ಸರ್ಕಾರದ ಅನುದಾನ ಸದ್ಬಳಕೆಯಾಗಲಿ
Team Udayavani, Dec 22, 2019, 3:23 PM IST
ಕೊಪ್ಪಳ: ಸರ್ಕಾರದ ಅನುದಾನವನ್ನು ಕ್ಷೇತ್ರದ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಬೇಳೂರು, ಡಂಬ್ರಳ್ಳಿ, ಬೂದಿಹಾಳ, ಬಿಸರಳ್ಳಿ, ಬಿಕನಳ್ಳಿ, ಮೈನಹಳ್ಳಿ ಹಾಗೂ ಹಂದ್ರಾಳ ಗ್ರಾಮಗಳಲ್ಲಿ 1.70 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಪ್ರತಿ ಗ್ರಾಮಕ್ಕೂ ಅವಶ್ಯ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುತ್ತಿದ್ದು, ವಿಶೇಷವಾಗಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. 19 ಸಾವಿರ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಲು 400 ಕೋಟಿ ಅನುದಾನ ಮಂಜೂರು ಮಾಡಿಸಲಾಗಿದೆ. ಶಿಕ್ಷಣ, ಆರೋಗ್ಯ ಕ್ಷೇತ್ರಗಳಿಗೂ ಹೆಚ್ಚಿನ ಸೌಲಭ್ಯ ಕಲ್ಪಿಸಿದ್ದು, ಈ 7 ವರ್ಷದ ಅವಧಿಯಲ್ಲಿ ಸುಮಾರು ಅಂದಾಜು ಮೊತ್ತ 3 ಸಾವಿರ ಕೋಟಿ ಅನುದಾನ ಬಿಡುಗಡೆಯಾಗಿದೆ. ಕೊಪ್ಪಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ. ಜನರು ಗುಣಮಟ್ಟದ ಕಾಮಗಾರಿಗೆ ಕೈ ಜೋಡಿಸಿ ಸರ್ಕಾರದ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಜಿಪಂ ಸದಸ್ಯ ಎಸ್.ಬಿ. ನಾಗರಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರಡ್ಡಿ, ಎಪಿಎಂಸಿ ಅಧ್ಯಕ್ಷ ಜಡಿಯಪ್ಪ ಬಂಗಾಳಿ, ಕೆಎಂಎಫ್ ಮಾಜಿ ಅಧ್ಯಕ್ಷ ವೆಂಕನಗೌಡ್ರ ಹಿರೇಗೌಡ್ರ, ಮುಖಂಡರಾದ ಕೃಷ್ಣಾರಡ್ಡಿ ಗಲಬಿ, ಪ್ರಸನ್ನ ಗಡಾದ, ಕೇಶವರಡ್ಡಿ, ನಾಗರಾಜ ಚಳ್ಳುಳ್ಳಿ, ನಗರಸಭಾ ಸದಸ್ಯ ಅಕರ್‌ಪಾಷಾ ಪಲ್ಟನ್, ಯಲ್ಲನಗೌಡ್ರ, ಮುದೇಗೌಡ್ರ, ಗವಿಸಿದ್ದಪ್ಪ ಬೇಳೂರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.