ಮೋದಿ,ರಾಹುಲ್ ಗಾಂಧಿ ವಿದೂಷಕರಿದ್ದಂತೆ:ಎಚ್‌ಡಿಕೆ
Team Udayavani, May 6, 2018, 7:15 AM IST
ಕೊಪ್ಪಳ: “ಪ್ರಧಾನಿ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಪದೇಪದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರೆಲ್ಲ ವಿದೂಷಕರಿದ್ದಂತೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕುಟುಕಿದರು.
ಕುಕನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಇವರೆಲ್ಲ ರಾಜ್ಯಕ್ಕೆ ಬಂದು ನಾಲ್ಕಾರು ಇತಿಹಾಸಕಾರರ ಹೆಸರು ಹೇಳಿದ ತಕ್ಷಣ ಜನ ಇವರನ್ನು ಒಪ್ಪಲ್ಲ. ಇವರೆಲ್ಲ ಸೀಜನ್ ರಾಜಕಾರಣಿಗಳು. ಇಬ್ಬರೂ ವಿದೂಷಕ ರಂತಿ ದ್ದಾರೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಇವರಿಗೆ ಗೊತ್ತಿಲ್ಲ. ದೇವೇಗೌಡರನ್ನು ಹೊಗಳಿದ ಮೋದಿ, ಜೆಡಿಎಸ್ 3ನೇ ಸ್ಥಾನಕ್ಕೆ ಬರುತ್ತೆ ಮತ ಹಾಕಬೇಡಿ ಎಂದಿರುವ ಕುರಿತು ಅವರನ್ನೇ ಕೇಳಬೇಕು. ಮೇ 12ರಂದು ಮತದಾರ ಎಲ್ಲರ ಹಣೆಬರಹ ಬರೆಯಲಿದ್ದಾರೆ ಎಂದರು.
ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಚಿತ್ರನಟರನ್ನು ಕರೆತಂದು ಪ್ರಚಾರ ಶುರು ಮಾಡಿದ್ದಾರೆ. ಚಿತ್ರನಟರು ದುಡ್ಡು ಕೊಟ್ಟರೆ ಯಾವ ಪಕ್ಷದ ಪರವಾದರೂ ಪ್ರಚಾರ ಮಾಡಬಲ್ಲರು. ಚಿತ್ರನಟರು ಪ್ರಚಾರ ಮಾಡಿದ ತಕ್ಷಣ ಯಾರೂ ಓಟು ಹಾಕಲ್ಲ. 2013ರ ಚುನಾವಣೆ ವೇಳೆ ನಟ ಚಿರಂಜೀವಿ ಕೆಲ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರು. ಆದರೆ ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.