ಬಳಗಾನೂರು ಶ್ರೀಗಳ ದೀರ್ಘ‌ದಂಡ ನಮಸ್ಕಾರ

Team Udayavani, Feb 1, 2021, 4:47 PM IST

KOPPALA SHREE

ಕೊಪ್ಪಳ: ನಗರದ ಗವಿಸಿದ್ದೇಶ್ವರ ಮಹಾ ರಥೋತ್ಸವ ಸಾಗಿದ ಮರುದಿನ ರವಿವಾರ ಬೆಳಗ್ಗೆ ಬಳಗಾನೂರು ಶ್ರೀ ಶಿವಶಾಂತವೀರ ಶರಣರು ಗವಿಸಿದ್ದೇಶ್ವರರನ್ನು ನೆನೆಯುತ್ತ, ಮಠದ ಮುಖ್ಯದ್ವಾರದಿಂದ ಕೈಲಾಸ ಮಂಟಪದವರೆಗೂ ದೀರ್ಘ‌ ದಂಡ ನಮಸ್ಕಾರ ಹಾಕುತ್ತಾ ಗುರುನಾಮ ಸ್ಮರಣೆ ಮಾಡಿದರು.

ಪ್ರತಿ ವರ್ಷದ ಸಂಪ್ರದಾಯದಂತೆ ಮಹಾ ರಥೋತ್ಸವ ಸಾಗಿದ ಬಳಿಕ ಬಳಗಾನೂರಿನ ಶರಣರು, ಗುರು ಗವಿಸಿದ್ದೇಶ ಎಂದು ನಾಮ ಸ್ಮರಣೆ ಮಾಡುತ್ತಲೇ ಹೂವಿನ ಹಾಸಿನಲ್ಲಿ ದೀರ್ಘ‌ದಂಡ ನಮಸ್ಕಾರ ಹಾಕುತ್ತಾರೆ. ಈ ಹಿಂದೆ ಚಿಕ್ಕೇನಕೊಪ್ಪದ ಶ್ರೀಚನ್ನವೀರ ಶರಣರು ತಮ್ಮ ಗುರು ಶ್ರೀಮರಿಶಾಂತವೀರ ಶಿವಯೋಗಿಗಳಿಂದ ಚಿನ್ಮಯಾನುಗ್ರಹ ದೀಕ್ಷೆಪಡೆದ ನಂತರ ಅಂದಿನಿಂದ ನಿರಂತರವಾಗಿ ಸುಮಾರು 50 ವರ್ಷಗಳಿಂದ ಗುರು ಶ್ರೀ ಲಿಂ.  ಮರಿಶಾಂತವೀರ ಶಿವಯೋಗಿಗಳ ನಾಮ ಸ್ಮರಣೆ ಮಾಡುತ್ತಲೇ ಅವರ ಗದ್ದುಗೆವರೆಗೂ ದೀರ್ಘ‌ದಂಡ ನಮಸ್ಕಾರ ಹಾಕುತ್ತಿದ್ದರು.

ಅವರ ಲಿಂಗೈಕ್ಯದ ಬಳಿಕ ಅವರ ಶಿಷ್ಯ ಬಳಗಾನೂರಿನ ಶಿವಶಾಂತವೀರ ಶರಣರು ತಮ್ಮ ಗುರುವಿನ ಪರಂಪರೆಯನ್ನು ಇಂದಿಗೂ ಮುನ್ನಡೆಸಿಕೊಂಡುಬರುತ್ತಿದ್ದಾರೆ. ಪ್ರತಿ ವರ್ಷವೂ ಮಹಾ  ರಥೋತ್ಸವ ಸಾಗಿದ ಮರು ದಿನ ಸಂಜೆ ಮಠದ ಮುಖ್ಯದ್ವಾರದಿಂದ ಬಳಗಾನೂರಿನ ಶಿವಶಾಂತವೀರ ಶರಣರು ದೀರ್ಘ‌ದಂಡ ನಮಸ್ಕಾರ ಹಾಕುತ್ತಿದ್ದರು.

