ಕಾರ್ಮಿಕರು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲಿ


Team Udayavani, Mar 3, 2019, 11:16 AM IST

3-march-18.jpg

ಕೊಪ್ಪಳ: ಕಾರ್ಮಿಕರಿಗೆ ಸರ್ಕಾರದ ವಿವಿಧ ಸೌಲಭ್ಯಗಳಿದ್ದು, ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕೆಂದು ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಹೇಳಿದರು.

ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಮಿಕ ಸಮ್ಮಾನ ಪ್ರಶಸ್ತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಕಾರ್ಮಿಕರು ತಾವು ಮಾಡುವ ಕೆಲಸದಲ್ಲಿ ದೇವರನ್ನು ಕಾಣಬೇಕು. ಅಂದಾಗ ಮಾತ್ರ ಆ ಕೆಲಸದಿಂದ ಪುರಸ್ಕಾರ, ಸನ್ಮಾನಗಳು ತಾವೇ ಹುಡಿಕಿಕೊಂಡು ಬರುತ್ತವೆ. ಎಷ್ಟು ಶ್ರಮವಹಿಸಿ ಕೆಲಸ ಮಾಡುತ್ತೆವೆಯೋ ಅಷ್ಟು ಪ್ರತಿಫಲ ಸಿಗುವುದರಲ್ಲಿ ಸಂಶಯವೇ ಇಲ್ಲ. ಆದ್ದರಿಂದ ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರವು ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಹಲವಾರು ಕ್ಷೇತ್ರದಲ್ಲಿ ಕಾರ್ಮಿಕರು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದಾರೆ. ಅಂತಹ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ಕಾರ್ಮಿಕ ಸಮ್ಮಾನ ಪ್ರಶಸ್ತಿಗಳು ಹಾಗೂ ಗೌರವಧನ ನೀಡುವ ಮೂಲಕ ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಕಾರ್ಮಿಕರ ವೃತ್ತಿಪರ ಕೆಲಸದಲ್ಲಿ ಇನ್ನು ಹೆಚ್ಚಿನ ಆಸಕ್ತಿ ದೊರೆಯಲಿದೆ. ಕಾರ್ಮಿಕರಿಗೆ ವಿವಾಹ, ಮನೆ ನಿರ್ಮಾಣಕ್ಕೆ ಸಹಾಯಧನ, ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ, ಮಕ್ಕಳ ವಿವಾಹಕ್ಕೆ ಧನ ಸಹಾಯ ಹೀಗೆ ಹಲವಾರು ಸೌಲಭ್ಯಗಳನ್ನು ನೀಡಿ ಅವರಿಗೆ ಜೀವನ ಕಲ್ಪಿಸಲು ಸರ್ಕಾರ ಸಿದ್ಧವಿದೆ. ಅಲ್ಲದೇ ವಿವಿಧ ರೀತಿಯ ಸೌಲಭ್ಯಗಳನ್ನು ಜಾರಿಗೆ ಮಾಡಿದ್ದು, ಕಾರ್ಮಿಕರು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಸರ್ಕಾರದ ಸಂಸದೀಯ ಕಾರ್ಯದರ್ಶಿ ರಾಘವೇಂದ್ರ ಹಿಟ್ನಾಳ ಮಾತನಾಡಿ, ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಮಾತಿನಂತೆ ನಾವು ಮಾಡುವ ಕೆಲಸದಲ್ಲಿ ಕೈಲಾಸವನ್ನು ಕಾಣಬೇಕು. ಅಂದಾಗ ಮಾತ್ರ ಆ ಕೆಲಸಕ್ಕೆ ಯಶಸ್ಸು ಬರುತ್ತದೆ. ಅಂಬೇಡ್ಕರ್‌ ಸಹಾಯ ಹಸ್ತ ನೋಂದಣಿ ಪಲಾನುಭವಿಗಳಿಗೆ ಹಲವಾರು ಕ್ಷೇತ್ರದಲ್ಲಿ ಉಚಿತ ಸೌಲಭ್ಯಗಳನ್ನು ನೀಡುತ್ತಿದ್ದು, ಅಂತಹ ಕಾರ್ಮಿಕರಿಗೆ ರೂ. ಐದು ಲಕ್ಷ ಅನುದಾನದಲ್ಲಿ ಮನೆಗಳ ನಿರ್ಮಾಣ, ಹಾಗೆಯೆ ಕೆಲಸದ ಸಂದರ್ಭದಲ್ಲಿ ಅಕಾಲಿಕ ಮರಣ ಹೊಂದಿದ ಕಾರ್ಮಿಕರಿಗೆ ರೂ. ಐದು ಲಕ್ಷ ಪರಿಹಾರವನ್ನು ಸರ್ಕಾರದಿಂದ ವಿತರಿಸಲಾಗುತ್ತದೆ. ಇಎಸ್‌ಐ ನೋಂದಣಿಯಾಗಿರುವ ಕಾರ್ಮಿಕರಿಗೆ ಆರೋಗ್ಯ ಸಮಸ್ಯೆಯಾದರೆ ಸರ್ಕಾರದಿಂದ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಚಂದ್ರಶೇಖರ ಎನ್‌. ಐಲಿ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಹಲವಾರು ಕಾರ್ಮಿಕರನ್ನು ಗುರುತಿಸಿ ಅವರಿಗೆ ನೋಂದಣಿ ಕಾರ್ಡ್‌ಗಳನ್ನು ನೀಡುತ್ತಿದ್ದು, ಅವರಿಗೆ ಸರ್ಕಾರದಿಂದ ಬರುವ ಸಹಾಯಧನ ನೀಡುತ್ತಿದ್ದೇವೆ. ಹಾಗೆಯೇ ಕೇಂದ್ರ ಸರ್ಕಾರದ ಶ್ರಮ, ಸಮ್ಮಾನ್‌ ಧನ ಯೋಜನೆಯಡಿ 60 ವರ್ಷ ಪೂರೈಸಿದ ವ್ಯಕ್ತಿಗಳಿಗೆ ಪಿಂಚಣಿ ನೋಂದಣಿಯಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯದ ಎರಡನೇ ಸ್ಥಾನದಲ್ಲಿದೆ. ಇನ್ನು ಅನೇಕ ರೀತಿಯ ಯೋಜನೆಗಳ ಬಗ್ಗೆ ಇಲಾಖೆಯು ಕಾರ್ಮಿಕರಿಗೆ ಮಾಹಿತಿಯನ್ನು ನೀಡುತ್ತಿದೆ ಎಂದರು.

ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್‌, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ತಾಪಂ ಅಧ್ಯಕ್ಷ ಬಾಲಚಂದ್ರನ್‌, ಜಿಲ್ಲಾ ಕಾರ್ಮಿಕ ನಿರೀಕ್ಷಕ ಹೊನ್ನಪ್ಪ, ಬಸವರಾಜ ಹಿರೇಗೌಡರ್‌ ಸೇರಿದಂತೆ ಮತ್ತಿತರರಿದ್ದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಸಾರಿಗೆ ಕಾರ್ಮಿಕರು, ಹಮಾಲಿಗಳು, ಟೈಲರ್‌ಗಳು ಹಾಗೂ ಅಸಂಘಟಿತ ಕಾರ್ಮಿಕ ವರ್ಗಕ್ಕೆ ಕಾರ್ಮಿಕ ಸಮ್ಮಾನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.