ಮೈಲಾಪುರ: ಮಕ್ಕಳ ಗ್ರಾಮಸಭೆ
Team Udayavani, Dec 16, 2019, 4:05 PM IST
ಕಾರಟಗಿ: ತಾಲೂಕಿನ ಮೈಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಕ್ಕಳ ಹಕ್ಕುಗಳ ಗ್ರಾಮಸಭೆಯನ್ನು ಗ್ರಾಪಂ ವ್ಯಾಪ್ತಿಯ ಸೋಮನಾಳ ಗ್ರಾಮದ ಡಾ| ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಗ್ರಾಮಸಭೆಗೆ ಶಾಲಾ ವಿದ್ಯಾರ್ಥಿಗಳು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಉಪಸ್ಥಿತರಿದ್ದ ಪಂಚಾಯತ್ ವ್ಯಾಪ್ತಿಯಲ್ಲಿನ ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಶಾಲೆಗಳಲ್ಲಿನ ಕುಂದು-ಕೊರತೆಗಳನ್ನು ಅಧಿಕಾರಿಗಳ, ಪಂಚಾಯತ್ ಸದಸ್ಯರ ಹಾಗೂ ಅಧಿ ಕಾರಿಗಳ ಗಮನಕ್ಕೆ ತಂದರು. ತಮ್ಮ ಶಾಲೆಗಳಲ್ಲಿನ ಶೌಚಾಲಯದ ಕೊರತೆ, ಕೊಠಡಿ ಹಾಗೂ ಶಿಕ್ಷಕರ ಕೊರತೆಯನ್ನು ಗಮನಕ್ಕೆ ತಂದಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷೆ ದೇವಮ್ಮ ಹುಲುಗಪ್ಪ, ಪಿಡಿಒ ಮಲ್ಲಿಕಾರ್ಜುನ ಕಡಿವಾಳವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿ, ಶಾಲೆ ಸಮಸ್ಯೆಗಳನ್ನು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತಂದು ಪರಿಹರಿಸುವ ಭರವಸೆ ನೀಡಿದರು. ಪಿಡಿಒ ಮಲ್ಲಿಕಾರ್ಜುನ ಕಡಿವಾಳ ಪ್ರಾಸ್ತಾವಿಕ ಮಾತನಾಡಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯೆ ಶೋಭಾ ಬಸವರಾಜ, ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.