ಕುಷ್ಟಗಿ: ಅದ್ದೂರಿಯಾಗಿ ನಡೆದ ಶ್ರೀ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವ
Team Udayavani, Feb 5, 2023, 7:59 PM IST
ಕುಷ್ಟಗಿ:ಪಟ್ಟಣದ ಆರಾಧ್ಯ ದೈವ ಶ್ರೀ ಬುತ್ತಿ ಬಸವೇಶ್ವರ ಜಾತ್ರಾ ಮಹೋತ್ಸವದ ಮಹಾ ರಥೋತ್ಸವ ಭಾನುವಾರ ಸಂಜೆ ಅದ್ದೂರಿಯಾಗಿ ನಡೆಯಿತು.
ಬೆಳಗ್ಗೆ ಶ್ರೀ ಬುತ್ತಿ ಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ನಂತರ ಇಲ್ಲಿನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಿಂದ ನಂದೀಶ್ವರ ಮೂರ್ತಿ ಹಾಗೂ ತೇರಿನ ಕಳಶದೊಂದಿಗೆ ಸಕಲ ವಾದ್ಯಗಳ ಸಮೇತ ಮೆರವಣಿಗೆ ನಡೆಯಿತು. ಮಧ್ಯಾಹ್ನ ದೇವಸ್ಥಾನ ಆವರಣದಲ್ಲಿ ಮಹಾ ದಾಸೋಹ ನೆರವೇರಿತು.
ಸಂಜೆ ಗೋಧೂಳಿ ಸಮಯದಲ್ಲಿ ಕೊರಡಕೇರಾದ ಹಾಲುಮತ ಭಕ್ತರಿಂದ ರಥದ ಹಗ್ಗವನ್ನು ಮೆರವಣಿಗೆಯಲ್ಲಿ ದೇವಸ್ಥಾನ ಆವರಣದ ರಥದವರೆಗೆ ತರಲಾಯಿತು. ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನಮಠದ ಶ್ರೀ ಮುಪ್ಪಿನ ಬಸವಲಿಂಗ ದೇವರು ಸಾನಿಧ್ಯದಲ್ಲಿ ಮಹಾರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಭಕ್ತಾಧಿಗಳು ಭಾವ ಪರವಶರಾಗಿ ರಥವನ್ನು ಪಾದಗಟ್ಟೆಯಿಂದ ಪುನಃ ರಥದ ಮನೆಯವರೆಗೂ ಎಳೆದು ಭಕ್ತಿ ಸೇವೆ ಸಲ್ಲಿಸಿ ಮಹಾ ರಥೋತ್ಸವ ವನ್ನು ಸಂಪನ್ನಗೊಳಿಸಿದರು. ಈ ಸಂಧರ್ಭದಲ್ಲಿ ಭಕ್ತಾಧಿಗಳು ಸಾಗಿದ ರಥಕ್ಕೆ ಉತ್ತತ್ತಿ ಎಸೆದು ಧನ್ಯತಾಭಾವ ಸಮರ್ಪಿಸಿದರು. ನಂತರ ಬಾಣಬಿರುಸು ಪ್ರದರ್ಶನ ನಡೆಯಿತು. ಹಾಲಕೆರೆ ಅನ್ನದಾನೇಶ್ವರ ಸಂಸ್ಥಾನಮಠದ ಶ್ರೀ ಮುಪ್ಪಿನ ಬಸವಲಿಂಗ ದೇವರು ಸಾನಿಧ್ಯದಲ್ಲಿ ಆಧ್ಯಾತ್ಮಿಕ ಪ್ರವಚನ ಜರುಗಿತು.
ಕುಷ್ಟಗಿ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ಸಾಗಿದ ರಥಕ್ಕೆ ಉತ್ತತ್ತಿ ಎಸೆದು ಭಕ್ತಿ ಸೇವೆಯ ಮೂಲಕ ಪುನೀತರಾದರು. ನಾಗಲಾಪುರ ಕುರಗಗೋಡು ವಿರಕ್ತವ್ಮಠದ ನಿರಂಜನಪ್ರಭು ದೇವರು, ಸೋಮ ಸಮುದ್ರ ವಿರಕ್ತಮಠದ ಸಿದ್ದಲಿಂಗದೇವರು, ಶ್ರೀಧರಗಡ್ಡಿ ಮರಿಕೊಟ್ಟೂರು ದೇವರು, ವ್ಯಾಕರನಾಳ ವೀರೇಶ್ವರ ದೇವರು ಪಾಲ್ಗೊಂಡಿದ್ದರು. ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಸಿಪಿಐ ನಿಂಗಪ್ಪ ರುದ್ರಪ್ಪಗೋಳ. ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಜೇಶ ಪತ್ತಾರ, ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.