ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
Team Udayavani, Dec 11, 2024, 2:12 PM IST
ಗಂಗಾವತಿ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ನಿಧನದ ಕಾರಣಕ್ಕಾಗಿ ರಾಜ್ಯ ಸರಕಾರ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ನಡೆಸಲು ನಿರ್ಧರಿಸಿ ಎಲ್ಲಾ ಸರಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೇರಿಸಲು ಸೂಚನೆ ನೀಡಲಾಗಿದೆ.
ಆದರೆ ಗಂಗಾವತಿ ನಗರದ ಬಿಇಓ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೇರಿಸಿಲ್ಲ. ಆದರೆ ಸರಕಾರದ ಸೂಚನೆಯಂತೆ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಾಷ್ಟ್ರಧ್ವಜವನ್ನು ಅರ್ಧಕ್ಕೇರಿಸಲು ಸರಕಾರದಿಂದ ಪ್ರತ್ಯೇಕ ಆದೇಶ ಬಂದಿಲ್ಲ ಎಂದು ತಹಶೀಲ್ದಾರ್ ಯು.ನಾಗರಾಜ, ಬಿಇಓ ಮಂಜುನಾಥ ವಸ್ತ್ರದ್ ಉದಯವಾಣಿಗೆ ತಿಳಿಸಿದ್ದಾರೆ.
ಸರಕಾರದ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಸೂಚನೆ ನೀಡಿ, ಮೂರು ದಿನಗಳ ಕಾಲ ಶೋಕಾಚರಣೆ, ಸರಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವವನ್ನು ಅರ್ಧಕ್ಕೇರಿಸಲು ಸೂಚನೆ ನೀಡಲಾಗಿದ್ದು, ಇದನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡಿ ರಜಾ ಮಜಾದಲ್ಲಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.