ಶಿಥಿಲಗೊಂಡ ನೀರಿನ ಟ್ಯಾಂಕ್ ತೆರವು; ಉದಯವಾಣಿ ಫಲಶ್ರುತಿ
Team Udayavani, Oct 29, 2022, 8:26 AM IST
ದೋಟಿಹಾಳ: ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಿಂದೆ ಶಿಥಿಲಗೊಂಡಿದ್ದ ನೀರಿನ ಟ್ಯಾಂಕ್ ಶುಕ್ರವಾರ ಬೆಳಗ್ಗೆ ನೆಲಸಮನ ಮಾಡಲಾಯಿತು.
ಕೇಸೂರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಿಂದೆ ಸುಮಾರ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಈ ನೀರಿನ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದ್ದು, ಕಳೆದ 7-8 ವರ್ಷಗಳಿಂದ ನೀರಿನ ಟ್ಯಾಂಕ್ ಸೋರುತ್ತಿತ್ತು. ಟ್ಯಾಂಕ್‌ನ ಕಂಬಿಗಳು ಸಂಪೂರ್ಣವಾಗಿ ಶಿಥಿಲಗೊಂಡು ಅಪಾಯದಲ್ಲಿತ್ತು. ಟ್ಯಾಂಕ್ ಪಕ್ಕದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಮತ್ತು ಖಾಸಗಿ ಶಾಲೆಯಿದೆ. ಈ ಎರಡು ಶಾಲೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದು, ಒಂದು ವೇಳೆ ಟ್ಯಾಂಕ್ ಕುಸಿದು ಬಿದ್ದರೆ ದೊಡ್ಡ ಅನಾಹುತ ಆಗುವ ಸಾಧ್ಯತೆಗಳಿದ್ದವು. ಶಾಲಾ ಮಕ್ಕಳು, ಸುತ್ತಮುತ್ತಲ ಜನರಿಗೆ ಭಯದಿಂದ ಕಾಲ ಕಳೆಯುತ್ತಿದ್ದರು. ಇದರ ಬಗ್ಗೆ ಹಲವು ಬಾರಿ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸ್ಥಳಾಂತರಿಸಲು ಚರ್ಚೆ ನಡೆದಿತ್ತು. ಸೂಕ್ತ ಕ್ರಮ ಕೈಗೊಳ್ಳಲು ಶಾಸಕರಿಗೆ ಮಾಹಿತಿ ನೀಡಲಾಗಿತ್ತು. ಈ ಬಗ್ಗೆ ಉದಯವಾಣಿ ವೆಬ್ ಹಾಗೂ ಪತ್ರಿಕೆಯಲ್ಲಿ ಅಗಸ್ಟ್ 30 ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ಶಿಥಿಲಗೊಂಡ ನೀರಿನ ಟ್ಯಾಂಕ್ ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.