ಆನೆಗೊಂದಿ ಪ್ರವಾಸೋದ್ಯಮ ಹಿನ್ನಡೆಗೆ ಪ್ರಾಧಿಕಾರದ ಅವೈಜ್ಞಾನಿಕ ನಿಯಮಗಳೇ ಕಾರಣ:ಹಾಲಪ್ಪ ಆಚಾರ್ 

Team Udayavani, Oct 10, 2021, 5:06 PM IST

ಆನೆಗೊಂದಿ ಪ್ರವಾಸೋದ್ಯಮ ಹಿನ್ನಡೆಗೆ ಪ್ರಾಧಿಕಾರದ ಅವೈಜ್ಞಾನಿಕ ನಿಯಮಗಳೇ ಕಾರಣ:ಹಾಲಪ್ಪ ಆಚಾರ್ 

ಗಂಗಾವತಿ: ಗಂಗಾವತಿ ಆನೆಗೊಂದಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರಕಾರ ಶೀಘ್ರ ನೂತನ ಮಾಸ್ಟರ್ ಪ್ಲಾನ್ ಬಿಡುಗಡೆ ಮಾಡಲಿದ್ದು ಅದಕ್ಕೂ ಪೂರ್ವದಲ್ಲಿ ಪ್ರಾಧಿಕಾರ ಮತ್ತು ಎರಡೂ ಜಿಲ್ಲೆಗಳ ಪ್ರಮುಖ ಅಧಿಕಾರಿಗಳ ಸಭೆ ನಡೆಸಿ ನೀತಿ ನಿರೂಪಣೆ ತಯಾರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು .

ಅವರು ತಾಲ್ಲೂಕಿನ ಮುಕ್ಕುಂಪಿ ಹತ್ತಿರ ಸುದ್ದಿಗಾರರ ಜತೆ ಮಾತನಾಡಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಂದರ್ಭದಲ್ಲಿ ಆನೆಗೊಂದಿ ಭಾಗದಲ್ಲಿ ಸ್ಮಾರಕ ಗಳಿಲ್ಲದಿದ್ದರೂ ಆನೆಗೊಂದಿ ಭಾಗದ 15  ಹಳ್ಳಿಗಳನ್ನು ಸೇರ್ಪಡೆ ಮಾಡಿದ್ದು ಅವೈಜ್ಞಾನಿಕವಾಗಿದೆ. ಆನೆಗೊಂದಿ ಭಾಗದಲ್ಲಿ ರಾಜ್ಯ ಪುರಾತತ್ವ ಇಲಾಖೆ ಮತ್ತು ರಾಷ್ಟ್ರೀಯ ಸರ್ವೇಕ್ಷಣಾ ಇಲಾಖೆಯಲ್ಲಿ ಗುರುತಿಸಲ್ಪಟ್ಟ ಒಂದೂ ಸಹ ಸ್ಮಾರಕಗಳೆಲ್ಲಾ ಎಂದು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಹಕ್ಕಿನಲ್ಲಿ ಸ್ಪಷ್ಟಪಡಿಸಿದ್ದಾರೆ .ಆದರೂ ಆದರೂ ಪ್ರಾಧಿಕಾರ ಅವೆಜ್ಞಾನಿಕವಾಗಿ ಆನೆಗೊಂದಿ ಭಾಗವನ್ನು ಗ್ರೀನ್  ಹೊಸಪೇಟೆ ಕಮಲಾಪುರ ಭಾಗವನ್ನ ಕಮರ್ಷಿಯಲ್ ಝೋನ್ ಎಂದು ಪರಿಗಣಿಸಿ ಆನೆಗೊಂದಿ ಭಾಗದಲ್ಲಿ ವ್ಯಾಪಾರ ವಹಿವಾಟಿಗೆ ಅಡ್ಡಿ ಮಾಡಿದೆ .ಆನೆಗೊಂದಿ ಭಾಗದ ಆನೆಗುಂದಿ ಮಲ್ಲಾಪುರ ಸಣಾಪುರ ಸಂಗಾಪೂರ ಭಾಗದ ಗ್ರಾಮಗಳಲ್ಲಿ ಮನೆ ನಿರ್ಮಿಸಲು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರಾಧಿಕಾರದ ನಿಯಮಗಳು ಅಡ್ಡಿಯಾಗಿವೆ ಇಲ್ಲಿ 9+11 ಆಸ್ತಿಯ ಪ್ರಮಾಣ ಪತ್ರ ಕೊಡಲು ಸಹ ಗ್ರಾಮ ಪಂಚಾಯಿತಿಗಳಿಗೆ ಬಹಳ ತೊಂದರೆಯಾಗಿದೆ ಮತ್ತು ಇಲ್ಲಿಯ ಆಸ್ತಿಗಳನ್ನು ಖರೀದಿ ಮಾಡಲು ಮತ್ತು ನೋಂದಣಿ ಮಾಡಲು ಪ್ರಾಧಿಕಾರದ ನಿಯಮಗಳು ಅಡ್ಡಿಯಾಗುತ್ತಿವೆ ಎಂದರು.

