ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Team Udayavani, Apr 27, 2024, 6:37 PM IST
ಗಂಗಾವತಿ : ಭಾರತದ ಹಿರಿಮೆ ಗರಿಮೆಯನ್ನು ಹೆಚ್ಚು ಮಾಡಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶವನ್ನು ಬಡತನದಿಂದ ಮುಕ್ತ ಮಾಡಲಿ ಎಂದು ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಅವರು ತಾಲೂಕಿನ ಆನೆಗೊಂದಿ ಹೋಬಳಿ ವ್ಯಾಪ್ತಿಯಲ್ಲಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪರವಾಗಿ ಬಹಿರಂಗ ಪ್ರಚಾರ ಸಮಾರಂಭದಲ್ಲಿ ಮಾತನಾಡಿದರು.
ಭಾರತ ವಿಶ್ವಗುರು ಆಗಲು ನರೇಂದ್ರ ಮೋದಿಯವರು ಕೈಗೊಂಡಿರುವ 10 ಹಲವು ಕಾರ್ಯಕ್ರಮಗಳು ಕಾರಣವಾಗಿವೆ ಭಾರತದ ಸೈನ್ಯದ ಶಕ್ತಿಯನ್ನು ವೃದ್ಧಿ ಮಾಡಿದ್ದಾರೆ ಐಟಿಬಿಟಿ ಸೇರಿದಂತೆ ಹಲವು ಉದ್ಯಮಗಳಲ್ಲಿ ಬೆಳವಣಿಗೆ ಕಂಡಿದೆ ಇದರಿಂದ ಉದ್ಯೋಗ ಸಂಖ್ಯೆ ಹೆಚ್ಚಿದೆ ಬಡತನ ರೇಖೆ ಕಡಿಮೆಯಾಗಿದೆ. ಬಡ ಜನತೆಗೆ ದವಸಧಾನ್ಯ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ರೈತರಿಗೆ ಕಿಸಾನ್ ಸಮ್ಮನ್ ಯೋಜನೆ ಅಡಿ ಪ್ರತಿವರ್ಷ 12,000 ಹಣ ನೀಡಲಾಗುತ್ತಿದೆ.
ಇನ್ನು ಹಲವು ಕಾರ್ಯಕ್ರಮಗಳು ದೇಶದ ಜಾರಿಯಲ್ಲಿ ಲಭ್ಯವಾಗುತ್ತಿದೆ ಆದ್ದರಿಂದ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಲು, ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರದ ಹೆಚ್ಚುವರಿ ಹಣ ತರಲು ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದರು.
ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ ಭಾರತೀಯ ಜನತಾ ಪಾರ್ಟಿ ಬದ್ಧತೆಯ ಪಕ್ಷವಾಗಿದೆ. ದೇಶ ಮತ್ತು ಧರ್ಮದ ಸಂರಕ್ಷಣೆಗಾಗಿ ಮತ್ತೊಮ್ಮೆ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಇತಿಹಾಸ ಪ್ರಸಿದ್ಧ ಅಂಜನಾದ್ರಿ ಬೆಟ್ಟವನ್ನು ಅಭಿವೃದ್ಧಿ ಮಾಡುವ ನೀಲನಕ್ಷೆಯನ್ನು ಬಿಜೆಪಿ ಸರ್ಕಾರದ ಆಡಳಿತದಲ್ಲಿ ರಚನೆ ಮಾಡಲಾಗಿತ್ತು. ಹೆಚ್ಚುವರಿ ಅನುದಾನವನ್ನು ಸಹ ನೀಡಲಾಗಿತ್ತು ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು ಕೊಪ್ಪಳ ಲೋಕಸಭಾ ಕ್ಷೇತ್ರದ ಸಮಸ್ತ ಮತಬಾಂಧವರು ಡಾ. ಬಸವರಾಜ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಡಾ.ಬಸವರಾಜ, ಆನೆಗೊಂದಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಶೇಖರ್, ಆನೆಗೊಂದಿ ರಾಜಮನೆತನದ ರಾಜಾ ಕೃಷ್ಣದೇವರಾಯ, ಚಂದ್ರಶೇಖರ್ ಬತ್ತಾದ್ , ಪ್ರಮುಖರಾದ ವೀರಭದ್ರಪ್ಪ ನಾಯಕ,ಹನುಮಂತಪ್ಪ ನಾಯಕ, ಸಿದ್ರಾಮಸ್ವಾಮಿ, ತಿಪ್ಪೇರುದ್ರಸ್ವಾಮಿ, ರಾಜು ನಾಯಕ, ರುದ್ರೇಶ ಡ್ಯಾಗಿ, ವಿರೂಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರುರೂ, ದುರುಗಪ್ಪ ಆಗೋಲಿ, ಚನ್ನವೀರಗೌಡ ಕೋರಿ, ಹುಲಿಗೆಮ್ಮ ನಾಯಕ, ವಿಜಯ ಪದ್ಮಾ ಸೇರಿದಂತೆ ಉಭಯ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.