ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು
Team Udayavani, Jan 18, 2021, 11:45 AM IST
ಗಂಗಾವತಿ: ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಜರುಗಿದೆ.
ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.
ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.
ಇದನ್ನೂ ಓದಿ:ಕನ್ನಡ ಬಳಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪ್ರಾಧಿಕಾರ
ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ.ಸಾಲ ಪಡೆದುಕೊಂಡು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.
ಇದನ್ನೂ ಓದಿ:ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.