ಅರ್ಥಪೂರ್ಣ ಮಹರ್ಷಿ ಜಯಂತಿ
Team Udayavani, Oct 4, 2019, 3:05 PM IST
ಕೊಪ್ಪಳ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದಿಂದ ಅ. 13ರಂದು ಬೆಳಗ್ಗೆ 10ಕ್ಕೆ ನಗರದ ಸಾಹಿತ್ಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಎಡಿಸಿ ಮಾರುತಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷವೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ವರ್ಷರಾಜ್ಯದಲ್ಲಿ ಪ್ರಕೃತಿ ವಿಕೋಪದಿಂದ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ನೆರೆ ಸಂತ್ರಸ್ತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಯಾವುದೇ ರೀತಿಯ ಅದ್ಧೂರಿ ಆಚರಣೆ ಇಲ್ಲದೆ, ಅತ್ಯಂತ ಸರಳವಾಗಿ ಜಯಂತಿ ಆಚರಿಸಲು ನಿರ್ಧರಿಸಲಾಗಿದೆ. ಸರಕಾರ ನೀಡುವ ಅನುದಾನದಲ್ಲಿ ಹಾಗೂ ಸಮುದಾಯದ ಸದಸ್ಯರು ನೀಡುವ ಹಣದಲ್ಲಿ ಆಚರಣೆಯ ನಂತರ ಉಳಿದ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡಬೇಕೆಂಬ ಸಮುದಾಯದ ಮುಖಂಡರ ನಿರ್ಣಯಕ್ಕೆ ಸಮ್ಮತಿಸಿದ ಎಡಿಸಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಗುವುದು ಎಂದರು.
ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಗಣ್ಯರಿಗೆ ಮಹರ್ಷಿ ವಾಲ್ಮೀಕಿ ರಾಮಾಯಣ ಪುಸ್ತಕ ವಿತರಿಸಲಾಗುತ್ತದೆ. ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕೆಂದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ಈಶಪ್ಪ ಆಶಾಪೂರ, ತಹಶೀಲ್ದಾರ್ ಜೆ.ಬಿ. ಮಜಿ, ನಗರ ಪೊಲೀಸ್ ಠಾಣೆಯ ಪಿ.ಐ. ಶಿವಾನಂದವಾಲಿಕಾರ, ಸಮಾಜದ ಮುಖಂಡರಾದ ಸುರೇಶ ಡೊಣ್ಣಿ, ಶರಣಪ್ಪ ನಾಯಕ, ಮಂಜುನಾಥ ಗೊಂಡಬಾಳ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.