ಮಾನವ ಹಕುಗಳ ಉಲ್ಲಂಘನೆಯಾಗದಿರಲಿ: ಡಿಸಿ


Team Udayavani, Dec 11, 2021, 3:10 PM IST

19human

ಕೊಪ್ಪಳ: ಮಾನವ ಹಕ್ಕುಗಳು ಪ್ರತಿಯೊಬ್ಬ ನಾಗರಿಕರಿಗೆ ಸಮಾನ ವಾಗಿದ್ದು, ಅವು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ದೇಶದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಡಿಸಿ ವಿಕಾಸ ಕಿಶೋರ್‌ ಸುರಳ್ಕರ್‌ ಹೇಳಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಾನವ ಹಕ್ಕುಗಳು ಸಮಾಜದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶಗಳನ್ನು ನೀಡಿದ್ದು, ನಾವು ಯಾವುದೇ ರೀತಿಯ ತಾರತಮ್ಯ ಮಾಡಿದರೆ ಅದು ಕಾನೂನಿಗೆ ವಿರುದ್ಧವಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಣೆಯಂಥ ಹಲವು ಪ್ರಕರಣಗಳು ಕಂಡುಬಂದಿದ್ದು, ಇಂತಹ ಅನಿಷ್ಠ ಪದ್ಧತಿಗಳ ಆಚರಣೆ ಮಾಡುವುದು ಅಪರಾಧವಾಗಿದೆ. ಕೆಳವರ್ಗದ ಜನರಿಗೆ ದೇವಾಲಯಗಳಲ್ಲಿ ಪ್ರವೇಶ ನಿರ್ಬಂಧ ಸರಿಯಲ್ಲ. ದೇವರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರಾಗಿದ್ದೇವೆ. 21ನೇ ಶತಮಾನದಲ್ಲಿದ್ದರೂ ಇಂಥ ಅಮಾನವೀಯ ಘಟನೆಗಳು ನಡೆಯುತ್ತಿರುವುದು ವಿಪರ್ಯಾಸದ ಸಂಗತಿ. ಈ ಕುರಿತು ಸಮಾಜದ ಪ್ರಜ್ಞಾವಂತ ನಾಗರಿಕರು ಇತರರಿಗೆ ತಿಳಿ ಹೇಳಬೇಕೆಂದರು.

ಹಿರಿಯ ಸಿವಿಲ್‌ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಮಾತನಾಡಿ, ನಮ್ಮ ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದು, ಯಾವುದೇ ಜಾತಿ, ಲಿಂಗ, ಧರ್ಮ, ಜನಾಂಗ, ಬಣ್ಣ ಯಾವುದರ ಮೇಲೆಯೂ ತಾರತಮ್ಯ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಹಾಗಾಗಿ ಯಾವುದೇ ದುರ್ಬಲ ವ್ಯಕ್ತಿಯ ಮೇಲೆ ಸಬಲರು ತಮ್ಮ ಬಲಪ್ರಯೋಗ ಮಾಡುವಂತಿಲ್ಲ. ಹಾಗೆ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಎಲ್ಲರೂ ಸಮಾನವಾಗಿ ಜೀವಿಸಲಿಕ್ಕಾಗಿಯೇ ಈ ಮಾನವ ಹಕ್ಕುಗಳನ್ನು ಜಾರಿಗೆ ತರಲಾಗಿದೆ ಎಂದರು.

ಮಾನವ ಹಕ್ಕುಗಳ ದಿನದ ಪ್ರತಿಜ್ಞಾವಿಧಿಯನ್ನು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಬೋ ಧಿಸಿದರು. ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್‌, ಎಡಿಸಿ ಎಂ.ಪಿ. ಮಾರುತಿ, ಉಪನ್ಯಾಸಕ ಎಂ.ಎ ಹನುಮಂತರಾವ್‌, ಡಿಡಿಪಿಐ ದೊಡ್ಡಬಸಪ್ಪ ನೀರಲಕೇರಿ, ಯುನಿಸೆಫ್‌-ಮಕ್ಕಳ ರಕ್ಷಣಾ ಯೋಜನೆ ಹರೀಶ್‌ ಜೋಗಿ ಹಾಗೂ ಕೊಪ್ಪಳ ಕಾನೂನು ಮಹಾವಿದ್ಯಾಲಯ, ಎಸ್‌ಎಫ್‌ಎಸ್‌ ಪ್ರೌಢಶಾಲೆ, ಗವಿಸಿದ್ದೇಶ್ವರ ಕಾಲೇಜು, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.