Lok polls: ಏ.8 ರಂದು ಆಯೋಜಿಸಿರುವ ಕಾಂಗ್ರೆಸ್ ದ್ರೋಹಿಗಳ ಸಭೆಗೆ ಹೋಗದಂತೆ ಅನ್ಸಾರಿ ಕರೆ

Team Udayavani, Apr 7, 2024, 6:43 PM IST

Lok polls: ಏ.8 ರಂದು ಆಯೋಜಿಸಿರುವ ಕಾಂಗ್ರೆಸ್ ದ್ರೋಹಿಗಳ ಸಭೆಗೆ ಹೋಗದಂತೆ ಅನ್ಸಾರಿ ಕರೆ

ಗಂಗಾವತಿ: ನನ್ನನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮಾಜಿ ಸಂಸದ ಎಚ್.ಜಿ.ರಾಮುಲು ನಿವಾಸದಲ್ಲಿ ಏ.08 ರಂದು ಲೋಕಸಭಾ ಚುನಾವಣೆಗಾಗಿ ಕರೆದ ಕಾಂಗ್ರೆಸ್ ಪಕ್ಷದ ದ್ರೋಹಿಗಳು ಕರೆದಿರುವ ಕಾರ್ಯಕರ್ತರ ಸಭೆಗೆ ತಮ್ಮ ಬೆಂಬಲಿಗ ಕಾರ್ಯಕರ್ತರು ಹಾಗೂ ಮುಖಂಡರು ತೆರಳದಂತೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಆಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮನವಿ ಮಾಡಿದ್ದಾರೆ.

ಮಾಜಿ ಸಂಸದ ಎಚ್.ಜಿ.ರಾಮುಲು, ಮಾಜಿ ಸಚಿವ ಎಂ.ಮಲ್ಲಿಕಾರ್ಜುನ ನಾಗಪ್ಪ, ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ, ಶಾಮೀದ್ ಮನಿಯಾರ್, ದೇವರಮನಿ ಮಲ್ಲಿ, ಅರಸಿನಕೇರಿ ಹನುಮಂತಪ್ಪ ಸೇರಿ ಕೆಲವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಶಾಸಕನಾಗಬಾರದೆಂದು ಷಡ್ಯಂತ್ರ ನಡೆಸಿ ಬಳ್ಳಾರಿ ಗಾಲಿ ಜನಾರ್ದನರೆಡ್ಡಿಯ ಕೆಆರ್‌ಪಿ ಪಕ್ಷಕ್ಕೆ ಬೆಂಬಲಿಸಿ ನನ್ನನ್ನು ಸೋಲಿಸಿದ್ದಾರೆ.

ಶಾಮೀದ್ ಮನಿಯಾರ್ ವಿಧಾನಸಭಾ ಚುನಾವಣೆಯಲ್ಲಿ ನಗರದಲ್ಲಿ ಪ್ರಚಾರ ಮಾಡದೇ ಮನೆಯಲ್ಲಿ ಇರುತ್ತಿದ್ದರು, ಸಂಜೆ 4-5 ಗಂಟೆ ಸಂದರ್ಭದಲ್ಲಿ ನಮ್ಮ ಮನೆಗೆ ಬಂದು ಮುಖ ತೋರಿಸಿ ಪುನಃ ಮನೆಗೆ ಹೋಗುತ್ತಿದ್ದರು. ಯಾರು ಸಹ ಅನ್ಸಾರಿಗೆ ಮತ ಹಾಕುವಂತೆ ಎಲ್ಲಿಯೂ ಮನವಿ ಮಾಡಲಿಲ್ಲ. ಈಗ ಲೋಕಸಭಾ ಚುನಾವಣೆಯಲ್ಲಿ ಇವರೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವ ನಾಟಕವಾಡುತ್ತಿದ್ದಾರೆ.

ಏ.08 ರಂದು ಕೆಆರ್‌ಪಿ ಪಕ್ಷದ ಕಾರ್ಯಾಲಯವಾಗಿದ್ದ ಮಾಜಿ ಸಂಸದ ಎಚ್.ಜಿ.ರಾಮುಲು ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆದಿದ್ದು ಯಾರು ಸಹ ಹೋಗಬಾರದು. ಶೀಘ್ರವೇ ಕಾಂಗ್ರೆಸ್ ಅಭ್ಯರ್ಥಿ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ ಆಯೋಜನೆ ಮಾಡಲಿದ್ದು ಆ ಸಭೆಗೆ ಎಲ್ಲರೂ ತಪ್ಪದೇ ಬರಬೇಕು. ಕೆಆರ್‌ಪಿ ಪಕ್ಷಕ್ಕಾಗಿ ದುಡಿದವರಿಗೆ ಈಗ ಅಸ್ತಿತ್ವ ಇಲ್ಲದಂತಾಗಿದ್ದು ಈಗ ಇವರೆಲ್ಲ ಕಾಂಗ್ರೆಸ್ ಎಂದು ಹೇಳುತ್ತಿದ್ದಾರೆ. ಇವರನ್ನು ಯಾರು ನಂಬಬಾರದು. ಕಾಂಗ್ರೆಸ್ ಒಬಿಸಿ ಅಧ್ಯಕ್ಷ ಬಹಳ ಮೋಸಗಾರ ಇದ್ದಾನೆ, ಇವರ ಮಾತನ್ನು ಯಾರು ನಂಬಬಾರದು. ಎಂಎಲ್‌ಎ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿ ಈಗ ಕಾಂಗ್ರೆಸ್ ಎನ್ನುತ್ತಿದ್ದು ಇವರ ನಂಬಿಕೆ ದ್ರೋಹವಾಗಿದೆ. ಅನ್ಸಾರಿ ಇರುವುದು ಮಾತ್ರ ಓರಿಜಿನಲ್ ಕಾಂಗ್ರೆಸ್ ಇವರೆಲ್ಲ ಡುಬ್ಲಿಕೇಟ್‌ಗಳು ಆದ್ದರಿಂದ ಏ.08 ರ ಸಭೆಗೆ ಯಾರು ಹೋಗಬಾರದು ಎಂದು ಅನ್ಸಾರಿ ಕಾರ್ಯಕರ್ತರಿಗೆ ತಾಕೀತು ಮಾಡಿದ್ದು ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.