ಗವಿಮಠ ಕೋವಿಡ್ ಆಸ್ಪತ್ರೆಗೆ ಸಚಿವ ಬಿ ಸಿ ಪಾಟೀಲ ಭೇಟಿ
Team Udayavani, May 15, 2021, 1:10 PM IST
ಕೊಪ್ಪಳ: ಕೊಪ್ಪಳದ ಶ್ರೀ ಗವಿಮಠ ಆರಂಭಿಸಿದ 100 ಆಕ್ಸಿಜನ್ ಬೆಡ್ ಗಳ ಕೋವಿಡ್ ಆಸ್ಪತ್ರೆಗೆ ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊಪ್ಪಳದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸೋಂಕಿತರ ಆರೈಕೆಗಾಗಿ ಗವಿಮಠವು ಜಿಲ್ಲಾಡಳಿತದ ಸಹಯೋಗದಲ್ಲಿ 100 ಆಕ್ಸಿಜನ್ ಬೆಡ್ ಗಳ ಕೋವಿಡ್ ಆಸ್ಪತ್ರೆ ಆರಂಭ ಮಾಡಿದೆ. ಇದಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಗವಿ ಮಠಕ್ಕೆ ಭೇಟಿ ನೀಡಿ ಸೋಂಕಿತರ ಆರೈಕೆಗೆ ಶ್ರೀಮಠವು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದರು. ಈ ಬೆನ್ನಲ್ಲೇ
ಗವಿಮಠವು 100 ಆಕ್ಸಿಜನ್ ಬೆಡ್ ನ ಕೋವಿಡ್ ಆಸ್ಪತ್ರೆಯನ್ನ ಆರಂಭ ಮಾಡಿತು. ಶನಿವಾರದಂದು 31 ಸೋಂಕಿತರಿಗೆ ಗವಿಮಠದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಯ ಸ್ಥಿತಿಗತಿ ಕುರಿತು ಸಚಿವ ಪಾಟೀಲ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವರಿಗೆ ಡಿಸಿ ವಿಕಾಸ್ ಕಿಶೋರ್ ಅವರು ಆಸ್ಪತ್ರೆಯಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಗಳ ಜೊತೆ ಕೆಲವು ಗಂಟೆ ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.