Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ
Team Udayavani, Sep 23, 2023, 6:01 PM IST
ಕೊಪ್ಪಳ: ಎನ್‌ಡಿಎ ತೆಕ್ಕೆಗೆ ಜೆಡಿಎಸ್ ಸೇರಿದೆ ದೇವೇಗೌಡರು, ಕುಮಾರಸ್ವಾಮಿ ಹಾಗೂ ರೇವಣ್ಣ ಅವರಿಗೆ ತಮ್ಮದೇ ಬಲವಿದೆ. ಇದರಿಂದ ನಮಗೆ ಅನುಕೂಲವಾಗಲಿದೆ. ಕೆಲವು ಸಂದರ್ಭದಲ್ಲಿ ರಾಜಕಾರಣದಲ್ಲಿ ಹೊಂದಾಣಿಕೆ ಅನಿವಾರ್ಯವಾಗಲಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.
ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು ಹಿಂದೆ ನಾವೇ ಜೆಡಿಎಸ್ ವಿರುದ್ಧವಾಗಿ ಮಾತನಾಡಿದ್ದೇವೆ ಆದರೆ ಈಗ ಪರಿಸ್ಥಿತಿ ತಿಳಿಯಾಗಿದೆ. ರಾಜಕಾರಣದಲ್ಲಿಯೂ ಕೆಲವು ಸಂದರ್ಭದಲ್ಲಿ ಹೊಂದಾಣಿಕೆಯೂ ಅನಿವಾರ್ಯವಾಗಲಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಸ್ಥಾನದಷ್ಟೇ ನಾವು ಈ ಬಾರಿಯೂ ಗೆಲ್ಲಲಿದ್ದೇವೆ ಎಂದರು.
ಕಾವೇರಿ ನೀರು ಹರಿಸುವ ವಿಚಾರ ಸುಪ್ರೀಂ ಕೋರ್ಟ್ ಹಂತದಲ್ಲಿದೆ, ಕೋರ್ಟ್‌ಗೆ ನಾವು ಮನವರಿಕೆ ಮಾಡುವ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪ್ರಯತ್ನಿಸಬೇಕು. ಪ್ರಧಾನಿಗಳು ಮಧ್ಯ ಪ್ರವೇಶ ಬೇರೆ ವಿಚಾರ. ಕೋರ್ಟ್‌ನಲ್ಲಿ ಇರುವುದರಿಂದ ಕೋರ್ಟ್ ಮೂಲಕವೇ ಬಗೆಹರಿಸಬೇಕಾಗಿದೆ.
ಕೋರ್ಟ್ ಮನವರಿಕೆ ಮಾಡುವಲ್ಲಿ ರಾಜ್ಯ ಸರ್ಕಾರ ಎಡವಿದೆ. ಸುಮ್ಮನೆ ಪ್ರಧಾನಿಗಳತ್ತ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ಮೊದಲೇ ಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಸುಪ್ರೀಂನಲ್ಲಿ ವಿಚಾರಣೆ ಇರುವಾಗ ಪ್ರಧಾನಿಗಳು ಹೇಗೆ ಮಧ್ಯಪ್ರವೇಶ ಮಾಡಬೇಕು ?
ಇವರ ಘಟಬಂಧನ್ ಸರ್ಕಾರವೇ ತಮಿಳುನಾಡಿನಲ್ಲಿ ಇರುವುದು. ಅವರ ಬಗ್ಗೆ ಮಾತನಾಡಲಿ ಎಂದರು.
ರಾಜ್ಯದಲ್ಲಿ 195 ತಾಲೂಕು ಬರಪೀಡಿತವಾಗಿವೆ. ಒಂದು ರೀತಿ ಬರಕ್ಕೆ ಬಿಜೆಪಿಯೇ ಕಾರಣ ಎನ್ನುವಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ. ಬರದ ವಿಚಾರದಲ್ಲಿ ಪರಿಹಾರ ಕಾರ್ಯ ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ವ್ಯವಸ್ಥೆ ಮಾಡಬೇಕು. ಆದರೆ ಸುಮ್ಮನೆ ಸಿಎಂ, ಸಚಿವದ್ವಯರು ಕೇಂದ್ರ ಸರ್ಕಾರದತ್ತ ತೋರಿಸುತ್ತಿದ್ದಾರೆ. ಬರದ ವಿಚಾರದಲ್ಲಿಯೂ ರಾಜಕಾರಣ ಮಾಡಲಾಗುತ್ತಿದೆ ಎಂದರು.
ರಾಜ್ಯದಲ್ಲಿ ಏಷ್ಟಾದರೂ ಡಿಸಿಎಂ ಸ್ಥಾನ ಸೃಷ್ಟಿ ಮಾಡಲಿ. ಬೇಕಿದ್ದರೆ ಜಿಲ್ಲೆಗೊಂದರಂತೆ ಡಿಸಿಎಂ ಸ್ಥಾನ ಸೃಷ್ಟಿ ಮಾಡಲಿ. ಆದರೆ ರೈತರ ಪರಿಸ್ಥಿತಿಯನ್ನು ಮೊದಲು ನೋಡಲಿ. ಬರದ ಪರಿಸ್ಥಿತಿ ತಿಳಿಯಲಿ. ರಾಜ್ಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಡಿಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್‌ನ ರಾಯರಡ್ಡಿ, ರಾಜಣ್ಣ ಸೇರಿ ಇತರೆ ನಾಯಕರೇ ಹೇಳುತ್ತಿದ್ದಾರೆ ಎಂದು ಕುಟುಕಿದರು.
ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ವಿಚಾರ, ಸ್ವಲ್ಪ ವಿಳಂಬವಾಗಿರುವುದು ನಿಜ. ಹಾಗಂತ ನಾವು ಸುಮ್ಮನೆ ಕುಳಿತಿಲ್ಲ. ನಮ್ಮ ಪಕ್ಷ ಸೂಕ್ತ ಹಾಗೂ ಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡುತ್ತದೆ. ನಮ್ಮ ಹಿರಿಯರು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ. ಒಂದು ಹೆಜ್ಜೆ ಹಿಂದೆ ಸರಿದಾಗ ವೇಗವಾಗಿ ಮುಂದೆ ಹೋಗುತ್ತೇವೆ ಎಂದರ್ಥ ಎಂದರು.
ಇದನ್ನೂ ಓದಿ: Karnataka Congress ; ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು 28 ವೀಕ್ಷಕರ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.