ಅರ್ಹ ಕೃಷಿಕರಿಗೆ ಪಟ್ಟಾ ನೀಡಿ: ಕುಮಾರ ಬಂಗಾರಪ್ಪ
ಡೀಮ್ಡ್ ಅರಣ್ಯ ಭೂಮಿ ಕಂದಾಯ ಇಲಾಖೆಗೆ ಶೀಘ್ರ ಬರಲಿ! ನಿರಂತರ ಅಕ್ರಮ ಸಕ್ರಮ ಸಮಿತಿ ಸಭೆ ನಡೆಸಿ
Team Udayavani, Feb 6, 2021, 8:22 PM IST
ಗಂಗಾವತಿ: ಅರಣ್ಯಭೂಮಿ ಸಾಗುವಳಿ ಮಾಡುವ ಕೃಷಿಕರಿಗೆ ಪಟ್ಟಾ ನೀಡಲು ಸರ್ಕಾರ ಸಮರೋಪಾದಿಯಲ್ಲಿ ಬಗರಹುಕುಂ ಅರ್ಜಿ ವಿಲೇವಾರಿ ಮಾಡುವಂತೆ ಶಾಸಕ ಕುಮಾರ ಬಂಗಾರಪ್ಪ ಹೇಳಿದರು.
ಮಾಜಿ ಸಚಿವ ಎಚ್.ಜಿ. ರಾಮುಲು ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ಮೂರು ದಶಕಗಳಿಂದ ಬಾಕಿ ಇರುವ ಫಾರಂ 50 ಮತ್ತು 53 ಅರ್ಜಿ ವಿಲೇವಾರಿ ಮಾಡಿ ಬಗರಹುಕುಂ ಭೂಮಿ ಊಳುವವರಿಗೆ ಸಾಗುವಳಿ ಪಟ್ಟಾ ವಿತರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಬಗರಹುಕುಂ ಭೂಮಿ ಉಳುಮೆ ಮಾಡುತ್ತಿರುವ ಕೃಷಿಕರು ಫಾರಂ ನಂ.50 ಮತ್ತು 53 ಮೂಲಕ ಪಟ್ಟಾ ನೀಡುವಂತೆ ಅರ್ಜಿ ಸಲ್ಲಿಸಿದ್ದು ಅವರಿಗೆ ಇದುವರೆಗೂ ಸಾಗುವಳಿ ಪಟ್ಟಾ ವಿತರಣೆಗೆ ಯಾವ ಸರ್ಕಾರಗಳೂ ಕ್ರಮ ಕೈಗೊಂಡಿಲ್ಲ. ಕಂದಾಯ ಸಚಿವ ಆರ್. ಅಶೋಕ ಡೀಮ್ಡ್ ಅರಣ್ಯ ಪ್ರದೇಶ ಕಂದಾಯ ಇಲಾಖೆ ವಹಿಸಿಕೊಂಡು ಭೂಮಿ ಹಂಚಿಕೆ ಮತ್ತು ಮನೆ ನಿರ್ಮಾಣಕ್ಕೆ ಜಾಗ ವಿತರಣೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿಕೆ ನೀಡಿದ್ದು
ಕೇಂದ್ರ ಮತ್ತು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸುವ ಮೂಲಕ ಡೀಮ್ಡ್ ಅರಣ್ಯ ಭೂಮಿ ಕಂದಾಯ ಇಲಾಖೆಗೆ ವಹಿಸಲು ಸಾಧ್ಯವಿದೆ.ರಾಜ್ಯ ಸರ್ಕಾರ ನಿರಂತರ ಯತ್ನದ ಮೂಲಕ ಈ ಕಾರ್ಯ ಮಾಡಬೇಕು ಎಂದರು.
ಈಗಾಗಲೇ ಬೆಂಗಳೂರಿನಲ್ಲಿ ಡೀಮ್ಡ್ ಅರಣ್ಯ ಪ್ರದೇಶ ಕುರಿತು ಮೂರು ಬಾರಿ ಸಭೆ ಜರುಗಿದ್ದು ಮಲೆನಾಡು ಮತ್ತು ಕಲಬುರಗಿ ವಿಭಾಗದಲ್ಲಿ ಬಗರಹುಕುಂ ಭೂಮಿ ಹಂಚಿಕೆ ಸಾವಿರಾರು ಅರ್ಜಿ ವಿಲೇವಾರಿ ಬಾಕಿ ಉಳಿದಿವೆ. ಈ ನಿಟ್ಟಿನಲ್ಲಿ ತಾವು ನಿರಂತರ ಸರ್ಕಾರದ ಗಮನ ಸೆಳೆಯುವ ಕಾರ್ಯ ಮಾಡಬೇಕು ಎಂದರು.
ನಿರೀಕ್ಷಿತ ಪ್ರಗತಿ ಆಗಿಲ್ಲ: ಬಹು ನಿರೀಕ್ಷೆಯ ಜತೆಗೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ರಾಜ್ಯದ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕೋವಿಡ್ ಮತ್ತು ಪ್ರವಾಹದಿಂದ ಸುಮಾರು 85 ಸಾವಿರ ಕೋಟಿಯಷ್ಟು ನಷ್ಟ ಸಂಭವಿಸಿದ್ದು ಪ್ರಗತಿ ಕಾರ್ಯಕ್ಕೆ ತೊಡಕುಂಟಾಗಿದೆ ಎಂದರು.
ಇದನ್ನೂ ಓದಿ :ಶಾರದಾ ಆಚಾರ್ಯರ ನಿಧನಕ್ಕೆ ನಳಿನ್ ಕುಮಾರ್ ಕಟೀಲ್ ಸಂತಾಪ
ಈ ಸಂದರ್ಭದಲ್ಲಿ ಮಾಜಿ ಸಂಸದ ಎಚ್.ಜಿ. ರಾಮುಲು, ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ, ಚಿತ್ರ ನಟ ಅರ್ಜುನ್ ಕುಮಾರ ಬಂಗಾರಪ್ಪ, ಬಿಜೆಪಿ ಮುಖಂಡ ಜೋಗದ ಹನುಮಂತಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ವೀರನಗೌಡ, ನಗರಸಭೆ ಸದಸ್ಯ ಮಹಮದ್ ಉನ್ಮಾನ ಬಿಚ್ಚಗತ್ತಿ, ಎಚ್.ಆರ್. ಭರತ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.