ಪಕ್ಷಾಂತರ ನಿಯಮದಂತೆ ಬಿಜೆಪಿ ನಗರಸಭಾ ಸದಸ್ಯೆ ಸುಧಾ ಸೋಮನಾಥ್ ಸದಸ್ಯತ್ವ ರದ್ದು
Team Udayavani, May 11, 2022, 7:18 PM IST
ಗಂಗಾವತಿ: ನಗರಸಭೆಯ 26 ನೇ ವಾರ್ಡಿನ ಸದಸ್ಯೆ ಸುಧಾ ಸೋಮನಾಥ್ ಸದಸ್ಯತ್ವವನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳಕರ್ ಆದೇಶ ಮಾಡಿದ್ದಾರೆ.
ಭಾರತೀಯ ಜನತಾ ಪಾರ್ಟಿಯಿಂದ ಗೆದ್ದು ನಗರಸಭೆ ಸದಸ್ಯೆಯಾಗಿದ್ದ ಸುಧಾ ಸೋಮನಾಥ್ ನಗರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಗೈರಾಗಿದ್ದರು. ಇದರ ವಿರುದ್ಧ ಭಾರತೀಯ ಜನತಾ ಪಾರ್ಟಿಯವರು ಜಿಲ್ಲಾಧಿಕಾರಿಗಳಿಗೆ ಸುಧಾ ಸೋಮನಾಥ್ ಇವರ ಸದಸ್ಯತ್ವ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಜಿಲ್ಲಾಧಿಕಾರಿಗಳು ಸುಧೀರ್ಘ ವಿಚಾರಣೆ ನಡೆಸಿ ಎರಡೂ ಕಡೆಯವರ ವಾದವನ್ನು ಆಲಿಸಿ ಸಾಕ್ಷ್ಯಗಳನ್ನು ಪರಿಶೀಲಿಸಿ ಮೇ 10 ರಂದು ತೀರ್ಪು ನೀಡಿ ಸುಧಾ ಅವರ ನಗರ ಸಭೆಯ ಸದಸ್ಯತ್ವವನ್ನು ಅನೂರ್ಜಿತಗೊಳಿಸಿ ಆದೇಶ ಮಾಡಿದ್ದಾರೆ .
ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಭಾರತೀಯ ಜನತಾ ಪಾರ್ಟಿಯಿಂದ ಜಯಶ್ರೀ ಸಿದ್ದಪುರ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಮಾಲಾಶ್ರೀ ಸ್ಪರ್ಧೆ ಮಾಡಿದ್ದರು. ಚುನಾವಣೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿಯಿಂದ ಸುಧಾ ಅವರಿಗೆ ವಿಪ್ ಜಾರಿ ಮಾಡಲಾಗಿತ್ತು. ವಿಪ್ ನ್ನು ಸ್ವೀಕರಿಸದೆ ಚುನಾವಣೆಯಲ್ಲಿ ಗೈರಾಗುವ ಮೂಲಕ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಸುಧಾ ಅವರನ್ನು ಸದಸ್ಯತ್ವ ರದ್ದು ಮಾಡುವಂತೆ ಭಾರತೀಯ ಜನತಾ ಪಾರ್ಟಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿತ್ತು.
ಇದೀಗ ವಿಚಾರಣೆ ನಡೆದು ಜಿಲ್ಲಾಧಿಕಾರಿಗಳು ಸುಧಾ ಅವರ ಸದಸ್ಯತ್ವವನ್ನು ರದ್ದು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.