ಪಿಂಚಣಿ ನೀಡುವಂತೆ ಶಿಕ್ಷಕರಿಂದ ಪತ್ರ ಚಳವಳಿ
Team Udayavani, Aug 23, 2019, 12:05 PM IST
ಕಾರಟಗಿ: ಅನುದಾನಿತ ಶಾಲಾ ಶಿಕ್ಷಕರು ಪತ್ರ ಚಳವಳಿ ನಡೆಸಿದರು.
ಕಾರಟಗಿ: ರಾಜ್ಯದ ಅನುದಾನಿತ ಶಾಲಾ ಕಾಲೇಜ್‌ಗಳಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಪಿಂಚಣಿ ನೀಡುವಂತೆ ಒತ್ತಾಯಿಸಿ ಸ್ಥಳೀಯ ಶ.ಬ. ವಿದ್ಯಾ ಸಂಸ್ಥೆಯ ಶಿಕ್ಷಕರು ಗುರುವಾರ ಪತ್ರ ಚಳವಳಿ ಮಾಡಿದರು.
ಈ ಕುರಿತು ಮಾತನಾಡಿದ ಅನುದಾನಿತ ಶಿಕ್ಷಣ ಸಂಸ್ಥೆಯ ಶಿಕ್ಷಕ ದೇವೇಂದ್ರಪ್ಪ ಎಚ್. ಒಡ್ಡೊಡಗಿ, ರಾಜ್ಯದ ಅನುದಾನಕ್ಕೆ ಒಳಪಟ್ಟ 60 ಸಾವಿರ ನೌಕರರಿಗೆ ಯಾವುದೇ ವಿಧದ ಪಿಂಚಣಿ ಸೌಲಭ್ಯವಿರುವುದಿಲ್ಲ. 01-4-2006 ನಂತರ ನೇಮಕವಾದ ಮತ್ತು 01-04-2006 ಮೊದಲೇ ನೇಮಕವಾದ ಸಾಕಷ್ಟು ನೌಕರರು ಕೊನೆಯ ತಿಂಗಳ ಸಂಬಳ ಪಡೆದು ನಿವೃತ್ತರಾಗಿದ್ದಾರೆ. ಕೆಲವರು ಅಕಾಲಿಕ ಮರಣ ಹೊಂದಿದ್ದಾರೆ, ಅನುದಾನಿತ ನೌಕರರಿಗೆ ಪಿಂಚಣಿ ನೀಡುವ ವಿಚಾರದಲ್ಲಿ ಆಗಿರುವ ತಾರತಮ್ಯ ಮತ್ತು ಅನ್ಯಾಯದಿಂದಾಗಿ ಅವರ ಕುಟುಂಬಗಳು ಸಂಕಷ್ಟಕ್ಕೆ ಒಳಗಾಗಿವೆ. ಈ ಕುರಿತು ಹಲವಾರು ಬಾರಿ ಹೋರಾಟಗಳು ನಡೆಸಿದರು ಫಲಕಾರಿಯಾಗಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿರೋಧ ಪಕ್ಷದಲ್ಲಿದ್ದಾಗ ನಮ್ಮ ಹೋರಾಟಕ್ಕೆ ಬೆಂಬಲ ನೀಡುವ ಮೂಲಕ ಹಿಂದಿನ ಸರಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿದ್ದು ಶ್ಲಾಘನೀಯ. ವೇತನ ನೀಡುತ್ತಿರುವುದು ಸರಕಾರವೇ ಆಗಿರುವುದರಿಂದ ನಿವೃತ್ತಿ ವೇತನವನ್ನು ಸರಕಾರವೇ ನೀಡಬೇಕು. ಅಲ್ಲದೇ ದೇಶದ ಇತರೆ ರಾಜ್ಯಗಳಲ್ಲಿ ಪಿಂಚಣಿ ವಿಚಾರದಲ್ಲಿ ಸರಕಾರಿ ಮತ್ತು ಅನುದಾನಿತ ಸಂಸ್ಥೆಗಳ ನೌಕರರ ಮಧ್ಯೆ ತಾರತಮ್ಯ ಇರುವುದಿಲ್ಲ. 2006ಕ್ಕೂ ಮೊದಲು ರಾಜ್ಯದಲ್ಲಿ ಸಮಾನತೆ ಇತ್ತು. ಪಿಂಚಣಿ ಪ್ರತಿಯೊಬ್ಬ ನೌಕರರ ಮೂಲಭೂತ ಹಕ್ಕು. ಆದ್ದರಿಂದ ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಪಿಂಚಣಿ ಸೌಲಭ್ಯ ನೀಡುವಂತೆ ಮನವಿ ಮಾಡಿದರು. ಶಿಕ್ಷಕ ಜಗಧೀಶ ಭಜಂತ್ರಿ ಮಾತನಾಡಿ, ಪಿಂಚಣಿ ಸೌಲಭ್ಯದ ಕುರಿತು ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಅರೆಬೆತ್ತಲೆ ಮೆರವಣಿಗೆಯೊಂದಿಗೆ ಉಗ್ರಹೋರಾಟ ನಡೆಸಲಾಗುವುದು ಎಂದರು. ಶಿಕ್ಷಕ, ಶಿಕ್ಷಕಿಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.