ಜೀವನ ಸಾಧನೆಯಲ್ಲ ಶೋಧನೆಯಾಗಲಿ: ವಿನಯ ಗುರೂಜಿ


Team Udayavani, Feb 1, 2021, 2:10 PM IST

Life is not about achievement: Vinaya Guruji

ಕೊಪ್ಪಳ: ಮನುಷ್ಯನ ಜೀವನವೆಂಬುದು ಸಾಧನೆ ಮಾಡುವುದಲ್ಲ. ನಮ್ಮೊಳಗೆ ನಾವು ಶೋಧನೆ ಮಾಡಬೇಕು. ಆದರೆ ಇಂದಿನ ವ್ಯವಸ್ಥೆಯಲ್ಲಿ ನಾವೆಲ್ಲರೂ ಹೊರಗೆ ಮನುಷ್ಯರಂತೆ ನಟನೆ ಮಾಡುತ್ತಿದ್ದೇವೆ. ಆದರೆ ನಿಜವಾದ ಮನುಷ್ಯರಲ್ಲ. ಆದ್ದರಿಂದ ಪ್ರತಿಯೊಬ್ಬರು ಭಗವದ್ಗೀತೆ ಪಠಿಸಿದರೇ ಸಾಲದು, ಅದನ್ನು ಅನುಸರಿಸಬೇಕು ಎಂದು ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು.

ತಾಲೂಕಿನ ಕಿಡದಾಳ ಗ್ರಾಮದಲ್ಲಿನ ಶಾರದಾ ಇಂಟರ್‌ ನ್ಯಾಷನಲ್‌ ಸ್ಕೂಲ್‌ ಮತ್ತು ಕಾಲೇಜ್‌ ಸಭಾಂಗಣದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ದೇಶವು ಮಮ್ಮಿ, ಡ್ಯಾಡಿ ಸಂಸ್ಕೃತಿಯಿಂದ  ಹಾಳಾಗುತ್ತಿದೆ. ಶಾಲೆಗಳಲ್ಲಿ ನಾವು ಬದುಕು, ಸಂಸ್ಕಾರ ಕಲಿಸುತ್ತಿಲ್ಲ. ಇದರಿಂದ ಕಲಿಯುವ ಮಕ್ಕಳು ತಪ್ಪಾಗಿ ಬದುಕು ಸಾಗಿಸಲು ನಿರ್ಧರಿಸುತ್ತಾರೆ. ಆದ್ದರಿಂದ ಅವರಿಗೆ ನಾವು ಸಂಸ್ಕಾರ ಕೊಡಬೇಕಾಗಿದೆ.

ಪ್ರತಿಯೊಂದು ಶಾಲೆಯಲ್ಲೂ ಭಗವದ್ಗೀತೆಯ ಪಾಠವಾಗಬೇಕಾಗಿದೆ. ಪ್ರತಿದಿನ ಅರ್ಧ ಗಂಟೆಅದನ್ನು ಪಠಣ ಮಾಡಿ ಅನುಸರಿಸುವುದನ್ನು  ಮಕ್ಕಳಿಗೆ ಕಲಿಸಿಕೊಡುವ ಅಗತ್ಯವಿದೆ ಎಂದರು.

