ಖಾಲಿ ಜಾಗ ಸ್ವಚ್ಛಗೊಳಿಸಲು ಸ್ಥಳೀಯರ ಆಗ್ರಹ

ಯಲಬುರ್ಗಾ ಬಸ್‌ ನಿಲ್ದಾಣ ಹಿಂಭಾಗದಲ್ಲಿ ದುರ್ವಾಸನೆ ;  ಸ್ವಚ್ಛತೆ ಕಾಪಾಡುವುದು ಪಪಂನ ಆದ್ಯ ಕರ್ತವ್ಯ

Team Udayavani, Jun 13, 2022, 5:35 PM IST

22

ಯಲಬುರ್ಗಾ: ಪಟ್ಟಣದ ಖಾದಿ ಗ್ರಾಮೋದ್ಯೋಗ ಹಿಂಭಾಗದ ಖಾಲಿ ಜಾಗದಲ್ಲಿ ಸಾರ್ವಜನಿಕರು ಕಸ, ಕಡ್ಡಿ, ಬಹಿರ್ದೆಸೆ ಮಾಡುವ ಮೂಲಕ ಹಂದಿ, ನಾಯಿಗಳ ತಾಣವಾಗಿ ಮಾರ್ಪಟ್ಟು ದುರ್ನಾತ ಬೀರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ಪಪಂ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ಇದರ ಪಕ್ಕದಲ್ಲೇ ಬಸ್‌ ನಿಲ್ದಾಣವಿದ್ದು ಪ್ರಯಾಣಕರು, ಅಕ್ಕಪಕ್ಕದ ಮನೆಗಳ ನಿವಾಸಿಗಳು ಇದರ ದುರ್ವಾಸನೆಯಿಂದ ಬೇಸತ್ತು ಹೋಗಿದ್ದಾರೆ. ಇದನ್ನು ಸ್ವಚ್ಛಗೊಳಿಸಿ ಉತ್ತಮ ವಾತಾವರಣ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಬಳಿಕ ಪಪಂ ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ ಮಾತನಾಡಿ, ಸಾರ್ವಜನಿಕರು ಈ ಜಾಗದಲ್ಲಿ ಯಾವುದೇ ತ್ಯಾಜ್ಯ ಎಸೆಯುವುದಾಗಲಿ, ಬಹಿರ್ದೆಸೆಗೆ ಬಳಕೆ ಮಾಡಿಕೊಂಡರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಇದನ್ನು ನಮ್ಮ ಪೌರಕಾರ್ಮಿಕರಿಂದ ಸ್ವತ್ಛಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಪಪಂನ ಆದ್ಯ ಕರ್ತವ್ಯವಾಗಿದೆ. ಎಲ್ಲ ವಾರ್ಡ್‌ಗಳಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡಲಾಗಿದೆ. ಪಪಂ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧಗೊಳಿಸಲಾಗಿದೆ. ವ್ಯಾಪಾರಸ್ಥರು ಪ್ಲಾಸ್ಟಿಕ್‌ ವಸ್ತುಗಳಲ್ಲಿ ವ್ಯಾಪಾರ ವಹಿವಾಟು ಮಾಡಬಾರದು. ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಎಲ್ಲ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ. ಪಟ್ಟಣದ ನಾಗರಿಕರು ಕಡ್ಡಾಯವಾಗಿ ತಮ್ಮ ಬಾಕಿ ತೆರಿಗೆ ಪಾವತಿಗೆ ಮುಂದಾಗಬೇಕು. ಪಟ್ಟಣ ವ್ಯಾಪ್ತಿಯ ಗಾಂವಠಾಣಾ ಜಾಗವನ್ನು ಪಪಂ ತೆಕ್ಕೆಗೆ ತೆಗೆದುಕೊಳ್ಳುತ್ತೇವೆ ಎಂದರು.

ಪಪಂ ಸಿಬ್ಬಂದಿ ಸುಭಾಷ ಭಾವಿಮನಿ, ನಿವಾಸಿಗಳಾದ ವಿಜಯ ಜಕ್ಕಲಿ, ಕಲ್ಲೇಶ, ಮಹಾಂತೇಶ, ಮಂಜುನಾಥ, ಶಿವಕುಮಾರ ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marakumbi case convict passed away in hospital

Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

4

Dinesh GunduRao:ಶಾಸಕ ರಾಯರೆಡ್ಡಿ ಸಿಎಂ ಪಕ್ಕ ಇರುವುದರಿಂದ ಹೆಚ್ಚು ಅಭಿವೃದ್ದಿ ನಡೆಯುತ್ತವೆ

7-koppala

Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.