ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ
| ತಾಪಂ ಪ್ರಗತಿ ಪರಿಶೀಲನಾ ಸಭೆ
Team Udayavani, Aug 30, 2020, 3:43 PM IST
ಯಲಬುರ್ಗಾ: ತಾಪಂ ಕಚೇರಿ ಹಾಗೂ ಗ್ರಾಮೀಣ ಮತ್ತು ಪಂಚಾಯತ್ ರಾಜ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳ ಖಾಲಿ ಇರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಸಮಸ್ಯೆಯಾಗುತ್ತಿದೆ. ಖಾಲಿ ಇರುವ ಹುದ್ದೆಗಳ ಕುರಿತು ಗಮನಕ್ಕೆ ಯಾಕೆ ತಂದಿಲ್ಲ. ಬೇಜವಾಬ್ದಾರಿತನದಿಂದ ಕರ್ತವ್ಯ ನಿರ್ವಹಿಸಬೇಡಿ ಎಂದು ಶಾಸಕ ಹಾಲಪ್ಪ ಆಚಾರ್ ತಾಪಂ ಇಒ ಡಾ| ಜಯರಾಂ ಹಾಗೂ ಎಇಇ ಶಿವುಕುಮಾರ ಅವರನ್ನು ತರಾಟೆ ತೆಗೆದುಕೊಂಡರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಶನಿವಾರ ಗ್ರಾಮೀಣ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹುದ್ದೆ ಖಾಲಿ ಇರುವ ಕುರಿತು ನನ್ನ ಗಮನಕ್ಕೆ ತಂದಿದ್ದರೆ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ತಾಲೂಕಿಗೆ ಅಧಿಕಾರಿಗಳ ಹಾಗೂ ಸಿಬ್ಬಂದಿ ಮಂಜೂರು ಹಾಗೂ ವರ್ಗಾವಣೆ ಮಾಡಿಸಿಕೊಂಡು ಬರುತ್ತಿದ್ದೆ. ಅಭಿವೃದ್ಧಿ ಕಾರ್ಯಕ್ಕೆ ಅನುಕೂಲವಾಗುತಿತ್ತು. ಇಷ್ಟು ನಿರ್ಲಕ್ಷ್ಯದಿಂದ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸಬೇಡಿ. ಅದು ನಿಮ್ಮ ಹುದ್ದೆಗೆ ಶೋಭೆ ತರುವುದಿಲ್ಲ ಎಂದರು.
ಜಿಪಂ ಇಲಾಖೆಗೆ 15 ಕೋಟಿಗೂ ಹೆಚ್ಚು ಅನುದಾನ ನೀಡಿದ್ದೇನೆ. ಆ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದಿಂದ ತ್ವರಿತವಾಗಿ ಮುಗಿಸುವಂತೆ ಎಇಇಗೆ ಸೂಚಿಸಿದರು. ತಾಲೂಕಿನ ಬುಡಕುಂಟಿ, ಬಂಡಿಹಾಳ, ಲಗಳೂರು, ಮದ್ಲೂರು ಇನ್ನಿತರ ಗ್ರಾಮಗಳಲ್ಲಿ ಕುಡಿವ ನೀರಿನ ಶುದ್ದೀಕರಣ ಘಟಕಗಳು ಕೆಟ್ಟು ನಿಂತಿದ್ದು, ಅವುಗಳ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ಜಿಪಂ ಎಇಇ ಶಿವುಕುಮಾರ ಹಾಗೂ ಪಿಡಿಒಗಳಿಗೆ ಸೂಚಿಸಿದರು.
ತಾಲೂಕು ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒಗಳು ತಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಿ, ಸರಾಕರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ. ಗ್ರಾಪಂ ಪಿಡಿಒಗಳು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಿ, ಸ್ಥಳೀಯವಾಗಿ ಲಭ್ಯವಿದ್ದು ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.