ಕಾಂಗ್ರೆಸ್ ಭಿನ್ನರ ಬಗ್ಗೆ ಕುಷ್ಟಗಿ ಶಾಸಕ ಬಯ್ಯಾಪೂರ ನೋ ಕಾಮೆಂಟ್
Team Udayavani, Nov 11, 2022, 7:15 PM IST
ಕುಷ್ಟಗಿ: ಕಾಂಗ್ರೆಸ್ ಪಕ್ಷದ ಅತೃಪ್ತ ಕೆಲವರ ಬಂಡಾಯದ ಬಗ್ಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ನೋ ಕಾಮೆಂಟ್ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆಲವು ಭಿನ್ನಮತೀಯರ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕರು, ಪಕ್ಷವೆಂದ ಮೇಲೆ ಹಲವು ಜನ ಆಕಾಂಕ್ಷಿ ಇರಬಹುದು ಅವರಲ್ಲಿ ಇವರು ( ಪ್ರಭಾಕರ ಚಿಣಿ) ಒಬ್ಬರಾಗಿದ್ದಾರೆ. ಇದರ ಬಗ್ಗೆ ಮಾಹಿತಿ ಇಲ್ಲ ಮಾಧ್ಯಮಗಳಿಂದ ತಿಳಿದುಕೊಂಡಿರುವೆ ಎಂದಿದ್ದಾರೆ.
ಬೆಳವಣಿಗೆ ಬಗ್ಗೆ ಏನೂ ಪ್ರತಿಕ್ರಿಯಿಸುವುದಿಲ್ಲ, ಪ್ರತಿಕ್ರಿಯಿಸುವ ಅಗತ್ಯವೂ ನನಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಅರ್ಜಿ ಸಲ್ಲಿಸಬಹುದಾಗಿದೆ. ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಭಿನ್ನಮತ ಸಹಜವಾಗಿರುತ್ತದೆ ಇದನ್ನು ನಮ್ಮ ನಾಯಕರು ಸರಿಪಡಿಸಲಿದ್ದಾರೆ ಎಂದರು.
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕೆಬಿಜೆ ಎನ್ ಎಲ್ ನಿವೃತ್ತ ಪ್ರಧಾನ ಇಂಜಿನಿಯರ್ ಪ್ರಭಾಕರ ಚಿಣಿ ಟಿಕೆಟ್ ಆಕಾಂಕ್ಷಿ ಎಂದು ಗುರುವಾರ ಬೆಂಗಳೂರಿನಲ್ಲಿ ಪಕ್ಷದ ಕಾರ್ಯದರ್ಶಿ ನಾರಾಯಣ ಅವರಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಪರಶುರಾಮ ನಾಗರಾಳ, ಚಂದಪ್ಪ ತಳವಾರ, ಹನುಮಂತಪ್ಪ ಚೌಡಕಿ, ಅಶೋಕ ಬಳೂಟಗಿ, ಸಯ್ಯದಸಾಬ್ ಅತ್ತಾರ, ಪುರಸಭೆ ಕಾಂಗ್ರೆಸ್ ಸದಸ್ಯ ವಸಂತ ಮೇಲಿನಮನಿ, ಯಲ್ಲಪ್ಪ ಗದ್ದಿ,ಚಂದಪ್ಪ ಹೊಟ್ಟಿ, ಶಂಕ್ರಯ್ಯ ಕಂಪಾಪೂರಮಠ, ಪುರಸಭೆ ಪಕ್ಷೇತರ ಸದಸ್ಯ ಅಂಬಣ್ಣ ಭಜಂತ್ರಿ, ವೀರೇಶ ಬಂಗಾರಶೆಟ್ಟರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.