![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 21, 2020, 9:35 AM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಂಗಾವತಿ ಸೇರಿದಂತೆ 11 ಸ್ಥಳಗಳಲ್ಲಿ ಲಾಕ್‌ಡೌನ್ ಜಾರಿ ಮಾಡಲಾಗುವುದು. ಜು.21ರಿಂದ 10 ದಿನಗಳವರೆಗೂ ಲಾಕ್‌ಡೌನ್ ಜಾರಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ ಹೇಳಿದರು.
ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸೋಂಕು ಹೆಚ್ಚುತ್ತಿದ್ದು, ಸಚಿವರ ಅಧ್ಯಕ್ಷತೆಯಲ್ಲಿ ಗಂಗಾವತಿ, ಶ್ರೀರಾಮನಗರ ಲಾಕ್‌ಡೌನ್ ಮಾಡಲು ನಿರ್ಧರಿಸಲಾಗಿತ್ತು. ಅದರೊಟ್ಟಿಗೆ ಮರ್ಲಾನಹಳ್ಳಿ, ಭಾಗ್ಯನಗರ, ಮುನಿರಾಬಾದ್, ಹಣವಾಳ, ಹುಲಿಗಿ, ಹಿರೇ ಸಿಂದೋಗಿ, ಮಂಗಳೂರು, ಹೇರೂರು, ನವಲಹಳ್ಳಿಗಳನ್ನು ಜು.21 ರಾತ್ರಿ 8ರಿಂದ 10 ದಿನದ ವರೆಗೂ ಲಾಕ್ ಡೌನ್ ಜಾರಿ ಮಾಡಲಾಗುವುದು. ಈ ಸ್ಥಳದಲ್ಲಿ ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದ ಅಂಗಡಿ-ಮುಂಗಟ್ಟುಗಳನ್ನು ಕಡ್ಡಾಯವಾಗಿ ಬಂದ್ ಮಾಡಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.
ಸಾರಿಗೆ ಸಂಚಾರದ ಕುರಿತು ಕೆಎಸ್ ಆರ್‌ಟಿಸಿ ಅಧಿಕಾರಿಗೆ ಅಧಿಸೂಚನೆ ನೀಡಿದೆ. ಗಂಗಾವತಿಯಲ್ಲಿ ಲಾಕ್ ಡೌನ್ ಜಾರಿ ಮಾಡಿದ ವೇಳೆ ಬಸ್‌ಗಳ ಸಂಚಾರದ ಕುರಿತು ಮಾರ್ಗ ಬದಲಿಸುವ ಕುರಿತು ಸೂಚನೆ ನೀಡಲಾಗಿದೆ. ಹಳ್ಳಿಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನೂ ನಗರ ಪ್ರದೇಶದಲ್ಲಿ ಬ್ಯಾಂಕ್‌ಗಳು ಆರಂಭ ಇರಲಿವೆ. ಅಲ್ಲಿ 144 ಕಲಂ ಜಾರಿ ಮಾಡಲಾಗುವುದು. ಈ ಸ್ಥಳದಲ್ಲಿ ಜನ ಗುಂಪು ಸೇರುವಿಕೆಯನ್ನು ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಅನಗತ್ಯ ಓಡಾಡಿದರೆ ಕ್ವಾರಂಟೈನ್: ಜಿಪಂ ಸಿಇಒ ರಘುನಂದನ್ ಮೂರ್ತಿ ಮಾತನಾಡಿ, ಲಾಕ್‌ಡೌನ್ ಪ್ರದೇಶದಲ್ಲಿ ಓಡಾಟ ನಡೆಸಿದರೆ, ಅವರ ವಿರುದ್ಧ ಕೇಸ್ ದಾಖಲು ಮಾಡಲಾಗುವುದು. ಜಿಲ್ಲೆಯಲ್ಲಿ ಒಂದು ಕ್ವಾರಂಟೈನ್ ಕೇಂದ್ರ ಎಂದು ಆರಂಭ ಮಾಡಿದ್ದೇವೆ. ಅನಗತ್ಯ ಓಡಾಟ ನಡೆಸುವ ಜನರನ್ನು ಆ ಕ್ವಾರಂಟೈನ್ ಕೇಂದ್ರಕ್ಕೆ ಕರೆ ತರಲಾಗುವುದು. ಇದು ಕೋವಿಡ್ ಸೋಂಕಿನ ಕ್ವಾರಂಟೈನ್ ಕೇಂದ್ರಕ್ಕೂ ಈ ಕ್ವಾರಂಟೈನ್ ಕೇಂದ್ರಕ್ಕೂ ಸಂಬಂಧವಿಲ್ಲ ಎಂದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.