Koppala; ಪೂಜಾರ ಕುಟುಂಬದ ನವ ವಧು – ವರರಿಂದ ಮತದಾನ ಜಾಗೃತಿ
Team Udayavani, Apr 4, 2024, 5:13 PM IST
ಕೊಪ್ಪಳ: ತಾಲೂಕಿನ ಹಾದರಮಗ್ಗಿ ಗ್ರಾಮದ ಪೂಜಾರ ಕುಟುಂಬದ ಸಹೋದರರ ವಿವಾಹ ಸಮಾರಂಭವು ಇಲ್ಲಿನ ಭಾಗ್ಯನಗರದ ಬಾಲಾಜಿ ಪಂಕ್ಷನ್ ಹಾಲ್ ನಲ್ಲಿ ಜರುಗಿತು.
ವಿವಾಹ ಸಮಾಂಭದಲ್ಲಿ ನವ ವಧು-ವರರು ಮೇ-7ರಂದು ಲೋಕಸಭಾ ಚುನಾವಣೆ ಜರುಗಲಿರುವ ಪ್ರಯುಕ್ತ ವೇದಿಕೆಯಲ್ಲಿ ನಮ್ಮ ಮತ, ನಮ್ಮ ಹಕ್ಕು, ಪ್ರತಿ ಮತ ಅತ್ಯಮೂಲ್ಯ ತಪ್ಪದೇ ಮತದಾನ ಮಾಡಿ, ನನ್ನ ಮತ ಮಾರಾಟಕ್ಕಿಲ್ಲ, ಮತ ಚಲಾಯಿಸೋಣ ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಇತ್ಯಾದಿ ಘೋಷಣೆಗಳನ್ನು ಒಳಗೊಂಡ ಬಂಟಿಂಗ್ಸ್ ಮೂಲಕ ಮತದಾನ ಜಾಗೃತಿ ಮೂಡಿಸಿದ್ದು ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ದುಂಡಪ್ಪ ತುರಾದಿ ಅವರು ನವ ವಧು ವರರಿಗೆ ಅಕ್ಷತೆ ಹಾಕಿ ಶುಭ ಕೋರಿದರಲ್ಲದೆ ಕಡ್ಡಾಯವಾಗಿ ಮೇ-7ರಂದು ತಪ್ಪದೇ ಮತ ಚಲಾಯಿಸಿರೆಂದು ಪೂಜಾರ ಕುಟುಂಬದವರಿಗೆ ಹಾಗು ಹಾಜರಿದ್ದವರಿಗೆ ಕರೆ ನೀಡಿದರು.
ತಾಪಂ ಐಇಸಿ ಸಂಯೋಜಕರು, ಕಿನ್ನಾಳ ಪಂಚಾಯತ್ ಅಭಿವೃದ್ದಿ ಅಧಿಕಾರಿ, ತಾಲೂಕ ಸ್ವೀಪ್ ಸಮಿತಿಯ ಸದಸ್ಯರು, ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.