ಕುಷ್ಟಗಿ: ಹಲವು ವರ್ಷಗಳ ಬೇವು ಹಾಗೂ ಆಲದ ಮರ ಕಡಿತ
ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಮರ ಕಡಿತ
Team Udayavani, Sep 28, 2022, 2:26 PM IST
ಕುಷ್ಟಗಿ: ಯರಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಲವು ವರ್ಷದ ಬೇವು ಹಾಗೂ ಆಲದ ಮರಗಳನ್ನು ನೆಲಕ್ಕುರುಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಶಾಲಾ ಆವರಣದಲ್ಲಿ ಮಕ್ಕಳಿಗೆ ನೆರಳಾಗಿದ್ದ ಒಂದು ಆಲದ ಮರ ಹಾಗೂ ನಾಲ್ಕು ಬೇವಿನ ಮರಗಳನ್ನು ಕಡಿಯಲು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಮರಗಳ ಮಾರಣ ಹೋಮ ನಡೆದಿದೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಸೇರಿ ಈ ಮರಗಳಿಗೆ ಕೊಡಲಿ ಏಟು ನೀಡಿದ್ದಾರೆ. ಅರಣ್ಯ ಇಲಾಖೆಯವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಕರವೇ ಅಧ್ಯಕ್ಷ ವಿಜಯಕುಮಾರ ಮಾಳಶೆಟ್ಟಿ, ಅಶೋಕ ಉಪ್ಪಾರ, ಸಂತೋಷ ಗುತ್ತೇದಾರ, ವಕೀಲರಾದ ರವಿಕುಮಾರ ಈಡಿಗ ಒತ್ತಾಯಿಸಿದ್ದಾರೆ.
ಯರಗೇರಾ ಸರ್ಕಾರಿ ಶಾಲಾ ಆವರಣದಲ್ಲಿರುವ ಗಿಡಗಳ ತೆರವಿಗೆ ಅರಣ್ಯ ಇಲಾಖೆ ಗಮನಕ್ಕೆ ತರದೇ ನಾಶ ಮಾಡಿರುವುದು ಅಕ್ಷಮ್ಯ. ಸಾರ್ವಜನಿಕರ ದೂರಿನ ಮೇರೆಗೆ ಶಾಲೆಯ ಮುಖ್ಯ ಶಿಕ್ಷಕ ಹೇಮಲಪ್ಪ ನಾಯಕ ವಿರುದ್ದ ಎಫ್‌ಐಅರ್ ದಾಖಲಾಗಿದೆ ಎಂದು ಹನುಮಸಾಗರ ಉಪವಲಯ ಅರಣ್ಯಾಧಿಕಾರಿ ಹನಮಂತಪ್ಪ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.