ರಾಜಕೀಯದಿಂದ ನಿವೃತ್ತನಾಗುತ್ತೇನೆ ಹೊರತು, ಕುಷ್ಟಗಿ ವಿಧಾನಸಭಾ ಕ್ಷೇತ್ರ ಬದಲಾವಣೆ ಮಾಡಲಾರೆ; ಶಾಸಕ ಅಮರೇಗೌಡ ಪಾಟೀಲ
Team Udayavani, Dec 3, 2022, 10:38 AM IST
ಕುಷ್ಟಗಿ: ರಾಜಕೀಯದಿಂದ ನಿವೃತ್ತನಾಗುತ್ತೇನೆ ಹೊರತು, ಯಾವುದೇ ಕಾರಣಕ್ಕೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಬದಲಾವಣೆ ಮಾಡಲಾರೆ. ಕುಷ್ಟಗಿಯಿಂದಲೇ ಸ್ಪರ್ಧಿಸುವೆ ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸ್ಪಷ್ಟಪಡಿಸಿದರು.
ಈ ಕುರಿತು ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವೆ, ಕ್ಷೇತ್ರ ಬದಲಾವಣೆ ಮಾಡಲಾರೆ ಎಂದರು.
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರು ರಾಜ್ಯದ ಮುಖ್ಯಮಂತ್ರಿಯಾದವರು, ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಿಯಾದರೂ ಸ್ಪರ್ಧಿಸುವ ವಿಚಾರ ಅವರ ವಿವೇಚನೆಗೆ ಬಿಟ್ಟಿದ್ದು. ಅವರು ಒಂದು ಕ್ಷೇತ್ರ ಅಥವಾ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಬಹುದಾಗಿದೆ.
ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೆ ನಾನು ಹಾರ್ಧಿಕವಾಗಿ ಸ್ವಾಗತಿಸುವೆ ಎಂದರು. ಸಿದ್ದರಾಮಯ್ಯ ಅವರು ತಮ್ಮ ಸ್ಪರ್ಧೆಯ ಬಗ್ಗೆ ಬಿಜೆಪಿ, ಆರ್.ಎಸ್.ಎಸ್ ನವರಿಗೆ ದಾರಿ ತಪ್ಪಿಸುದ್ದಾರೆಯೇ? ಪ್ರಶ್ನೆಗೆ ಪ್ರತಿಕಿಯಿಸಿದ ಶಾಸಕ ಬಯ್ಯಾಪೂರ ಅವರು, ಯಾರಿಗೆ ಯಾರೂ ತಪ್ಪಿಸುವುದಿಲ್ಲ ಎಂದರು.
ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಅರ್ಜಿ ಸಲ್ಲಿಸಿರುವ ಕೆಬಿಜೆಎನ್ ಎಲ್ ನಿವೃತ್ತ ಪ್ರಧಾನ ಇಂಜಿನೀಯರ ಅವರು, ಕುಷ್ಟಗಿ ವಕ್ಕಂದುರ್ಗಾದೇವಿಗೆ ಕಾಯಿ ಮೀಸಲಿಟ್ಟಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಶಾಸಕ ಬಯ್ಯಾಪೂರ ಅವರು, ಇರಬಹುದು ಪ್ರಭಾಕರ್ ಚಿಣಿ ನಮ್ಮ ( ಕಾಂಗ್ರೆಸ್) ಪಕ್ಷದವರು ಅವರೂ ಆಕಾಂಕ್ಷಿ ಎಂದು ಅರ್ಜಿ ಸಲ್ಲಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.