ದುರ್ಗಮ್ಮನ ಹಳ್ಳ ಸ್ವಚ್ಛತೆ ಕಾರ್ಯ ತ್ವರಿತವಾಗಲಿ

Team Udayavani, Jun 19, 2019, 3:29 PM IST

kopala-tdy-4..

ಕೊಪ್ಪಳ: ಗಂಗಾವತಿ ನಗರದ ದುರ್ಗಮ್ಮನ ಹಳ್ಳದ ಸ್ವಚ್ಛತಾ ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾದ ಪೂರ್ವಭಾವಿ ಸಭೆಯಲ್ಲಿ ಡಿಸಿ ಸುನೀಲ್ ಕುಮಾರ ಮಾತನಾಡಿದರು.

ಕೊಪ್ಪಳ: ಜಿಲ್ಲೆಯ ಗಂಗಾವತಿ ನಗರದಲ್ಲಿರುವ ದುರ್ಗಮ್ಮನ ಹಳ್ಳದ ಸ್ವಚ್ಛತಾ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ನಗರಸಭೆಯು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಪಿ. ಸುನೀಲ್ ಕುಮಾರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಂಗಾವತಿ ನಗರದ ದುರ್ಗಮ್ಮನ ಹಳ್ಳದ ಸ್ವಚ್ಛತಾ ಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಂಗಾವತಿ ನಗರದ ದುರ್ಗಮ್ಮನ ಹಳ್ಳದ ಸ್ವಚ್ಛತಾ ಕಾರ್ಯವು ಸಾರ್ವಜನಿಕರಿಂದ ಈಗಾಗಲೇ ಪ್ರಾರಂಭವಾಗಿದ್ದು, ಇದಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಸೌಲಭ್ಯವನ್ನು ಕಲ್ಪಿಸಲಾಗುವುದು. ಈ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ಕೆ ಗಂಗಾವತಿ ನಗರಸಭೆ ಕೆಲಸಗಾರರನ್ನು ಕಳುಹಿಸಿಕೊಡಬೇಕು. ಕೆಲಸದ ಸಮಯಕ್ಕಿಂತ ಹೆಚ್ಚಿಗೆ ಕೆಲಸ ಮಾಡಿದರೆ ಅಂಥ ಕೆಲಸಗಾರರಿಗೆ ಒಟಿ ಸೌಲಭ್ಯ ನೀಡಬೇಕು. ಕೊಪ್ಪಳ ತಾಲೂಕಿನ ಹಿರೇಹಳ್ಳ ಪುನಶ್ಚೇತನ ಕಾರ್ಯಕ್ಕೆ ಮತ್ತು ಕುಷ್ಟಗಿ ತಾಲೂಕಿನ ನಿಡಶೇಶಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಜಿಲ್ಲಾಡಳಿತವು ಯಾವ ರೀತಿಯಲ್ಲಿ ಸಹಕಾರ ನೀಡಿದೆ. ಅದೇ ರೀತಿಯಾಗಿ ದುರ್ಗಮ್ಮನ ಹಳ್ಳ ಸ್ವಚ್ಛತಾ ಕಾರ್ಯಕ್ಕೆ ಸಹಕಾರ ನೀಡಲಿದೆ ಎಂದರು.

ಈ ಕಾರ್ಯಕ್ಕೆ ಗಂಗಾವತಿ ನಗರಸಭೆಯು 5 ಲಕ್ಷ ರೂಗಳನ್ನು ನೀಡಬೇಕು ಮತ್ತು ಶಾಸಕರ ಹಾಗೂ ಇತರೆ ಸಕಾರದ ಅನುದಾನದ ಲಭ್ಯವಿದೆಯೇ ಎಂಬುವುದರ ಬಗ್ಗೆ ಪರಿಶೀಲಿಸಿ ಐದು ಲಕ್ಷ ರೂ. ಸೇರಿ ಒಟ್ಟು 10 ಲಕ್ಷ ರೂ. ಅನುದಾನವನ್ನು ದುರ್ಗಮ್ಮನ ಹಳ್ಳ ಸ್ವಚ್ಛತೆಗೆ ನೀಡಲು ಪ್ರಯತ್ನಿಸಲಾಗುವುದು. ಕುಷ್ಟಗಿ ತಾಲೂಕಿನ ನಿಡಶೇಶಿ ಕೆರೆಯನ್ನು ರೈತರು, ಸಾರ್ವಜನಿಕರು ಹೂಳೆತ್ತಿದ್ದಾರೆ. ಇದರಿಂದ ಮುಂದಿನ ದಿನದಲ್ಲಿ ನಮಗೆ ಸಾಕಷ್ಟು ಪ್ರಮಾಣದಲ್ಲಿ ನೀರು ದೊರೆಯಲಿದೆ ಎಂದು ಹೇಳುತ್ತಿದ್ದಾರೆ. ನಗರಸಭೆಯವರು ದುರ್ಗಮ್ಮನ ಹಳ್ಳದ ಸ್ವಚ್ಛತೆಯು ಎಷ್ಟು ಪ್ರಮಾಣದಲ್ಲಾಗಿದೆ ಎಂಬುವುದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಬೇಕು. ಗುಣಮಟ್ಟದ ಸೇತುವೆ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ ಸೇರಿದಂತೆ ಗಂಗಾವತಿ ನಗರಸಭೆ, ಮತ್ತು ಪಿಡಬ್ಲೂಡಿ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್‌ ಕಚೇರಿ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!

Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!

It was not the Wright brothers who invented the airplane, but Rishi Bharadwaj: Governor

Anandiben Patel: ವಿಮಾನ ಅನ್ವೇಷಿಸಿದ್ದು ರೈಟ್‌ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ

A “bomb cyclone” explosion in an American prison soon!

bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್‌ ಸೈಕ್ಲೋನ್‌’ ಸ್ಫೋಟ!

Manipur: Protest for justice with empty coffins

Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.