![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 24, 2023, 9:37 PM IST
ಕುಷ್ಟಗಿ : ಪಾಕಿಸ್ಥಾನ ಧ್ವಜವನ್ನು ಮೊಬೈಲ್ ಸ್ಟೇಟಸ್ ಹಾಕಿಕೊಂಡ ಯುವಕನನ್ನು ದೇಶದ್ರೋಹ ಆರೋಪದ ಮೇರೆಗೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಪಂಚರ್ ಶಾಪ್ ನ ರಾಜೇಸಾಬ್ ಮಹ್ಮದ್ ಸಾಬ್ ನಾಯಕ ಎಂಬ ಯುವಕ ತನ್ನ ಮೊಬೈಲ್ ನಲ್ಲಿ ಪಾಕ್ ಧ್ವಜದ ಸ್ಟೇಟಸ್ ಹಾಕಿಕೊಂಡಿದ್ದ. ಅಲ್ಲದೇ ಶುಕ್ರವಾರ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮಕ್ಕೆ ಪಾಕಿಸ್ಥಾನ ಬಾಂಧವರಿಗೆ ಸ್ವಾಗತ ಕೋರಿದ್ದ.
ಈ ಬೆಳವಣಿಗೆಯನ್ನೂ ಹಿಂದೂ ಸಂಘಟನೆಯ ಕಾರ್ಯಕರ್ತ ಗುಡಸಲಿ ಅವರು ಖಂಡಿಸಿ ಸ್ಥಳೀಯ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿ ದೇಶದ್ರೋಹದ ಆರೋಪದ ಮೇರೆಗೆ ಬಂಧಿಸಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕುಷ್ಟಗಿ ಸಿಪಿಐ ಯಶವಂತ ಬಿಸನಳ್ಳಿ ಅವರು, ಯುವಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ತಾವರಗೇರಾ ಪೊಲೀಸ್ ಠಾಣೆಯೆಲ್ಲಿ ಪ್ರಕರಣ ದಾಖಲಾಗಿದೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
You seem to have an Ad Blocker on.
To continue reading, please turn it off or whitelist Udayavani.