ಭಾರತ ನಿರ್ಮಾಣವಾಗಿರುವುದು ಕಾಸು, ಬಂಗಾರ, ವಜ್ರದಿಂದಲ್ಲ, ಸಂಸ್ಕಾರದಿಂದ. ಆದ್ದರಿಂದ ಆ ಸಂಸ್ಕಾರವನ್ನು ನಾವು ಮಕ್ಕಳಿಗೆ ಕಲಿಸಬೇಕಾಗಿದೆ. ದುಡ್ಡು ಮಾಡುವುದು ದೊಡ್ಡದಲ್ಲ, ಮಾಡಿದ ದುಡ್ಡನ್ನು ಸಂಸ್ಕಾರಯುತವಾಗಿ ಹೇಗೆ ಬಳಕೆ ಮಾಡಬೇಕು ಎನ್ನುವುದು ಮುಖ್ಯ. ಕಲ್ಲು ದೇವರಿಗೆ ಅರ್ಧ ಕೆಜಿ ತುಪ್ಪ ಸುರಿಯುವ ಬದಲು ಬಡ ಮಕ್ಕಳಿಗೆ ಆ ತುಪ್ಪ ನೀಡಿದರೇ ಅದುವೇ ಸಂಸ್ಕಾರ. ಆದರೆ, ನಾವು ಅದನ್ನು ಮಾಡುತ್ತಿಲ್ಲ. ಸಂಸ್ಕಾರ ನೀಡುವಾಗಲು ತಾರತಮ್ಯ ಮಾಡಲಾಗುತ್ತದೆ ಎಂದರು.

ಯಾವ ದೇವರು ಸಹ ನಮಗೆ ಬಂಗಾರದ ಕಳಸ ಮಾಡಿಸಿ, ಗೋಪುರ ಕಟ್ಟಿಕೊಡಿ ಎಂದು ಕೇಳಿಲ್ಲ. ನೀವು ಮಾಡುವ ತಪ್ಪಿನಿಂದಾಗಿ ಇಂದು ದೇವರ ಬಗ್ಗೆ ತಪ್ಪು ಕಲ್ಪನೆ ಮೂಡಿದೆ. ಯಾವ ದೇವರು ಸಹ ಇದನ್ನು ಕೊಡಿ ಎಂದು ಕೇಳುವುದೇ ಇಲ್ಲ. ಇದನ್ನು ಭಗವದ್ಗೀತೆ ಹೇಳುತ್ತದೆ. ಆದರೆ ನಾವು ಅದನ್ನು ಅನುಸರಿಸದೆ ಅದನ್ನು ತಪ್ಪಾಗಿ ಅರ್ಥೈಸಿ, ತಪ್ಪು ಸಂದೇಶ ನೀಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಯುವ ಮೋರ್ಚಾದಿಂದ ಸ್ವತ್ಛತಾ ಕಾರ್ಯಕ್ರಮ

ಉತ್ತರ ಕರ್ನಾಟಕದಲ್ಲಿ ಇಂದಿಗೂ ದಾಸೋಹ ಪರಂಪರೆಯಿದೆ. ಇದರಿಂದ ಇಲ್ಲಿ ದೇವರು ನೆಲೆಸಿದ್ದಾನೆ. ಇಂತಹ ದಾಸೋಹ ಪರಂಪರೆ ತೀರಾ ಅಗತ್ಯವಾಗಿದೆ. ನಿಮ್ಮ ದುಡಿಮೆಯಲ್ಲಿ ಒಂದಿಷ್ಟು ಪಾಲನ್ನು ದಾಸೋಹ ಅಥವಾ ಬಡ ಮಕ್ಕಳ ಕಲ್ಯಾಣಕ್ಕೆ ಮೀಸಲು ಇಟ್ಟರೆ ಅದುವೇ ನಿಜವಾದ ಸೇವೆ. ಪಾಲಕರೂ ಮಕ್ಕಳಿಗೆ ಬದುಕಿನ ಮೌಲ್ಯಗಳ ಪಾಠ ಹೇಳಿಕೊಡಬೇಕು. ಯಾವುದು ಮಾಡಬೇಕು ಯಾವುದು ಮಾಡಬಾರದು ಎನ್ನುವುದನ್ನು ತಿಳಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಚಕ್ರವರ್ತಿ ಅವರು ಶ್ರೀವಿನಯ ಗುರೂಜಿ ಅವರು ಪರಿಚಯಿಸಿದರು. ಆಡಳಿತ ಮಂಡಳಿಯ ಸಂಸ್ಥಾಪಕ ವಿ.ಆರ್‌. ಪಾಟೀಲ್‌, ಎಸ್‌.ಆರ್‌. ಪಾಟೀಲ್‌ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.