ಕುಷ್ಟಗಿ: ಲಂಪಿ ವೈರಸ್; ಜಾನುವಾರು ಸಂತೆ ರದ್ದು
Team Udayavani, Sep 29, 2022, 1:02 PM IST
ಕುಷ್ಟಗಿ: ಜಾನುವಾರುಗಳಿಗೆ ಮಾರಕವಾಗಿರುವ ಚರ್ಮಗಂಟು ರೋಗ (ಲಂಪಿ ಸ್ಕಿನ್ ವೈರಸ್) ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ (ಭಾನುವಾರ) ವಾರದ ಜಾನುವಾರು ಸಂತೆ ರದ್ದುಪಡಿಸಲು ಆದೇಶಿಸಲಾಗಿದೆ.
ಈ ಕುರಿತು ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದು, ಚರ್ಮಗಂಟು ರೋಗದಿಂದ ಜಾನುವಾರುಗಳು ಸಾಯುತ್ತಿದ್ದು, ರೋಗದ ತೀವ್ರತೆ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾನುವಾರು ಸಂತೆ ರದ್ದುಗೊಳಿಸಲಾಗಿದೆ.
ಈ ಹಿನ್ನೆಲೆ ಕುಷ್ಟಗಿ ತಾಲೂಕಿನ ಗ್ರಾಮಗಳು, ಅಕ್ಕ ಪಕ್ಕದ ತಾಲೂಕುಗಳ ರೈತರು ತಮ್ಮ ಜಾನುವಾರುಗಳನ್ನು ಜಾನುವಾರು ಸಂತೆಗೆ ತರಬಾರದು. ಜಾನುವಾರು ಸಂತೆ, ಜಾನುವಾರು ಜಾತ್ರೆ, ಜಾನುವಾರು ಸಾಗಾಣಿಕೆಯನ್ನು ಅಕ್ಟೋಬರ್ 25 ರವರೆಗೆ ಪ್ರತಿಬಂಧಕಾಜ್ಞೆ ಜಾರಿಯಲ್ಲಿದ್ದು ಈ 28 ದಿನಗಳವರೆಗೂ ಜಾನುವಾರು ಸಂತೆ ರದ್ದುಪಡಿಸಲಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಟಿ.ನೀಲಪ್ಪ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.