ನೀರು ಹರಿಸಲು ಅನುಮತಿ ಕೋರಿ ಪತ್ರ
•ಸರ್ಕಾರಕ್ಕೆ ಅಭಿಯಂತರ ಪತ್ರ •40 ಟಿಎಂಸಿ ನೀರು ಸಂಗ್ರಹ •ಜಲಾನಯನ ಪ್ರದೇಶದಲ್ಲಿ ಮಳೆ ಚುರುಕು
Team Udayavani, Aug 6, 2019, 1:19 PM IST
ಗಂಗಾವತಿ: ಕಾಲುವೆಗಳಿಗೆ ನೀರು ಹರಿಸುವಂತೆ 21ನೇ ಉಪಕಾಲುವೆ ರೈತರು ತುಂಗಭದ್ರಾ ಯೋಜನಾಧಿಕಾರಿಗೆ ಮನವಿ ಸಲ್ಲಿಸಿದರು.
ಗಂಗಾವತಿ: ತುಂಗಭದ್ರಾ ಡ್ಯಾಂನಲ್ಲಿ ಪ್ರಸ್ತುತ 40 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಒಳಹರಿವು ಉತ್ತಮವಾಗಿದೆ. ಕಾಲುವೆಗಳಿಗೆ ನೀರು ಹರಿಸಲು ಅನುಮತಿ ನೀಡುವಂತೆ ರಾಜ್ಯ ಸರಕಾರಕ್ಕೆ ತುಂಗಭದ್ರಾ ಯೋಜನೆ ಮುಖ್ಯ ಅಭಿಯಂತರ ಪತ್ರ ಬರೆದು ಮನವಿ ಮಾಡಿದ್ದಾರೆ.
ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಡ್ಯಾಂನ ಒಳಹರಿವು ಉತ್ತಮವಾಗಿದೆ. ಸುಗ್ಗಿ ಬೆಳೆಗೆ ನೀರು ಕಲ್ಪಿಸಲು ಅಚ್ಚುಕಟ್ಟು ಪ್ರದೇಶದ ರೈತರು ಸಂಘ ಸಂಸ್ಥೆಯವರು ನಿರಂತರ ಒತ್ತಡ ಹೇರುತ್ತಿದ್ದಾರೆ. ರೈತರ ಹಿತದೃಷ್ಟಿಯಿಂದ ಕಾಲುವೆಗಳಿಗೆ ನೀರು ಹರಿಸುವುದು ಅವಶ್ಯವಾಗಿದೆ. ಸದ್ಯದ ಡ್ಯಾಂನ ನೀರಿನ ಸ್ಥಿತಿಗತಿ ಕುರಿತು ಪತ್ರದಲ್ಲಿ ವಿವರಣೆ ನೀಡಲಾಗಿದೆ.
ಈ ಭಾರಿ ಮುಂಗಾರು ಮಳೆ ತಡವಾಗಿ ಬಂದಿದ್ದರಿಂದ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದು, ಜುಲೈ ಕೊನೆ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಒಳಹರಿವು ಹೆಚ್ಚಾಗಿದೆ. ಪ್ರಸ್ತುತ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಭತ್ತದ ಒಂದು ಬೆಳೆಗಾಗುವಷ್ಟು ನೀರು ಸಂಗ್ರಹವಿದೆ. ಕಳೆದ ವಾರ ಕುಡಿಯುವ ನೀರಿನ ನೆಪದಲ್ಲಿ ಡ್ಯಾಂನಿಂದ ಪ್ರತಿ ದಿನ 1700 ಕ್ಯೂಸೆಕ್ಸ್ ನೀರನ್ನು ಎಡದಂಡೆ ಪ್ರಸ್ತುತ 1200 ಕ್ಯೂಸೆಕ್ಸ್ ನೀರನ್ನು ಬಲದಂಡೆ ಕಾಲುವೆ ಮೂಲಕ ಬಳ್ಳಾರಿ ಮತ್ತು ಆಂಧ್ರಪ್ರದೇಶಕ್ಕೆ ಹರಿಸಲಾಗುತ್ತಿದೆ. ಸದ್ಯ ಒಳಹರಿವು 20 ಸಾವಿರ ಕ್ಯೂಸೆಕ್ಸ್ ದಾಟುವ ಸಂಭವವಿದ್ದು, ಕಾಲುವೆಗೆ ನೀರು ಹರಿಸಲು ಸರಕಾರದಿಂದ ಪರವಾನಗಿ ಕೋರಲಾಗಿದೆ. ಈಗಾಗಲೇ ಕೊಪ್ಪಳ, ರಾಯಚೂರು ಮತ್ತು ಬಳ್ಳಾರಿ ಜಿಲ್ಲೆಗಳ ಸಂಸದರು ಅಚ್ಚುಕಟ್ಟು ಪ್ರದೇಶದ ಶಾಸಕರು ಪ್ರತಿ ದಿನ ಡ್ಯಾಂನಲ್ಲಿ ಸಂಗ್ರಹವಾಗುವ ನೀರಿನ ಪ್ರಮಾಣ ಮತ್ತು ಕಾಲುವೆಗಳಿಗೆ ನೀರು ಹರಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.