು ಹಸನ ಮಾಡಲು ತುರ್ತಾಗಿ ಈ ಕೆಲಸಗಳು ಆಗಬೇಕಿದ್ದರೆ ಈ ಎಲ್ಲ ಕುಟುಂಬಗಳಿಗೆ ಅವರು ವಾಸಿಸುತ್ತಿರುವ ಸ್ಥಳದಲ್ಲಿಯೇ ಅವರಿಗೆ ಪಕ್ಕಾ ಮನೆ ನಿರ್ಮಾಣ ಮಾಡಿಕೊಡಬೇಕು. ಸ್ವಚ್ಛ ಭಾರತ್‌ ಮಿಷನ್‌ ಅಥವಾ ಇತರೆ ಯೋಜನೆಯಲ್ಲಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡಬೇಕು. ಇಲ್ಲಿನ 23 ಮಕ್ಕಳು ಕೊಟಗಾರಗೇರಾ ಸ.ಹಿ.ಪ್ರಾ. ಶಾಲೆಯಲ್ಲಿ ಓದುತ್ತಿದ್ದು, ಕೆಲವರನ್ನು ಹೊರತುಪಡಿಸಿ ಉಳಿದ ಮಕ್ಕಳು ನಿರಂತರ ಶಾಲೆಗೆ ಗೈರು ಹಾಜರಾಗಿದ್ದಾರೆ. ಅವರ ಶಿಕ್ಷಣ ತುಂಬಾ ಕೆಳಹಂತದಲ್ಲಿದೆ. ಅವರಿಗೆ ಅವಶ್ಯವಿದ್ದಲ್ಲಿ, ಹಾಸ್ಟೆಲ್‌ ಅನುಕೂಲ ಮಾಡಿಕೊಡಬೇಕು. ಉಚಿತ ವಿದ್ಯುತ್‌ ಸಂಪರ್ಕ, ಉಜ್ವಲ್‌ ಸೌಲಭ್ಯ, ಈ ಸ್ಥಳಕ್ಕೆ ಸಂಪರ್ಕ ರಸ್ತೆ ಮತ್ತು ಅಲ್ಲಿ ಕಾಂಕ್ರೀಟ್ ಚರಂಡಿ ಮತ್ತು ರಸ್ತೆ ನಿರ್ಮಾಣ ಮಾಡಿಕೊಡಬೇಕು. ಇಲ್ಲಿನ ಸಮುದಾಯಕ್ಕೆ ಉತ್ತಮ ತರಬೇತಿ ಕೊಡಿಸಿ, ಉದ್ಯೋಗ ನೀಡಲು ಸಾಲ ಸೌಲಭ್ಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ನಗರಾಭಿವೃದ್ಧಿ ಕೋಶದ ಕೃಷ್ಣಪ್ಪ ಅವರಿಗೆ ಮನವಿಯಲ್ಲಿ ಸಲ್ಲಿಸಲಾಯಿತು.ಈ ವೇಳೆ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಮುಖ್ಯಸ್ಥೆ ಜ್ಯೋತಿ ಮಂಜುನಾಥ ಗೊಂಡಬಾಳ, ಸರೋಜಾ ಬಾಕಳೆ, ವಿಜಯಲಕ್ಷ್ಮೀ  ಗುಳೇದ್‌, ಅಜುಮುನ್ನಿಸಾ ಬೇಗಂ, ಶಿವಲೀಲಾ ಹಿರೇಮಠ, ಸಲೀಮಾ ಜಾನ್‌, ಮಲ್ಲಪ್ಪ ಹಡಪದ, ಬಸವರಾಜ ದೇಸಾಯಿ, ಲತಾ ಕಲ್ಲೇಶ್‌ ಇತರರಿದ್ದರು.

ಸಜ್ಜಿ ಹೊಲಕ್ಕೆ ಅಧಿಕಾರಿಗಳು ಭೇಟಿ
ಹಕ್ಕಿಪಿಕ್ಕಿ ಸಮುದಾಯವು ತೀರಾ ಕೆಳ ಹಂತದ ಜೀವನ ಸಾಗಿಸುತ್ತಿರುವ ಹಿನ್ನೆಲೆಯಲ್ಲಿ ಮೌಡ್ಯ ಆಚರಣೆ ಈ ಸಮುದಾಯದಲ್ಲಿ ಇನ್ನೂ ಜೀವಂತವಿರುವ ಕುರಿತು ಮಾಧ್ಯಮದಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ. ಕಲ್ಲೇಶ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ, ಹಲವು ಕುಟುಂಬಕ್ಕೆ ಸರ್ಕಾರದ ಸೌಲಭ್ಯ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಮಕ್ಕಳನ್ನು ಶಾಲೆಗೆ ದಾಖಲಿಸಿ ಶಿಕ್ಷಣ ಕೊಡಿಸಬೇಕೆಂದು ಸೂಚನೆ ನೀಡಿದರು. ಅಲ್ಲದೇ, ಹಕ್ಕಿಪಿಕ್ಕಿ ಸಮುದಾಯ ಸೌಲಭ್ಯ ಪಡೆಯಬೇಕೆಂದು ಸೂಚನೆ ನೀಡಿದರು. ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಅಮರೇಶ ಕಡಗದ, ಸುಬಾನ್‌ ಸೈಯದ್‌, ಶಿವಕುಮಾರ ಇದ್ದರು.

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.