ಪ್ರಾಧಿಕಾರ ಪ್ರತಿ ವರ್ಷ ಅನುದಾನವನ್ನು ಹೆಚ್ಚಾಗಿ ಹಂಪಿ ಬಾಯಿಗೆ ಮೀಸಲಿಡುತ್ತಿದೆ ಆನೆಗೊಂದಿ ಭಾಗ ಪ್ರಾಧಿಕಾರ ವ್ಯಾಪ್ತಿಯಲ್ಲಿದ್ದರೂ ಸಹ ಇಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ . ಕಳೆದ ವಾರ ಆನೆಗೊಂದಿ ಭಾಗದ ಗ್ರಾಮಸ್ಥರು ಮತ್ತು ಜನಪ್ರತಿನಿಧಿಗಳು,ವ್ಯಾಪಾರ ವಹಿವಾಟು ನಡೆಸುವವರು  ಪಕ್ಷಾತೀತವಾಗಿ ಎಲ್ಲರೂ  ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ತಮ್ಮ  ನೇತೃತ್ವದಲ್ಲಿ ಬೆಂಗಳೂರಿಗೆ ಆಗಮಿಸಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ಕೂಡಲೇ ಹೊಸ ಮಾಸ್ಟರ್ ಪ್ಲಾನ್ ಬಿಡುಗಡೆ ಮಾಡಬೇಕು. ಸರಳೀಕರಣದ ನಿಯಮಗಳನ್ನು ಜಾರಿ ಮಾಡಿ ಪ್ರತ್ಯೇಕ ಕಿಷ್ಕಿಂದ ಪ್ರಾಧಿಕಾರ ರಚನೆ ಮಾಡಬೇಕು , ಆನೆಗೊಂದಿ ಭಾಗದ ಜನರಿಗೆ 9+11 ಆಸ್ತಿ ಪ್ರಮಾಣಪತ್ರ ವಿತರಣೆಗೆ ಅಡ್ಡಿ ಇರುವ ಕಾನೂನನ್ನು ತಿದ್ದುಪಡಿ ಮಾಡಬೇಕು . ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗವನ್ನು ಕೈಬಿಡಬೇಕೆಂದು ಮನವಿ ಮಾಡಿದರು .

ಇದಕ್ಕೆ ಮುಖ್ಯಮಂತ್ರಿಯವರು ಸ್ಪಂದಿಸಿ ಕೂಡಲೇ ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರಾಧಿಕಾರದ ಅಧಿಕಾರಿಗಳಿಗೆ  ಮಾತನಾಡಿ ನೂತನ ಮಾಸ್ಟರ್ ಪ್ಲಾನ್ ಬರುವ ತನಕ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಸೂಚನೆ ನೀಡಿದ್ದಾರೆ .ಈ ಹಿನ್ನೆಲೆಯಲ್ಲಿ ಶೀಘ್ರವೇ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಮತ್ತು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಪ್ರಾಧಿಕಾರದ ನಿಯಮಗಳು ಮತ್ತು ಇರುವಂತಹ ಗೊಂದಲಗಳ ಬಗ್ಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ ದಡೇಸುಗೂರು ಬಸವರಾಜ, ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್, ಸಿದ್ದರಾಮಸ್ವಾಮಿ ಸೇರಿ ಅನೇಕರಿದ್ದರು

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.