ಆನೆಗೊಂದಿ ಸಂಸ್ಥಾನದ ಕುಪ್ಪಮ್ಮ ರಾಣಿಯ ಶಾಸನ ಸಾಣಾಪೂರದಲ್ಲಿ ಪತ್ತೆ
Team Udayavani, Apr 4, 2023, 2:08 PM IST
ಗಂಗಾವತಿ : ವಿಜಯನಗರ ಪತನದ ನಂತರ ಬ್ರಿಟಿಷ್ ಆಗಮನದ ವರೆಗೂ ಅಸ್ತಿತ್ವದಲ್ಲಿ ಆನೆಗೊಂದಿ ಸಂಸ್ಥಾನದ ಕುರಿತು ಮಾಹಿತಿಯುಳ್ಳ ಶಿಲಾಶಾಸನಯೊಂದು ತಾಲೂಕಿನ ಸಾಣಾಪೂರ ಗ್ರಾಮದಲ್ಲಿ ಪತ್ತೆಯಾಗಿದೆ.
ಆನೆಗೊಂದಿ ನರಪತಿ ಸಂಸ್ಥಾನದ ರಾಣಿ ಕುಪ್ಪಮ್ಮ ಶಾಸನವನ್ನು ಗಂಗಾವತಿಯ ಇತಿಹಾಸ ಸಂಶೋಧಕ ಡಾ. ಶರಣಬಸಪ್ಪ ಕೋಲ್ಕಾರ್ ಸಂಶೋಧಿಸಿದ್ದಾರೆ.
ಸಾಣಾಪೂರ ಗ್ರಾಮದ ತುಂಗಭದ್ರಾ ನದಿಗೆ ನಿರ್ಮಿಸಿರುವ ಡ್ಯಾಂ ಎಡ ಭಾಗದ ಮೇಲಿನ ಗಂಗಾಪರಮೇಶ್ವರಿ ದೇವಾಲಯದಲ್ಲಿ ಈ ಶಾಸನ ಪತ್ತೆಯಾಗಿದೆ
12 ಸಾಲುಗಳಲ್ಲಿರುವ ಈ ಶಾಸನ 1309ರ ಫಸಲಿ ವರ್ಷವನ್ನು ಉಲ್ಲೇಖಿಸುತ್ತಿದ್ದು ಅದು ಕ್ರಿ.ಶ. 1899 ಕ್ಕೆ ಸರಿ ಹೊಂದುತ್ತದೆ. ಶಾಸನವು ರಾಣಿ ಕುಪ್ಪಮ್ಮನವರ ಅಭಿಪ್ರಾಯದಂತೆ ಶ್ರೀರಂಗ ದೇವರಾಯ ಮಹಾರಾಯರ ಅಪ್ಪಣೆ ಪ್ರಕಾರ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ನಂದ್ಯಾಲ್ ನಾರಾಯಣ ರಾಜರು ಶಾಸನವಿರುವ ದೇವಾಲಯವನ್ನು ಕಟ್ಟಿಸಿದ ವಿಷಯವನ್ನು ತಿಳಿಸುತ್ತದೆ.
ಆನೆಗೊಂದಿ ನರಪತಿ ಸಂಸ್ಥಾನದ ಧೀಮಂತ ರಾಣಿಯಾಗಿದ್ದ ರಾಣಿ ಕುಪ್ಪಮ್ಮ ತನ್ನ ಗಂಡ ಕೃಷ್ಣದೇವರಾಯನ ಅಕಾಲಿಕ ಮರಣಾದ ನಂತರ ಬ್ರಿಟಿಷರ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಧಿಕ್ಕರಿಸಿ ಸಂಸ್ಥಾನವನ್ನು ಉಳಿಸಿಕೊಳ್ಳಲು ತನ್ನ ತಮ್ಮ ಪಂಪಾಪತಿರಾಜುವನ್ನು ದತ್ತು ಪಡೆದು ಶ್ರೀರಂಗದೇವರಾಯನೆಂದು ನಾಮಕರಣ ಮಾಡಿ ಪಟ್ಟಕ್ಕೆ ಕೂಡಿಸಿದಳು. ಅಲ್ಪವಯಸ್ಕ ನಾಗಿದ್ದ ಮಗನ ಪರವಾಗಿ ತಾನೇ ಆಡಳಿತ ನಡೆಸಿದಳು. ಜನಾನುರಾಗಿದ್ದ ಈಕೆ ಹಲವು ದಾನ ಧರ್ಮಗಳನ್ನು ಮಾಡಿದ್ದಾಳೆ.ಈಗಾಗಲೇ ರಾಣಿಯ ಹಲವು ಶಾಸನಗಳು ದೊರೆತಿದ್ದು ಅವು ವಾಲ್ಮೀಕಿ ಜನಾಂಗದ ಗುರುತ್ವ ಧಾರಣೆಯನ್ನು ರಾಣಿ ವಹಿಸಿಕೊಂಡ ಬಗ್ಗೆ, ಕಂಪ್ಲಿ ಕಲ್ಮಠಕ್ಕೆ ಹಂಪಿಯಲ್ಲಿ ದಾಸೋಹಕ್ಕಾಗಿ ಮಂಟಪವೊಂದನ್ನು ದಾನ ನೀಡಿದ ಬಗ್ಗೆ ತಿಳಿಸುತ್ತವೆ.
ಪ್ರಸ್ತುತ ಶಾಸನ ದೇವಾಲಯ ನಿರ್ಮಾಣದ ಬಗ್ಗೆ ತಿಳಿಸುವುದರ ಮೂಲಕ ರಾಣಿಯ ಕಾರ್ಯ ಚಟುವಟಿಕೆಗಳನ್ನು ಮತ್ತಷ್ಟು ತಿಳಿಯಲು ಸಹಾಯಕವಾಗಿದೆ.
ಈ ಶಾಸನ ಸಂಶೋಧನೆಯಲ್ಲಿ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಭಜರಂಗಬಲಿ ಗೌಡಪ್ಪನೂರ್ , ಆನೆಗೊಂದಿ ಸತ್ಯರಾಜು, ಪತ್ರಕರ್ತ ಮಂಜುನಾಥ್ ಗುಡ್ಲಾನೂರ ನೆರವಾಗಿದ್ದಾರೆ ಎಂದು ಡಾ. ಕೋಲ್ಕಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.