ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ಶ್ಲಾಘನೀಯ


Team Udayavani, Jan 19, 2019, 11:58 AM IST

19-january-20.jpg

ತಾವರಗೇರಾ: ಸ್ವಾಸ್ಥ ಸಮಾಜ ನಿರ್ಮಾಣಕ್ಕಾಗಿ ಮಹಿಳೆಯರೊಂದಿಗೆ ನಮ್ಮ ಸಂಸ್ಥೆಯು ಪ್ರಮಾಣಿಕವಾಗಿ ರಾಜ್ಯಾದ್ಯಂತ ಉತ್ತಮ ಕೆಲಸ ಮಾಡುತ್ತಿದ್ದು, ಈಗಾಗಲೇ 4.65 ಲಕ್ಷ ಸಂಘಗಳು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೈಕ ಪ್ರಾದೇಶಿಕ ವಿಭಾಗದ ನಿರ್ದೇಶಕ ಪಿ. ಗಂಗಾಧರ ರೈ ಹೇಳಿದರು.

ಅವರು ಪಟ್ಟಣದ ಶ್ರೀವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಷ್ಟಗಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಅನುಕೂಲವಾಗುವ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ವೀರೇಂದ್ರ ಹೆಗ್ಗಡೆಯವರು 10 ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಹಣವನ್ನು ಪಡೆದು ಸಾಲದ ರೂಪದಲ್ಲಿ ಮಹಿಳಾ ಸಂಘಗಳಿಗೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಮತ್ತು ಇದರ ಜೊತೆಗೆ ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯದಲ್ಲಿ ನೂರಾರು ಕೆರೆಗಳ ಹೂಳೆತ್ತುವ ಕೆಲಸ ಮಾಡಿದ್ದಾರೆ. ಅಷ್ಟಲ್ಲದೆ 1400 ಮದ್ಯವರ್ಜನೆ ಶಿಬಿರಗಳನ್ನು ಹಮ್ಮಿಕೊಂಡು ಸಾವಿರಾರು ಜನರನ್ನು ಮದ್ಯ ವ್ಯಸನಮುಕ್ತರಾಗಿ ಮಾಡಿದ್ದಾರೆ ಎಂದು ಹೇಳಿದರು.

ನಂತರ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಮುದೇನೂರ ಶ್ರೀವಿಜಯ ಚಂದ್ರಶೇಖರಮಠದ ಶ್ರೀಸಿದ್ದಲಿಂಗದೇವರು ಆಶೀರ್ವಚನ ನೀಡಿ, ತಾಯಿಗಿಂತ ಮಿಗಿಲಾದ ದೇವರಿಲ್ಲ. ಹತ್ತು ದೇವರನ್ನು ಪೂಜಿಸುವುದಕ್ಕಿಂತ ಹೆತ್ತವರನ್ನು ಪೂಜಿಸಿ, ದೇವರ ಸ್ವರೂಪದಲ್ಲಿ ಕಾಣಬೇಕು. ನಮ್ಮ ದೇಶದ ಸಂಸ್ಕೃತಿಯನ್ನು ಮರೆತು ಮಹಿಳೆಯರು ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ನಮ್ಮ ದೇಶದ ಸಂಸ್ಕೃತಿಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯವರು ಸಂಘಗಳ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದರ ಜೊತೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಧರ್ಮದ ಜ್ಯೋತಿಯನ್ನು ಬೆಳಗಿಸುತ್ತಿದ್ದಾರೆ ಎಂದು ಹೇಳಿದರು. ನಂತರ ಧಾರ್ಮಿಕ ವಿಶೇಷ ಉಪನ್ಯಾಸವನ್ನು ಸರಕಾರಿ ಬಾಲಕಿಯರ ಪಪೂ ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ಎಸ್‌. ಪೋರೆ ನೀಡಿದರು.

ಇದಕ್ಕೂ ಮುನ್ನ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ವೇದಿಕೆಯಲ್ಲಿ ಶೇಖರಗೌಡ ಪೊಲೀಸಪಾಟೀಲ, ಗುರುಮೂರ್ತಿ ಹಿರೇಮಠ, ಮಲ್ಲಪ್ಪ ಜುಮಲಾಪುರ, ರುದ್ರಪ್ಪ ಅಕ್ಕಿ, ಈರಣ್ಣ ರೋಣದ, ಅಂಬುಜಾಕ್ಷಿ, ವೆಂಕಟೇಶ ಮಡಿವಾಳರ ಸೇರಿದಂತೆ ತಾವರಗೇರಾ ವಲಯದ ನೂರಾರು ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಸದಸ್ಯರಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಮೇಲ್ವಿಚಾರಕ ವಿನಾಯಕ ಸ್ವಾಗತಿಸಿದರು. ಪ್ರಕಾಶ ನಿರೂಪಿಸಿದರು. ವಲಯ ಮೇಲ್ವಿಚಾರಕ ಹುಸೇನ್‌ ವಂದಿಸಿದರು.

ಟಾಪ್ ನ್ಯೂಸ್

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ

2-ai

Artificial Intelligence: ಎಐ ಯುಗದಲ್ಲಿ ನಾವು ನೀವು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?

Pushpa 2 Movie: ವರ್ಷದ ಅತೀ ಉದ್ದದ ಸಿನಿಮಾ..? ʼಪುಷ್ಪ-2ʼ ರನ್‌ ಟೈಮ್‌ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

3

Aranthodu: ಪ್ರಯಾಣಿಕ ತಂಗುದಾಣದ ದಾರಿ ಮಾಯ!

2

Vitla: ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.