Anjanadri ಹನುಮ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೂಚನೆ
Team Udayavani, Dec 9, 2023, 4:27 PM IST
ಗಂಗಾವತಿ: ಡಿ. 24ರಂದು ಗಂಗಾವತಿ ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುವ ಹನುಮ ಮಾಲಾಧಾರಿಗಳ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಲು ಮೂಲಭೂತ ಸೌಕರ್ಯಗಳು ಸೇರಿ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿನ್ನೆ ಸಂಜೆ ಜರುಗಿದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಹಿಂದುಗಳ ಪವಿತ್ರ ಕ್ಷೇತ್ರವಾದ ಅಂಜನಾದ್ರಿ ಬೆಟ್ಟಕ್ಕೆ ನಾಡಿನ ವಿವಿಧ ಜಿಲ್ಲೆಗಳಿಂದ ಹನುಮ ಮಾಲಾ ವಿಸರ್ಜನೆಗಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಉಪಹಾರ,ಊಟ ಸೇರಿದಂತೆ ಸಂಚಾರದಟ್ಟಣೆ, ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು, ನಾಡಿನ ವಿವಿಧ ಜಿಲ್ಲೆಗಳಿಂದ ವಾಹನಗಳಲ್ಲಿ ಆಗಮಿಸುವ ಭಕ್ತಾದಿಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ, ಸ್ನಾನ ಘಟ್ಟಗಳನ್ನು ನಿರ್ಮಿಸಬೇಕು ಹಾಗೂ ಅನ್ನಪ್ರಸಾದಕ್ಕಾಗಿ ಬೆಟ್ಟದ ಎಡ ಭಾಗದಲ್ಲಿ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ವ್ಯವಸ್ಥೆ ಮಾಡವ ಕುರಿತಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.