ಶಾಲಾ ಕೊಠಡಿ ನಿರ್ಮಾಣಕ್ಕೆ ಭೂದಾನಿ ತಕರಾರು
Team Udayavani, Apr 30, 2019, 3:50 PM IST
ದೋಟಿಹಾಳ: ಏನೋ ಮಾಡಲು ಹೋಗಿ, ಏನು ಮಾಡಿದೆ ನೀನು ಎಂಬುವ ಹಾಡಿನಂತೆ ಈ ಶಾಲೆ ಸದ್ಯದ ಪರಿಸ್ಥಿತಿಯಾಗಿದೆ.
ಸಮೀಪ ಮೇಣಸಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2018-19ನೇ ಸಾಲಿನಲ್ಲಿ ಎಚ್ಕೆಆರ್‌ಡಿಪಿ ಯೋಜನೆಯಲ್ಲಿ ಎರಡು ಕೊಠಡಿ ನಿರ್ಮಾಣಕ್ಕೆ ಸುಮಾರು 11 ಲಕ್ಷ ರೂ. ಮಂಜೂರಾಗಿದೆ. ಹೊಸ ಕೊಠಡಿಗಳ ನಿರ್ಮಾಣಕ್ಕೆ ಜಾಗದ ಸಮಸ್ಯೆ ಇರುವುದರಿಂದ ಶಿಥಿಲಗೊಂಡ ಎರಡು ಕೊಠಡಿಗಳನ್ನು ನೆಲಸಮ ಮಾಡಲು ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರು ಸಭೆ ಸೇರಿ ತಿರ್ಮಾನಿಸಿ, ಅದರಂತೆ ಒಪ್ಪಿಗೆ ಪಡೆದುಕೊಂಡು ಶಾಲಾ ಶಿಕ್ಷಕರು ಹಾಗೂ ಗುತ್ತಿಗೆದಾರರು ಕೊಠಡಿ ನೆಲಸಮ ಮಾಡಿದರು. ಇಷ್ಟೇಲ್ಲ ಕೆಲಸ ಮುಗಿಯುತ್ತಿದ್ದಂತೆ ಶಾಲೆಗೆ ಜಾಗ ನೀಡಿದ ಭೂದಾನ ಮಾಡಿದ್ದವರ ಪುತ್ರ ಯಲಗುರಪ್ಪ ನಿಂಗಪ್ಪ ಆಳೂರು ತಮ್ಮ ಜಮೀನಿನಲ್ಲಿ ಹೊಸದಾಗಿ ಶಾಲಾ ಕೊಠಡಿಗಳು ನಿರ್ಮಿಸಬೇಡಿ ಎಂದು ತಕರಾರು ತೆಗೆದಿದ್ದಾರೆ. ಇದರಿಂದ ಇದ್ದ ಎರಡು ಕೊಠಡಿಗಳನ್ನು ಕಳೆದುಕೊಂಡು ಹೊಸ ಕೊಠಡಿಗಳನ್ನು ನಿರ್ಮಿಸಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಮೇಣಸಗೇರಿ ಪ್ರಾಥಮಿಕ ಶಾಲೆಯಲ್ಲಿ 1ರಿಂದ 7ನೇ ತರಗತಿಯವರಗೆ ಸುಮಾರು 130 ಮಕ್ಕಳು ಕಲಿಯುತ್ತಿದ್ದಾರೆ. ಒಟ್ಟು 7 ಕೊಠಡಿಗಳಲ್ಲಿ ಎರಡು ಕೊಠಡಿಗಳನ್ನು ನೆಲಸಮ ಮಾಡಿದ್ದು, ಸದ್ಯ 5 ಕೊಠಡಿಗಳು ಉಳಿದಿವೆ. ಮುಂದಿನ ಶೈಕ್ಷಣಿಕ ವರ್ಷ ಆರಂಭವಾದಾಗ ಮಕ್ಕಳಿಗೆ ಕೊಠಡಿಗಳ ಸಮಸ್ಯೆ ಎದುರಾಗುತ್ತದೆ. ಈಗಿರುವ 5 ಕೊಠಡಿಗಳಲ್ಲಿ ಬಿಸಿಯೂಟದ ಅಡುಗೆ ಕೊಠಡಿ ಹಾಗೂ ಶಾಲಾ ಕಚೇರಿಗೆ 2 ಕೊಠಡಿಗಳನ್ನು ಉಪಯೋಗಿಸಿದರೆ. ಉಳಿದ ಮೂರು ಕೊಠಡಿಗಳಲ್ಲಿ 1ಂದ 7 ತರಗತಿಯ ಮಕ್ಕಳಿಗೆ ಶಿಕ್ಷಣ ನೀಡುವುದು ಕಷ್ಟವಾಗುತ್ತದೆ.
