ಕುಷ್ಟಗಿ: ಸಿದ್ದರಾಮಯ್ಯ ಹೀರೋ, ಯಾವತ್ತಿಗೂ ಸೋಲೋದೇ ಇಲ್ಲ: ನಟ ಎಸ್. ನಾರಾಯಣ
Team Udayavani, Jan 21, 2023, 2:55 PM IST
ಕುಷ್ಟಗಿ: ಸಿದ್ದರಾಮಯ್ಯ ಹೀರೋ, ಯಾವತ್ತಿಗೂ ಸೋಲೋದೇ ಇಲ್ಲ. ಅವರದ್ದು ದೊಡ್ಡ ಗೆಲುವು. ಗೆಲವು ಒಂದೇ ಅಂತಿಮ ಅಂತರ ಮುಖ್ಯವಾಗದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸದಸ್ಯ, ಸಿನಿಮಾ ನಟ ಎಸ್. ನಾರಾಯಣ ಹೇಳಿದರು.
ಕಲಬುರಗಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿ ಇಲ್ಲಿನ ಸರ್ಕ್ಯೂಟ್ ಹೌಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಎಲ್ಲೆಡೆ ವ್ಯಾಪಕವಾಗಿ ಕಾಂಗ್ರೆಸ್ ಅಲೆ ಇದೆ. ಹೀಗಾಗಿ ಕಾಂಗ್ರೆಸ್ ಬಹು ದೊಡ್ಡ ಪಕ್ಷವಾಗಿ ಹೊರ ಹೊಮ್ಮುವ ವಿಶ್ವಾಸ ವ್ಯಕ್ತಪಡಿಸಿದ ಅವರು, ನಮ್ಮ ಪಕ್ಷವೇ ಸರ್ಕಾರ ರಚಿಸಲಿದೆ ಎಂದರು.
ಸಿದ್ದರಾಮಯ್ಯ..ಡಿ.ಕೆ.ಶಿವಕುಮಾರ ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕೂಸು ಹುಟ್ಟುವ ಮುಂಚೆ ಕುಲಾಯಿ ಯಾಕ್ರೀ ಎಂದು ಹಾಸ್ಯ ಚಟಾಕಿ ಹಾರಿಸಿದರು.
ಪ್ರಸ್ತುತ ರಾಜಕಾರಣದಲ್ಲಿ ಅಸಂವಿಧಾನಿಕ ಪದ ಬಳಕೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ನಾಲಿಗೆ ನಾಗರೀಕತೆ ಹೇಳುತ್ತದೆ. ಜನಪ್ರತಿನಿಧಿಗಳು ಆಡುವ ಮಾತು ಸಮಾಜದ ಮೇಲೆ ಪರಿಣಾಮ ಬೀರಲಿದೆ. ಜನಪ್ರತಿನಿಧಿಗಳು ಏನೇ ಮಾತನಾಡಿದರೂ ನಾಲಿಗೆಯ ಮೇಲೆ ನಿಗಾ ಇಟ್ಟು ಮಾತನಾಡಬೇಕು. ಒಮ್ಮೆ ಅನಾಗರೀಕವಾಗಿ ಮಾತನಾಡಿದ್ದನ್ನು ವಾಪಸ್ಸು ಪಡೆಯಲು ಸಾದ್ಯವಿಲ್ಲ. ಹೀಗಾಗಿ ಎಚ್ಚರಿಕೆಯಿಂದ ಮಾತನಾಡಬೇಕು ಅದು ಜನಪ್ರತಿನಿಧಿಗಳ ಕರ್ತವ್ಯ ಆಗಿದೆ ಎಂದರು.
ಕಳೆದ ಚುನಾವಣೆಯಲ್ಲಿ ಸಣ್ಣ ಎಡವಟ್ಟಿನಿಂದಾಗಿ ನಮ್ಮ ಪಕ್ಷಕ್ಕೆ ಹಿನ್ನೆಡೆಯಾಗಿರುವ ಅರಿವು ಜನಸಾಮಾನ್ಯರ ಮೇಲೆ ಆಗಿದೆ. ಹೀಗಾಗಿ ನಮ್ಮ ಪಕ್ಷವೂ ಹೆಚ್ಚು ಸ್ಥಾನಗಳ ಗೆಲುವು ಸಾಧಿಸಲಿದೆ ಎಂದರು.
ಕಾಂಗ್ರೆಸ್ ಯುವ ಮುಖಂಡ ದೊಡ್ಡಬಸನಗೌಡ ಪಾಟೀಲ ಬಯ್ಯಾಪೂರ, ಲಾಡ್ಲೆಮಷಾಕ್ ದೋಟಿಹಾಳ, ಪುರಸಭೆ ಸದಸ್ಯರಾದ ಸಯ್ಯದ ಖಾಜಾ ಮೈನುದ್ದೀನ ಮುಲ್ಲಾ, ಚಿರಂಜೀವಿ ಹಿರೇಮಠ,ಮಹಿಬೂಬಸಾಬ್ ಕಮ್ಮಾರ ರಾಮಣ್ಣ ಬಿನ್ನಾಳ, ಉಮೇಶ ಮಂಗಳೂರು, ಹನುಮಂತಪ್ಪ ನಾಯಕ್, ಮಂಜುನಾಥ ಕಟ್ಟಿಮನಿ, ಶೌಕತ್ ಕಾಯಿಗಡ್ಡಿ, ಹನುಮೇಶ ಬೋವಿ ಬಸವರಾಜ ತುಂಬರಗುದ್ದಿ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.