ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಸಿಕ್ಕಿಲ್ಲ ಸೌಲಭ್ಯ
Team Udayavani, Feb 22, 2020, 2:33 PM IST
ಕಾರಟಗಿ: ಗ್ರಾಪಂನಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದರೂ ಪಟ್ಟಣದ ಕೆಲ ವಾರ್ಡ್ ಗಳಲ್ಲಿ ಮೂಲಸೌಕರ್ಯ ಇಲ್ಲದಂತಾಗಿವೆ. ಪಟ್ಟಣದ 2 ಮತ್ತು 3ನೇ ವಾರ್ಡ್‌ನಲ್ಲಿ ಕುಡಿವ ನೀರಿಗಾಗಿ ಕೊರೆಯಿಸಿದ ಬೋರ್‌ವೆಲ್ ಗಳಿವೆ. ಆದರೂ ಸಮರ್ಪಕ ಕುಡಿವ ನೀರು ಪೂರೈಕೆಯಿಲ್ಲ. ಕಿರು ನೀರಿನ ತೊಟ್ಟಿಗಳಿವೆ ಆದರೆ ಸಮರ್ಪಕ ನಿರ್ವಹಣೆ ಇಲ್ಲ. ಎರಡು ಕೈಪಂಪ್ ಕೊಳವೆಬಾವಿಗಳಿವೆ ಅದರಲ್ಲಿ ಒಂದು ದುರಸ್ತಿಗೀಡಾಗಿ 7 ತಿಂಗಳು ಕಳೆದರೂ ಪುರಸಭೆ ಸಿಬ್ಬಂದಿ ದುರಸ್ತಿಗೆ ಮುಂದಾಗಿಲ್ಲ.
ಗ್ರಾಪಂ ಅಧಿಕಾರವ ಧಿಯಲ್ಲಿ ನಿರ್ಮಿಸಿದ ಮಹಿಳಾ ಶೌಚಾಲಯವಿದೆ. ಆದರೂ ಪುರಸಭೆ ವತಿಯಿಂದ 2, 3ನೇ ವಾರ್ಡ್ ಗಳಲ್ಲಿ 2017-18ನೇ ಸಾಲಿನ 14ನೇ ಹಣಕಾಸು ಯೋಜನೆಯಡಿ ನಿರ್ಮಿಸಿದ ಮಹಿಳಾ ಸಮುದಾಯ ಶೌಚಾಲಯಗಳಿಗೆ ನೀರು ಪೂರೈಕೆಯಿಲ್ಲ. ದೀಪದ ವ್ಯವಸ್ಥೆ ಇಲ್ಲ. ಇದರಿಂದಾಗಿ ವಾರ್ಡ್ ಮಹಿಳೆಯರು ಹಳೆಯ ಶೌಚಾಲಯವನ್ನೇ ಬಳಸುತ್ತಿದ್ದಾರೆ. ಬೀದಿದೀಪಗಳ ವ್ಯವಸ್ಥೆ ಇಲ್ಲವಾಗಿದೆ.
ನಿರ್ವಹಣೆಗಾರರ ತಾರತಮ್ಯ ನೀತಿಯಿಂದ ಕೆಲ ವಾರ್ಡ್‌ಗಳಲ್ಲಿ ಸೌಲಭ್ಯಗಳು ಕಾಣುವುದು ಅಪರೂಪ. ಬೀದಿ, ದೀಪಗಳಿಲ್ಲದೆ ವಾರ್ಡ್ ನಲ್ಲಿ ಕತ್ತಲಲ್ಲಿ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಚರಂಡಿಗಳ ತ್ಯಾಜ್ಯಗಳ ನಿರ್ವಹಣೆ ಇಲ್ಲದೇ ಸೊಳ್ಳೆಗಳು ಹುಟ್ಟಿಕೊಂಡು ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಈಗಾಗಲೇ ವಾರ್ಡ್‌ನ ಹಲವಾರು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಮಸ್ಯೆಗಳ ಕುರಿತು ವಾರ್ಡ್ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಪುರಸಭೆಗೆ ಸರಕಾರದಿಂದ ಸಾಕಷ್ಟು ಅನುದಾನ ಬರುತ್ತಿದ್ದರೂ ಅಭಿವೃದ್ಧಿ ಕಾರ್ಯಗಳಿಗೆ ಸಮರ್ಪಕವಾಗಿ ವಿನಿಯೋಗವಾಗದೇ ದುರ್ಬಳಕೆಯಾಗುತ್ತಿದೆ. ಅಲ್ಲದೆ ಸ್ಥಳೀಯವಾಗಿ ಪುರಸಭೆಗೆ ಸಾಕಷ್ಟು ಅದಾಯವಿದೆ ಆದರೂ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಅಭಿವೃದ್ಧಿ ಶೂನ್ಯವಾಗಿದೆ ಎನ್ನುತ್ತಾರೆ ವಾರ್ಡ್ ನಿವಾಸಿಗಳು. ಯಾರಿಗೆ ಹೇಳಿದರೂ ವಾರ್ಡ್ ಸಮಸ್ಯೆ ಪರಿಹಾರವಾಗಿಲ್ಲ. ನೀರಿಗಾಗಿ ಹೊಲಗದ್ದೆಗಳಿಗೆ ಅಲೆಯುವುದು ವಾರ್ಡ್ ಸದಸ್ಯರಿಗೆ ನಿತ್ಯ ಕಂಡರೂ ಕೂಡ ಚಕಾರವೆತ್ತುತ್ತಿಲ್ಲ. ವಾರ್ಡ್ ಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿ, ಕುಡಿವ ನೀರಿಗೆ ಪೈಪ್‌ಲೈನ್ ಮಾಡಿಸಿ ಎಂದು ಮನವಿ ಮಾಡಿದ್ದೇವೆ ಆದರೂ ನೀರು ಪೂರೈಕೆ ಮಾಡುತ್ತಿಲ್ಲ ಎಂದು ವಾರ್ಡ್ ನಿವಾಸಿ ಕನಕಮ್ಮ ಅಳಲು ತೋಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.