ಈ ಕುರಿತು ಬಸವರಾಜ ಕೊಡಗಲಿ ಅವರನ್ನು ವಿಚಾರಿಸಿದಾಗ, ಎಚ್ಕೆಆರ್‌ಡಿಪಿ ಯೋಜನೆಯಡಿ ಕೊಠಡಿ ನಿರ್ಮಾಣಕ್ಕೆ ಸುಮಾರು 11 ಲಕ್ಷ ರೂ. ಮಂಜೂರಾಗಿದೆ. ಹೊಸ ಕೊಠಡಿಗಳ ನಿರ್ಮಾಣಕ್ಕೆ ಜಾಗದ ಕೊರತೆ ಇದ್ದ ಕಾರಣ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರು ಒಪ್ಪಿಗೆ ಪಡೆದು ಶಿಥಿಲಗೊಂಡ ಕೊಠಡಿಗಳನ್ನು ನೆಲಸಮ ಮಾಡಲಾಗಿದೆ. ಆ ವೇಳೆ ಯಾವುದೇ ತಕರಾರು ಮಾಡದ ಭೂದಾನಿಗಳು ಹೊಸ ಕೊಠಡಿಗಳ ನಿರ್ಮಾಣಕ್ಕೆ ತಕರಾರು ಮಾಡುತ್ತಿದ್ದಾರೆ. ಇದರಿಂದಾಗಿ ಕಾಮಗಾರಿ ಸ್ಥಗಿತಗೊಂಡಿದೆ. ಕೊಠಡಿ ನಿರ್ಮಾಣವಾಗದಿದ್ದರೆ ಶಾಲೆ ಆರಂಭವಾದ ಮೇಲೆ ಮಕ್ಕಳಿಗೆ ಸಮಸ್ಯೆಯಾಗುತ್ತದೆ. ಈ ಬಗ್ಗೆ ಗ್ರಾಮಸ್ಥರು ಚರ್ಚೆ ಮಾಡಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಹಿಂದೇ ನಮ್ಮ ಹಿರಿಯರ ಮೇಲೆ ದಬ್ಟಾಳಿಕೆ ಮಾಡಿ ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದಾರೆ. ಸದ್ಯ ನಮ್ಮ ಜಮೀನಿನಲ್ಲಿ ಯಾವುದೇ ಹೊಸ ಕಟ್ಟಡ ನಿರ್ಮಿಸಲು ಜಾಗ ನೀಡುವುದಿಲ್ಲ. ಒಂದು ವೇಳೆ ಗ್ರಾಮಸ್ಥರು ಒತ್ತಾಯ ಮಾಡಿದರೆ. ಗ್ರಾಮದಲ್ಲಿ ಖಾಲಿ ಇರುವ ಅಂಗನವಾಡಿ ಕೇಂದದ ಕಾರ್ಯಕರ್ತೆ ಹುದ್ದೆಗೆ ಕುಟುಂಬದ ಮಹಿಳೆಯೊಬ್ಬರನ್ನು ನೇಮಕ ಮಾಡಿದರೆ ಶಾಲೆಗೆ ಜಾಗ ನೀಡುತ್ತೇನೆ. ಇಲ್ಲದ್ದಿದರೆ ಯಾವುದೇ ಕಾರಣಕ್ಕೂ ಶಾಲಾ ಕೊಠಡಿ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ.
•ಯಲಗುರಪ್ಪ ನಿಂಗಪ್ಪ ಆಳೂರು, ಜಮೀನು ಮಾಲೀಕ
ಮೆಣಸಗೇರಿ ಶಾಲೆಗೆ ಎರಡು ಕೊಠಡಿಗಳು ಮಂಜೂರುವಾಗಿವೆ. ಆದರೆ ಅಲ್ಲಿ ಭೂದಾನಿಗಳು ಹೊಸ ಕೊಠಡಿಗಳನ್ನು ನಿರ್ಮಿಸಲು ತಕರಾರು ಮಾಡುತ್ತಿದ್ದಾರೆಂದು ಮುಖ್ಯೋಪಾಧ್ಯಾಯರು ತಿಳಿಸಿದಾರೆ. ಈ ಬಗ್ಗೆ ವಿಚಾರಿಸಲು 2-3 ದಿನಗಳಲ್ಲಿ ಮುಖ್ಯೋಪಾಧ್ಯಾಯ ಮತ್ತು ಗ್ರಾಮಸ್ಥರೊಂದಿಗೆ ಚರ್ಚಿಸುತ್ತೇವೆ. ಹಳೇ ಶಾಲಾ ಕೊಠಡಿಗಳನ್ನು ನೆಲಸಮ ಮಾಡಲು ನಾವೂ ಯಾವುದೇ ಆದೇಶ ನೀಡಿಲ್ಲ. ಜಾಗದ ಕೊರತೆ ಇದ್ದ ಕಾರಣ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಒಪ್ಪಿಗೆ ಪಡೆದುಕೊಂಡು ಕೊಠಡಿಗಳನ್ನು ನೆಲಸಮ ಮಾಡಲಾಗಿದೆ ಎಂದು ಶಾಲಾ ಶಿಕ್ಷಕರು ತಿಳಿಸಿದ್ದಾರೆ.
•ಎಂ. ಚನ್ನಬಸಪ್ಪ, ಬಿಇಒ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.