ಗಂಗಾವತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಮಧ್ಯರಾತ್ರಿಯಿಂದ ಬೆಳಗಿನವರೆಗೂ ಮಾರ್ಕೆಟ್ ಓಪನ್
Team Udayavani, Apr 16, 2020, 5:51 PM IST
ಗಂಗಾವತಿ: ಕೋವಿಡ್-19 ರೋಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಇದ್ದು ಕರ್ಪ್ಯೂ ಹೇರಲಾಗಿದೆ. ಮಾರುಕಟ್ಟೆಯ ಎಲ್ಲಾ ಅಂಗಡಿ ಮುಂಗಟ್ಟಗಳನ್ನು ಸಂಪೂರ್ಣ ಮುಚ್ಚಲಾಗಿದೆ. ಜನರು ಸೇರುವುದರಿಂದ ಜನಸಂದಣಿಯಲ್ಲಿ ಸೋಂಕು ಹರಡುತ್ತದೆ ಎಂಬ ಕಾರಣಕ್ಕೆ ಈ ನಿರ್ಧಾರ ಮಾಡಲಾಗಿದೆ.
ಆದರೆ ಗಂಗಾವತಿಯಲ್ಲಿ ಮಧ್ಯರಾತ್ರಿಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಗಾಂಧಿ ಚೌಕ್, ಮಹಾವೀರ ಸರ್ಕಲ್, ಇಸ್ಲಾಂಪೂರ ಹಾಗು ವಾರದ ಸಂತೆ ಬಯಲು ಪ್ರದೇಶದಲ್ಲಿ ದಿನಸಿ, ಬಟ್ಟೆ, ಮೊಬೈಲ್,ಎಲೆಕ್ಟ್ರಿಕಲ್ ಅಂಗಡಿಗಳು ತೆರೆದು ವ್ಯವಹಾರ ನಡೆಸಲಾಗುತ್ತಿದೆ.
ಪೊಲೀಸರು ರಾತ್ರಿ ಪಹರೆ ಇಲ್ಲದ ವೇಳೆ ಲಾಕ್ ಡೌನ್ ಉಲ್ಲಂಘನೆ ಮಾಡಿ ಇಲ್ಲಿ ವ್ಯಾಪಾರ ನಡೆಸಲಾಗುತ್ತಿದೆ. ಆದರೆ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ, ಸೋಂಕು ಹರಡುವ ಭೀತಿಯ ನಡುವೆ ಇಲ್ಲಿ ವ್ಯಾಪಾರ ವ್ಯವಹಾರ ನಡೆಯುತ್ತಿದೆ.
ಜಿಲ್ಲಾಧಿಕಾರಿ ಹಾಗು ಪೊಲೀಸ್ ಅಧಿಕಾರಿಗಳ ಮುತುವರ್ಜಿಯಿಂದ ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್-19 ವೈರಸ್ ಹರಡದಂತೆ ಜಿಲ್ಲಾಡಳಿತದ ಕೆಲಸ ಸಫಲವಾಗಿದೆ. ಆದರೆ ವ್ಯಾಪಾರದ ಆಸೆಗಾಗಿ ಅಂಗಡಿ ಮಾಲೀಕರ ಮಧ್ಯ ರಾತ್ರಿ ವ್ಯವಹಾರದಿಂದ ಅನಾಹುತ ನಡೆಯುವ ಮೊದಲು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.