ಸ್ಥಳೀಯ ಸಂಸ್ಥೆ ಶಕ್ತಿ ಕುಂದಿಸುತ್ತಿದೆ ಬಿಜೆಪಿ ಸರ್ಕಾರ: ಅನ್ಸಾರಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರನ್ನು ಮನೆಗೆ ಕಳಿಸಬೇಕೆಂದು ಮನವಿ
Team Udayavani, Nov 30, 2021, 6:18 PM IST
ಗಂಗಾವತಿ: ಬಿಜೆಪಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಗ್ರಾಪಂ ಸೇರಿ ಸ್ಥಳೀಯ ಸಂಸ್ಥೆಗಳ ಶಕ್ತಿ ಕುಂದಿಸುವ ಕಾರ್ಯ ನಿರಂತರವಾಗಿ ಮಾಡುತ್ತಿವೆ, ಸೋಲಿನ ಭೀತಿಯಿಂದ ಜಿಪಂ, ತಾಪಂ ಚುನಾವಣೆಯನ್ನು ಷಡ್ಯಂತ್ರದಿಂದ ಬಿಜೆಪಿಯವರು ಮುಂದೂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಭವಿಷ್ಯ ಹೇಳಿದರು.
ಅವರು ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ರಾಯಚೂರು-ಕೊಪ್ಪಳ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾಂಗ್ರೆಸ್ ಪಕ್ಷ ಗ್ರಾಮ ಸ್ವರಾಜ್‌ಗೆ ಹೆಚ್ಚಿನ ಆದ್ಯತೆ ನೀಡಿದೆ. ಬಿಜೆಪಿ ಪ್ರಧಾನಮಂತ್ರಿಯಿಂದ ಹಿಡಿದು ಗ್ರಾಪಂ ಸದಸ್ಯರು ಜನತೆಗೆ ಬರೀ ಸುಳ್ಳು ಹೇಳುತ್ತಿದ್ದಾರೆ.
ಜೀವ ಜಲ ಮೀಷನ್ ಯೋಜನೆ ಮೂಲಕ ಗ್ರಾಮಗಳಲ್ಲಿ ಕಳಪೆ ಕಾಮಗಾರಿ ನಡೆಸಿ ವ್ಯಾಪಕ ಭ್ರಷ್ಟಾಚಾರ ನಡೆಯಲು ಕಾರಣವಾಗಿದೆ. ಬಿಜೆಪಿ ಸರಕಾರ ಬಂದ ನಂತರ ಒಂದೂ ಮನೆ ಕೊಟ್ಟಿಲ್ಲ. ತಾವು ಶಾಸಕರಾಗಿದ್ದ ವೇಳೆ ಸುಮಾರು 720 ಕೋಟಿ ರೂ. ಅನುದಾನ ತಂದು ಇಡೀ ಕ್ಷೇತ್ರ ಹಾಗೂ ಗಂಗಾವತಿ ನಗರವನ್ನು ಸಮಗ್ರ ಅಭಿವೃದ್ಧಿ ಮಾಡಲಾಗಿದೆ. ಈಗಿನ ಶಾಸಕರ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ. ಆದ್ದರಿಂದ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣೇಗೌಡ ಬಯ್ನಾಪುರ ಅವರಿಗೆ ಮತ ಹಾಕಿ ಗೆಲ್ಲಿಸಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯವರನ್ನು ಮನೆಗೆ ಕಳಿಸಬೇಕೆಂದು ಮನವಿ ಮಾಡಿದರು.