ಇದನ್ನೂ ಓದಿ:ಪೋಲಿಯೋ ಪ್ರಪಂಚದಿಂದಲೇ ದೂರಾಗಲಿ

ಅವರ ಹಿಂದೆಯೇ ಸಾವಿರಾರು ಭಕ್ತ ಸಮೂಹವೂ ಮಠದಲ್ಲಿ ದೀರ್ಘ‌ದಂಡ ನಮಸ್ಕಾರ ಹಾಕುತ್ತಿತ್ತು. ಆದರೆ ಕೋವಿಡ್‌ ಹಿನ್ನೆಲೆಯಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಶಿವಶಾಂತವೀರ ಶರಣರು ರವಿವಾರ ಬೆಳಗ್ಗೆ 7 ಗಂಟೆ ಸುಮಾರು ವಾದ್ಯ ಮೇಳದೊಂದಿಗೆ ಹೂವಿನ ಹಾಸಿನಲ್ಲಿ ದೀರ್ಘ‌ದಂಡ ನಮಸ್ಕಾರ ಹಾಕಿ ಭಕ್ತಿ ಪರಾಕಾಷ್ಠೆ ತೋರಿದರು. ಸಿದ್ಧೇಶ್ವರ ಮೂರ್ತಿ ಮೆರವಣಿಗೆ: ಗವಿಸಿದ್ದೇಶ್ವರ ಮಹಾ ರಥೋತ್ಸವ ಜರುಗಿದ ಮರುದಿನದಂದು ಪ್ರತಿ ವರ್ಷದ ಸಂಪ್ರದಾಯದಂತೆ ಶ್ರೀ ಸಿದ್ದೇಶ್ವರರ ಮೂರ್ತಿ ಮೆರವಣಿಗೆಯು ವಾದ್ಯ ಮೇಳದೊಂದಿಗೆ ಭಕ್ತರ ಮಧ್ಯೆ ರವಿವಾರ ಸಾಂಘವಾಗಿ ನೆರವೇರಿತು. ಸಿದ್ಧೇಶ್ವರ ಮೂರ್ತಿಗೆ ಭಕ್ತಾದಿ ಗಳು ಮಾರ್ಗದುದ್ದಕ್ಕೂ ಹೂವಿನ ಹಾರ, ಬಾಳೆಹಣ್ಣು, ಉತ್ತತ್ತಿ, ಕಲ್ಲುಸಕ್ಕರೆ ಅರ್ಪಿಸಿದರು. ಪಲ್ಲಕ್ಕಿ ಮಹೋತ್ಸವ, ಕಳಸೋತ್ಸವದ ಮೆರವಣಿಗೆಗಳಂತೆ ಈ ಮೆರವಣಿಗೆಯೂ ಸಾಂಘವಾಗಿ ನೆರವೇರಿತು.

ಬಳಿಕ ಸಿದ್ಧೇಶ್ವರ ಮೂರ್ತಿಯನ್ನು ತೊಟ್ಟಿಲಲ್ಲಿ ಮೂಹೂರ್ತಗೊಳಿಸಿ ಗವಿಸಿದ್ಧೇಶ್ವರ ಜೋಗುಳ ಪದಗಳನ್ನು ಮನತುಂಬಿ ಹಾಡಲಾಯಿತು. ಮೆರವಣಿಗೆಯು ಶ್ರೀಮಠದಿಂದ ಸಿದ್ಧೇಶ್ವರ ಸರ್ಕಲ್‌- ಕವಲೂರು ಓಣಿ, ಭಗತ್‌ ಸಿಂಗ್‌ ವೃತ್ತ, ಚನ್ನಮ್ಮ ಸರ್ಕಲ್‌, ಗವಿಮಠ ರಸ್ತೆಯ ಮಾರ್ಗವಾಗಿ ಶ್ರೀಮಠಕ್ಕೆ ಬಂದು ತಲುಪಿತು.

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.