ಮನೆ ಬಾಗಿಲಿಗೆ ಬಂದ ಅಧಿಕಾರಿಗಳು

ಮಹ್ಮದ್‌ ನಗರದಲ್ಲಿ ಕೊಪ್ಪಳ ತಹಶೀಲ್ದಾರ್‌ ಗ್ರಾಮ ವಾಸ್ತವ್ಯ! ­ಅಧಿಕಾರಿಗಳ ಮುಂದೆ ಸಮಸ್ಯೆಗಳ ಸರಮಾಲೆ

Team Udayavani, Mar 21, 2021, 9:11 PM IST

fghjd

ಕೊಪ್ಪಳ: ತಾಲೂಕಿನ ಮಹ್ಮದ ನಗರದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮದಡಿ ಕೊಪ್ಪಳ ತಹಶೀಲ್ದಾರ್‌ ಅಮರೇಶ ಬಿರಾದಾರ್‌ ಅವರು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರ ಸಮಸ್ಯೆ ಆಲಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಕಾರ್ಯಕ್ರಮ ಉದ್ಘಾಟಿಸಿದರೆ, ಮುಖಂಡರಾದ ರೂಪ್ಲಾನಾಯ್ಕ, ಹನುಮಂತರೆಡ್ಡಿ, ಮಾಜಿ ಅಧ್ಯಕ್ಷ ಟಿ. ಜನಾರ್ದನ ಅವರು, ಗ್ರಾಮದ ಹಲವು ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ಗ್ರಾಮದಲ್ಲಿ ಮೂರು ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅವುಗಳಲ್ಲಿ ನೀರು ಬರುತ್ತಿಲ್ಲ. ಜೆಜೆಎಂ ಯೋಜನೆಯಡಿ 50 ಕುಟುಂಬಕ್ಕೆ 10 ಲಕ್ಷ ವೆಚ್ಚದಲ್ಲಿ ಕಾಮಗಾರಿ ನಿರ್ವಹಣೆ ಮಾಡಿದ್ದು, ಇಲ್ಲಿಯವರಿಗೆ ನೀರು ಪೂರೈಕೆಯಾಗಿಲ್ಲ. 200ಕ್ಕೂ ಹೆಚ್ಚು ಮನೆಗಳನ್ನು ಹೊಂದಿರುವ ಗ್ರಾಮದಲ್ಲಿ ಗಾಂಠಾಣವಿಲ್ಲ. ಗ್ರಾಪಂನಲ್ಲಿ ಫಾರಂ ನಂಬರ್‌ 9, 11ಎ ಕೊಡುತ್ತಿಲ್ಲ ಎಂದು ತಹಶೀಲ್ದಾರ್‌ ಗಮನಕ್ಕೆ ತಂದರು.

ಜೊತೆಗೆ ಶಾಲೆ, ಸ್ಮಶಾನ, ಖಬರಸ್ತಾನ್‌ ಗಳ ಡಾಕಿಮೆಂಟೇಶನ್‌ ಮಾಡಿಕೊಡುವುದು. ಮಹ್ಮದ್‌ ನಗರ ಸರ್ವೇ ನಂಬರ್‌ನಲ್ಲಿ ಬರುವ ಹೊಲಗದ್ದೆಗಳ ಸರ್ವೆ ನಂಬರ್‌ ತಿದ್ದುಪಡಿ ಮಾಡಬೇಕಿದೆ. ಇದರಿಂದ ರೈತರು ಸೌಲಭ್ಯ ವಂಚಿತರಾಗಿದ್ದಾರೆ. ಈ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯವಿಲ್ಲ. ಗ್ರಾಪಂನಲ್ಲಿ ನರೇಗಾ ಕೆಲಸ ಕೊಡುತ್ತಿಲ್ಲ. ಕಳೆದ ವರ್ಷದ ಬಾಕಿ ಹಣ ಬಂದಿಲ್ಲ ಎಂದು ಅಧಿಕಾರಿಗಳ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ತಹಶೀಲ್ದಾರ್‌ ಅಮರೇಶ ಬಿರಾದಾರ್‌, ಆದ್ಯತೆ ಮೇರೆಗೆ ಪ್ರತಿಯೊಂದು ಸಮಸ್ಯೆ ಬಗೆ ಹರಿಸಲಾಗುವುದು.

ಗ್ರಾಮದ ಜನರಿಗಾಗಿ ವಿವಿಧ ಇಲಾಖೆಗಳ ಕೌಂಟರ್‌ ಆರಂಭಿಸಲಾಗಿದೆ. ಅಲ್ಲಿ ಜನರು ತಮ್ಮ ಸಮಸ್ಯೆ ಕುರಿತಂತೆ ಅರ್ಜಿ ಕೊಡಬಹುದು ಎಂದರು. ತಾಲೂಕು ಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು. ಗ್ರಾಮಸ್ಥರು ತಮಗೆ ಸಂಬಂಧಿ ಸಿದ ಅರ್ಜಿಗಳನ್ನು ವಿವಿಧ ಕೌಂಟರ್‌ ನಲ್ಲಿ ಸಲ್ಲಿಸಿ ಪರಿಹಾರದ ನಿರೀಕ್ಷೆಯಲ್ಲಿದ್ದರು. ಕೋವಿಡ್‌ ಲಸಿಕೆ ಹಾಕಲು ಹಿಟ್ನಾಳ್‌ ಆರೋಗ್ಯ ಕೇಂದ್ರಕ್ಕೆ ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರಾಜು, ಜಿಪಂ ಮಾಜಿ ಅಧ್ಯಕ್ಷ ಟಿ. ಜನರ್ದನ, ಗ್ರಾಪಂ ಅಧ್ಯಕ್ಷೆ ರೇಖಾ ಬಸವರಾಜ, ಉಪಾಧ್ಯಕ್ಷ ಸಂತೋಷಬಾಯಿ, ಸದಸ್ಯರಾದ ವೆಂಕಟೇಶ, ಅಂದಿಗಾಲಪ್ಪ, ಮರಿಯಮ್ಮ, ಹುಲಿಗೆಮ್ಮ, ಯಮನೂರಪ್ಪ, ಮುಖಂಡರಾದ ರೂಪ್ಲಾ ನಾಯ್ಕ, ಹನುಮಂತರೆಡ್ಡಿ, ಸಿದ್ಧಿಬಾಷ ಗೊರೆಬಾಳ, ಶಿವಕುಮಾರ್‌, ಶಿರಸ್ತೇದಾರ್‌ ರೇಖಾ ದಿಕ್ಷೀತ್‌, ಬಿಇಒ ಉಮೇಶ ಪೂಜಾರ, ಎಇಇ ಭರತ್‌ ನಾಯಕ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.