ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆಗೆ ನೀರಿನ ಕೊರತೆ: ಆತಂಕದಲ್ಲಿ ರೈತರು


Team Udayavani, Feb 23, 2023, 1:26 PM IST

TDY-8

ಗಂಗಾವತಿ: ತುಂಗಭದ್ರಾ ಡ್ಯಾಂ ನಲ್ಲಿ ನೀರಿನ ಸರಿಯಾದ ನಿರ್ವಹಣೆ ಇಲ್ಲದೇ ನೀರಿನ  ಕೊರತೆ ಉಂಟಾಗಿದೆ. ಇದರಿಂದ ಮುಂಗಾರು ಹಂಗಾಮಿನಲ್ಲಿ ಬೆಳೆದು ನಿಂತಿರುವ ಭತ್ತ ಹಾಗೂ ಇತರೆ ಬೆಳೆ ರೈತರ ಕೈ ಸೇರುವುದು ಅನುಮಾನವಾಗಿದ್ದು ಅಚ್ಚುಕಟ್ಟು ಪ್ರದೇಶದ ರೈತರು ಆತಂಕದಲ್ಲಿದ್ದಾರೆ.

ಸದ್ಯ ಡ್ಯಾಂನಲ್ಲಿ 33.286 ಟಿಎಂಸಿ  ನೀರಿನ ಸಂಗ್ರಹವಿದ್ದು ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಏ.10 ವರೆಗೆ ಎಡದಂಡೆ ಕಾಲುವೆಗೆ ನೀರು ಹರಿಸಲಾಗುತ್ತದೆ. ನೀರಿನ ಕೊರತೆಯ ಹಿನ್ನೆಲೆಯಲ್ಲಿ ಮಾ.20 ವರೆಗೆ ಮಾತ್ರ ಕಾಲುವೆಗೆ ನೀರು ಹರಿಸುವ ಸಾಧ್ಯತೆ ಇದೆ. ಇದರಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಭತ್ತ ಹಾಗೂ ಇತರೆ ಬೆಳೆಗಳಿಗೆ ನೀರಿನ ಕೊರತೆಯಾಗಲಿದೆ.

ತುಂಗಭದ್ರಾ ಕಾಡಾ ಮತ್ತು  ಡ್ಯಾಂ ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ನೀರಿನ ಸರಿಯಾದ ನಿರ್ವಾಹಣೆ ಮಾಡದೇ ಕಾಲುವೆ ಮತ್ತು ನದಿಯ‌ ಮೂಲಕ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಕ್ಕೆ ಡಿಸೆಂಬರ್ ತಿಂಗಳಲ್ಲಿ  ಸುಮಾರು 17 ಟಿಎಂಸಿ ನೀರು ಹರಿಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಜಲಾನಯನ ಪ್ರದೇಶದಲ್ಲಿ ಕಳೆದ ವರ್ಷ ಉತ್ತಮ ಸತತ ಮಳೆಯಾಗಿ ಡ್ಯಾಂ ಭರ್ತಿಯಾಗಿ ಹೆಚ್ಚುವರಿ  500 ಟಿಎಂಸಿಗಿಂತಲೂ ಹೆಚ್ಚು ನೀರು ನದಿಗೆ ಹೋಗಿದ್ದು ಹಾಲಿ ಕಾಡಾ ಅಧ್ಯಕ್ಷರು ಸ್ವತಹ ಅಚ್ಚುಕಟ್ಟು ಪ್ರದೇಶದ ನಿವಾಸಿಯಾಗಿದ್ದರೂ ನೀರಿನ ನಿರ್ವಾಹಣೆ ಬಗ್ಗೆ ಕಾಳಜಿ ವಹಿಸಿಲ್ಲ ಎಂಬ ಆರೋಪ  ರೈತರಿಂದ ಕೇಳಿ ಬರುತ್ತಿದೆ.

ಮನವಿ ಸಲ್ಲಿಕೆ: ಬೇಸಿಗೆ ಹಂಗಾಮಿನಲ್ಲಿ  ಬೆಳೆದು ನಿಂತ ಭತ್ತದ ಹಾಗೂ ಇತರೆ ಬೆಳೆಗಳಿಗೆ ತುಂಗಭದ್ರಾ ಡ್ಯಾಂನಲ್ಲಿ 6 ಟಿಎಂಸಿ ನೀರಿನ ಕೊರತೆಯುಂಟಾಗುವ ಸಾಧ್ಯತೆ ಇದೆ. ಸದ್ಯ ಡ್ಯಾಂ ನಲ್ಲಿರುವ ನೀರಿನ‌ ಪ್ರಮಾಣ ಮಾ.20 ವರೆಗೆ ಮಾತ್ರ ಸಿಗುವ ಸಾಧ್ಯತೆ ಇದ್ದು ಬೆಳೆದು ನಿಂತ ಬೆಳೆ ರೈತರ ಕೈ ಸೇರಲು ಭದ್ರ ಡ್ಯಾಂ ನಲ್ಲಿರುವ  ಹೆಚ್ಚು 10 ಟಿಎಂಸಿ ನೀರನ್ನು ತುಂಗಭದ್ರಾ ಡ್ಯಾಂ ಗೆ ಹರಿಸಲು ಕ್ರಮ ಕೈಗೊಳ್ಳುವಂತೆ ಕಾಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ರೈತ ಮುಖಂಡ ತಿಪ್ಪೇರುದ್ರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವಾಲಯದ ಮುಖ್ಯ ಕಾರ್ಯದರ್ಶಿ ರಾಕೇಶ ಸಿಂಗ್ ಸೇರಿ ಸಂಸದರು,ಸಚಿವರು ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.