ಕುಷ್ಟಗಿ: ಶಿವಾಜಿ ಜಯಂತ್ಯೋತ್ಸವ ಮೆರವಣಿಗೆ; ಸೌಹಾರ್ದ ಮೆರೆದ ಮುಸ್ಲಿಮರು
Team Udayavani, Mar 1, 2023, 6:04 PM IST
ಕುಷ್ಟಗಿ: ಕುಷ್ಟಗಿಯಲ್ಲಿ ಬುಧವಾರ ಛತ್ರಪತಿ ಶಿವಾಜಿ ಜಯಂತ್ಯೋತ್ಸವದ ಆಚರಣೆಯ ಕೇಸರಿ ಧ್ವಜ ಮೆರವಣಿಗೆಯಲ್ಲಿ ಕಾರ್ಯಕರ್ತರಿಗೆ ಮುಸ್ಲಿಂ ಬಾಂಧವರು ಸ್ವಯಂ ಪ್ರೇರಿತರಾಗಿ ಪಾನಕ ವಿತರಿಸಿ ಸೌಹಾರ್ದ ಮೆರೆದರು.
ಇಲ್ಲಿನ ಕಾರ್ಗಿಲ್ ವೃತ್ತದಲ್ಲಿ ಆರಂಭಗೊಂಡ ಮೆರವಣಿಗೆಯಲ್ಲಿ ಕಾರ್ಯಕರ್ತರು 200 ಮೀಟರ್ ಉದ್ದದ ಕೇಸರಿ ಧ್ವಜಾವನ್ನು ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜೈ ಜೈ ಶಿವಾಜಿ ಘೋಷಣೆ, ಭಗವಧ್ವಜ ಹಿಡಿದು ಸಂಚರಿಸಿ ಸಂಭ್ರಮಿಸಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯ ಸಂದರ್ಭದಲ್ಲಿ ತೆಗ್ಗಿನ ಓಣಿಯ ಮುಸ್ಲಿಂ ಬಾಂಧವರು, ಬಿಸಿಲಿನಲ್ಲಿ ಬಾಯಾರಿದ ಕಾರ್ಯಕರ್ತರಿಗೆ ತಂಪನೆಯ ಪಾನಕ ವಿತರಿಸಿದರು. ಈ ವೇಳೆ ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ ಅವರು ಮಾತನಾಡಿ ಹಿಂದೂ-ಮುಸ್ಲಿಂ ಭಯದ ವಾತವರಣದಲ್ಲಿ ಛತ್ರಪತಿ ಶಿವಾಜಿ ಜಯಂತ್ಯೋತ್ಸವ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಶಿವಾಜಿ ಕಾರ್ಯಕರ್ತರಿಗೆ ಪಾನಕ ನೀಡಿರುವುದು ಸೌಹಾರ್ದ ವಾತವರಣ ಸೃಷ್ಟಿಸಿರುವುದು ಸಂತಸದ ಸಂಗತಿ ಎಂದರು. ನೇತೃತ್ವವನ್ನು ರವಿಕುಮಾರ ಹಿರೇಮಠ, ಮಲ್ಲಿಕಾರ್ಜುನ ಮಸೂತಿ, ಪ್ರಭು ಶಂಕರಗೌಡ ಪಾಟೀಲ, ಪರಶುರಾಮ್ ನಾಗರಾಳ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.