ಸೌದಿ ಅರೇಬಿಯಾದಿಂದ ವಾಪಾಸ್ಸಾಗಿದ್ದ ಕೊಪ್ಪಳದ ವ್ಯಕ್ತಿಯಲ್ಲಿ ಕೋವಿಡ್ -19 ಸೋಂಕಿಲ್ಲ
Team Udayavani, Mar 21, 2020, 3:35 PM IST
ಕೊಪ್ಪಳ: ಕಳೆದ ಫೆ.29 ರಂದು ಸೌದಿ ಅರೇಬಿಯಾದಿಂದ ಜಿಲ್ಲೆಯ ಗಂಗಾವತಿಗೆ ಆಗಮಿಸಿದ್ದ ವ್ಯಕ್ತಿಯ ದೇಹದಲ್ಲಿ ಕೋವಿಡ್-19 ವೈರಸ್ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟ ಪಡಿಸಿದೆ.
ಫೆ.29 ರಂದು ಗಂಗಾವತಿಯ ನಿವಾಸಿ ಸೌದಿ ಅರೇಬಿಯಾದಿಂದ ಆಗಮಿಸಿ, ರಾಯಚೂರು, ಲಿಂಗಸೂರು, ಬಾಗಲಕೋಟ ಭಾಗದಲ್ಲಿ ಸಂಚಾರ ಮಾಡಿದ್ದನು. ಈ ಮಾಹಿತಿ ಜಿಲ್ಲಾಡಳಿತಕ್ಕೆ ತಿಳಿದ ತಕ್ಷಣ ಆತನನ್ನು ಜಿಲ್ಲಾ ಆಸ್ಪತ್ರೆಯ ಐಸೋಲೇಟೆಡ್ ವಾರ್ಡನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಜೊತೆಗೆ ಆತನ ಕಫ ಮಾದರಿಯನ್ನು ಪಡೆದು ಕೋವಿಡ್-19 ಸೋಂಕು ಇರುವ ಕುರಿತು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಜಿಲ್ಲಾಡಳಿತ ಈ ವ್ಯಕ್ತಿಯನ್ನು ಸೋಂಕಿತ ಎಂದು ಪರಿಗಣಿಸಿತ್ತು. ವರದಿಯಲ್ಲಿ ನೆಗಟಿವ್ ಎಂದು ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಅಲ್ಲದೆ, ವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ವರೆಗೂ 35 ಜನರ ಮೇಲೆ ನಿಗಾ ಇರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.