ಮಾಜಿ ಸಚಿವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ್ ತಂಗಡಗಿ, ಮಾಜಿ ಸಂಸದರಾದ ಶಿವರಾಮಗೌಡ, ಬಿ.ವಿ.ನಾಯಕ, ಶಾಸಕ ಅಮರೇಗೌಡ ಬಯ್ನಾಪುರ, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಹಸನಸಾಬ್ ದೋಟಿಹಾಳ, ಕಾಂಗ್ರೆಸ್ ಮುಖಂಡರಾದ ಸಿದ್ದಪ್ಪ ನೀರಲೂಟಿ, ಕೆ. ಕರಿಯಪ್ಪ, ಮಾಲತಿ ನಾಯಕ, ಶಾಮೀದ್ ಮನಿಯಾರ್, ಫಕೀರಪ್ಪ ಎಮ್ಮಿ, ಇಮ್ತಿಯಾಜ್ ಅನ್ಸಾರಿ, ರೆಡ್ಡಿ ಶ್ರೀನಿವಾಸ, ಶರಣಬಸವರಾಜ ರೆಡ್ಡಿ, ನೆಕ್ಕಂಟಿ ಸೂರಿಬಾಬು, ನಾಗನಗೌಡ, ಅಮರೇಶ ಗೋನಾಳ ಸೇರಿ ಅನೇಕರಿದ್ದರು.
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಎಸ್ಟಿ ಸಮುದಾಯಕ್ಕೆ 7.5 ಮೀಸಲಾತಿ ಕಲ್ಪಿಸಲಾಗುತ್ತದೆ. ಬಿ. ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಸೇರಿ ಬಿಜೆಪಿ ಪ್ರಮುಖ ನಾಯಕರು ಭರವಸೆ ನೀಡಿ ಮತ್ತೂಂದು ವಿಧಾನಸಭೆ ಚುನಾವಣೆ ಬಂದರೂ ಕೊಟ್ಟ ಮಾತು ಉಳಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ಬೇಸತ್ತು ಮಾತೃ ಪಕ್ಷ ಕಾಂಗ್ರೆಸ್‌ಗೆ ತಾವು ಮರಳುತ್ತಿದ್ದು, ಇಕ್ಬಾಲ್ ಅನ್ಸಾರಿ ನಾಯಕತ್ವದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುತ್ತದೆ. ನಾಯಕ ಸಮಾಜದ ಗ್ರಾಪಂ, ನಗರಸಭೆ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಬಿಜೆಪಿಗೆ ಬುದ್ಧಿ ಕಲಿಸಲಿದ್ದಾರೆ.
ವಡ್ರಟ್ಟಿ ವೀರಭದ್ರಪ್ಪ ನಾಯಕ, ಕಾಂಗ್ರೆಸ್
ಸೇರಿದ ಬಿಜೆಪಿ ನಾಯಕ
ಜಿಲ್ಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ನಡೆಸುತ್ತಿರುವ ಎಂಎಲ್ಸಿ ಚುನಾವಣೆಯ ಪ್ರಚಾರ ಸಭೆಯಲ್ಲಿ ಖಾಲಿ ಕುರ್ಚಿಗಳು ಕಾಣುತ್ತಿದ್ದು, ಬಿಜೆಪಿಗೆ ಜನರು ಸೋಲಿನ ರುಚಿ ತೋರಿಸಲು ಸಿದ್ಧರಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗಂಗಾವತಿಗೆ ಪ್ರಚಾರಕ್ಕೆ ಬಂದಿದ್ದ ಪ್ರಧಾನಿ ಮೋದಿಯವರು ತುಂಗಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಿ ನವಲಿ ಡ್ಯಾಂ ನಿರ್ಮಾಣಕ್ಕೆ 10 ಸಾವಿರ ಕೋಟಿ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದುವರೆಗೂ ಇದರ ಬಗ್ಗೆ ಚಕಾರವೆತ್ತುತ್ತಿಲ್ಲ. ಇದರಿಂದ ಗೊತ್ತಾಗುತ್ತದೆ ಬಿಜೆಪಿಯವರು ಸುಳ್ಳಿನ ಶೂರರೆಂದು.
ಶಿವರಾಜ್ ತಂಗಡಗಿ, ಮಾಜಿ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.