ಮಧ್ಯರಾತ್ರಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
Team Udayavani, Sep 20, 2019, 9:54 AM IST
ಕೊಪ್ಪಳ: ಗಂಗಾವತಿ ಸಿದ್ದಾಪುರ ಸಮೀಪದ ರವಿನಗರದ ಬಳಿ ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಬಸ್ ನಲ್ಲಿ 12ಕ್ಕೂ ಅಧಿಕ ಜನ ಇದ್ದರು ಎನ್ನಲಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್. ಪೇಟೆ ಡಿಪೊಗೆ ಸೇರಿದ ಬಸ್ ಇದಾಗಿದ್ದು, ನಿನ್ನೆ ರಾತ್ರಿ ರಾಯಚೂರಿಗೆ ಪೊಲೀಸರನ್ನು ತಲುಪಿಸಿ ಮಾಡಿ ಡಿಪೊಗೆ ಮರಳುವಾಗ ಸಂಭವಿಸಿದ ಘಟನೆ ನಡೆದಿದೆ.
ಡಿಪೊ ಅಧಿಕಾರಿಗಳು ರಾತ್ರೋರಾತ್ರಿ ವಾಪಾಸಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ವಾಪಸು ಬರುತ್ತಿದ್ದರು. ಖಾಲಿ ಬರುವ ಬದಲು ಪ್ರಯಾಣಿಕರನ್ನು ತುಂಬಿಕೊಂಡು ಬರಲು ಅಧಿಕಾರಿಗಳ ಸೂಚನೆ ನೀಡಿದ್ದರು ಎನ್ನಲಾಗಿದೆ. ಚಾಲಕ-ನಿರ್ವಾಹಕರಿಗೆ ವಿಶ್ರಾಂತಿ ಇಲ್ಲದೇ ಕರ್ತವ್ಯ ನಿಯೋಜನೆ ಮಾಡಿದ್ದರಿಂದ ಈ ಅನಾಹುತವಾಗಿದೆ ಎಂದು ಆರೋಪಗಳು ಕೇಳಿ ಬಂದಿವೆ.
ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.